ಬೆಂಗಳೂರು: ಕಿಡ್ನ್ಯಾಪ್ (Kidnap) ಕೇಸ್‌ನಲ್ಲಿ ಜೈಲು ಪಾಲಾಗಿರುವ ಜೆಡಿಎಸ್ (JDS) ಶಾಸಕ ಹೆಚ್‌ಡಿ ರೇವಣ್ಣ (HD.Revanna) ಜೈಲು ಸೇರಿ ಇಂದಿಗೆ ಎರಡು ದಿನವಾಗಿದೆ. ಇದೀಗ ಅವರ ಆಪ್ತರು ಮತ್ತು ಕುಟುಂಬಸ್ಥರಿಗೆ(Friends and Family) ಭೇಟಿಯಾಗಲು ಅವಕಾಶವಿಲ್ಲ.
ಪರಪ್ಪನ ಅಗ್ರಹಾರ (Parappana Agrahahara) ಜೈಲಿನಲ್ಲಿ ರೇವಣ್ಣ ಚಡಪಡಿಸುತ್ತಿದ್ದಾರೆ. ರಾತ್ರಿ ನಿದ್ರೆ ಇಲ್ಲದೆಯೇ ಹೈರಾಣಾಗಿದ್ದಾರೆ. ಇದರ ಮಧ್ಯೆ ರೇವಣ್ಣಗೆ ಮತ್ತೊಂದು ಶಾಕ್ ಎದುರಾಗಿದೆ. ಇಂದಿನಿಂದ ಮೂರು ದಿನ ಸರ್ಕಾರಿ ರಜೆ ಹಿನ್ನೆಲೆ ಆಪ್ತರು, ಕುಟುಂಬಸ್ಥರಿಗೆ ರೇವಣ್ಣ ಭೇಟಿಗೆ ಅವಕಾಶವಿಲ್ಲ. ಆಪ್ತರ ಭೇಟಿಯಿಂದ ತನ್ನ ದುಗುಡ ಹೇಳಿಕೊಳ್ಳುತ್ತಿದ್ದರು. ಆ ಮೂಲಕ ಮನಸ್ಸು ಹಗುರ ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಅದಕ್ಕೂ ಸರ್ಕಾರಿ ರಜೆ ಅಡ್ಡಿಯಾಗಿದೆ. ಇದನ್ನೂ ಓದಿ: ಸಂಸದ ಪ್ರಜ್ವಲ್ ರೇವಣ್ಣಗೆ ಹೆಚ್ಚಿದ ಸಂಕಷ್ಟ, ದಾಖಲಾಯ್ತು ಮತ್ತೊಂದು ಅತ್ಯಾಚಾರ ಕೇಸ್
ಬೆಂಗಳೂರಿನ ಬಸವನಗುಡಿಯಲ್ಲಿರುವ ಹೆಚ್.ಡಿ.ರೇವಣ್ಣ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಎಸ್‌ಐಟಿ ಅಧಿಕಾರಿಗಳಿಂದ ಪಂಚನಾಮೆ ಸಾಧ್ಯತೆ ಹಿನ್ನೆಲೆ ಅಗತ್ಯವಿರುವ ಪರಿಕರಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ. ಹೀಗಾಗಿ ಭದ್ರತೆ ನೀಡಲಾಗಿದೆ. ಇದನ್ನೂ ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಜಾಮೀನು ನಿರೀಕ್ಷೆಯಲ್ಲಿದ್ದ ಹೆಚ್.ಡಿ.ರೇವಣ್ಣಗೆ ರಿಲೀಫ್ ಸಿಕ್ಕಿಲ್ಲ. ಜಾಮೀನು ಅರ್ಜಿ ವಿಚಾರಣೆಯನ್ನ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಇದರಿಂದಾಗಿ ಕಂಗಾಲಾಗಿರುವ ಹೆಚ್.ಡಿ.ರೇವಣ್ಣ ಮತ್ತಷ್ಟು ಟೆನ್ಷನ್?ಗೆ ಒಳಗಾಗಿದ್ದಾರೆ. ಬೇಲ್ ಸಿಗದ್ದಕ್ಕೆ ರೇವಣ್ಣ ಮತ್ತಷ್ಟು ಮಂಕಾಗಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಕೊನೆಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

