By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಂಡೀಪುರದಲ್ಲಿ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸಂಪೂರ್ಣ ಸನ್ನದ್ಧ!
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - ಬಂಡೀಪುರದಲ್ಲಿ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸಂಪೂರ್ಣ ಸನ್ನದ್ಧ!

Latestಚಾಮರಾಜನಗರ-Chamarajanagaraರಾಜ್ಯ-Karnataka

ಬಂಡೀಪುರದಲ್ಲಿ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸಂಪೂರ್ಣ ಸನ್ನದ್ಧ!

Forest Department is fully prepared to prevent forest fires in Bandipur!

Published January 13, 2025
Share
4 Min Read
Bandipur
SHARE

ಚಾಮರಾಜನಗರ, ಜ. 13: ಬೇಸಿಗೆ ಬರುತ್ತಿದ್ದಂತೆಯೇ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅರಣ್ಯದಲ್ಲಿ ಎಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಅನಾಹುತ ಸೃಷ್ಟಿ ಮಾಡಿ ಬಿಡುತ್ತದೆಯೋ ಎಂಬ ಭಯ ಕಾಡಲಾರಂಭಿಸುತ್ತದೆ. ಕಳೆದ ಕೆಲವು ವರ್ಷಗಳ ಹಿಂದೆ ಸಂಭವಿಸಿದ ದುರಂತಗಳೆಲ್ಲವೂ ಕಣ್ಮುಂದೆ ಹಾದು ಹೋದ ಅನುಭವವಾಗಿ ಬಿಡುತ್ತದೆ. ಹೀಗಾಗಿ ಬೇಸಿಗೆ ಆರಂಭದ ಮೊದಲೇ ಕಾಡ್ಗಿಚ್ಚು ತಡೆಗೆ ಏನೆಲ್ಲ ಕ್ರಮಗಳನ್ನು ಕೈಗೊಳ್ಳಬಹುದೋ? ಅದೆಲ್ಲವನ್ನು ಕೈಗೊಳ್ಳಲು ಈಗಿನಿಂದಲೇ ಅಧಿಕಾರಿಗಳು ಮುಂದಾಗಿದ್ದಾರೆ.

ಅರಣ್ಯದಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳುವುದು ಹಿಂದಿನಿಂದಲೂ ನಡೆಯುತ್ತಾ ಬಂದಿದೆ. ಇದರಿಂದ ಅರಣ್ಯ ನಾಶ, ಪ್ರಾಣಿಪಕ್ಷಿಗಳ ದಹನ ಮಾತ್ರವಲ್ಲದೆ ಕಾಡ್ಗಿಚ್ಚು ಆರಿಸಲು ಹೋಗಿ ಅರಣ್ಯ ಇಲಾಖೆ ಸಿಬ್ಬಂದಿ ಜೀವಂತ ದಹನವಾಗಿರುವ ನಿದರ್ಶನಗಳು ನಮ್ಮ ಮುಂದಿವೆ. ಹೀಗಾಗಿಯೇ ಕಳೆದ ಕೆಲವು ವರ್ಷಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳು ಬೇಸಿಗೆಗೆ ಮುನ್ನವೇ ಕಾಡ್ಗಿಚ್ಚು ತಡೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅಗ್ನಿ ಅನಾಹುತ ತಡೆಗೆ ಟೊಂಕ ಕಟ್ಟಿ ನಿಲ್ಲುತ್ತಿರುವುದು ಕಂಡು ಬರುತ್ತಿದೆ.

ಹಾಗೆನೋಡಿದರೆ ಬಂಡೀಪುರ ಅರಣ್ಯವನ್ನು ಕಾಡ್ಗಿಚ್ಚಿನಿಂದ ತಡೆಯುವುದು ಅಷ್ಟು ಸುಲಭವೇನಲ್ಲ. ಆದರೂ ಅಧಿಕಾರಿಗಳು ಸವಾಲ್ ಆಗಿ ತೆಗೆದುಕೊಂಡು ಕಾರ್ಯ ನಿರ್ವಹಿಸುತ್ತಿದ್ದಾರೆ. ಕಳೆದ ಬಾರಿ ಅಗ್ನಿ ಅನಾಹುತಗಳಿಗೆ ಎಡೆ ಮಾಡದಂತೆ ಕಣ್ಣಿಟ್ಟು ನೋಡಿಕೊಂಡಿದ್ದಾರೆ. ಅದರಂತೆ ಈ ಬಾರಿಯೂ ಯಾವುದೇ ಅನಾಹುತಕ್ಕೆ ಎಡೆ ಮಾಡಿಕೊಡಬಾರದು ಎಂಬ ಉದ್ದೇಶದಿಂದ ಈಗಿನಿಂದಲೇ ರಸ್ತೆಗೆ ಹೊಂದಿಕೊಂಡಂತಿರುವ ಅರಣ್ಯ ಸೇರಿದಂತೆ ಗಡಿಭಾಗಗಳಲ್ಲಿ ಬೆಂಕಿ ನಿಯಂತ್ರಣ ರೇಖೆಯನ್ನು ನಿರ್ಮಿಸಲಾಗುತ್ತಿದೆ.

ರಸ್ತೆಯ ಆಸುಪಾಸಿನಲ್ಲಿರುವ ಕುರುಚಲು ಕಾಡನ್ನು ಕಡಿದು ಅದನ್ನು ಸುಡುವ ಮೂಲಕ ಅಪ್ಪಿ ತಪ್ಪಿ ರಸ್ತೆ ಬದಿಗೆ ಬಿದ್ದ ಬೆಂಕಿ ಅರಣ್ಯದೊಳಗೆ ಹೋಗದಂತೆ ತಡೆಯುವ ಕೆಲಸವನ್ನು ಮಾಡಲಾಗುತ್ತಿದೆ. ಬೆಂಕಿ ನಿಯಂತ್ರಣ ರೇಖೆ ನಿರ್ಮಾಣದಿಂದ ಯಾರಾದರೂ ಸಿಗರೇಟು, ಬೀಡಿ ಸೇದಿ ಎಸೆದರೂ ಅದರಿಂದ ಬೆಂಕಿ ಹೊತ್ತಿಕೊಳ್ಳುವುದನ್ನು ತಡೆಯಲು ಸಾಧ್ಯವಾಗಲಿದೆ. ಇದೊಂದು ಪ್ರಮುಖ ಕ್ರಮವಾಗಿದ್ದು, ಸಾಮಾನ್ಯವಾಗಿ ಎಲ್ಲ ಅರಣ್ಯಗಳಲ್ಲಿ ಇದನ್ನು ಮಾಡಲಾಗುತ್ತಿದೆ
.
ಬಂಡೀಪುರ ಅರಣ್ಯವು ತಮಿಳುನಾಡು ಮತ್ತು ಕೇರಳದೊಂದಿಗೆ ಗಡಿಯನ್ನು ಹಂಚಿಕೊಂಡಿದ್ದು, ಜೊತೆಗೆ ಅರಣ್ಯದ ನಡುವೆ ಹೆದ್ದಾರಿಯೂ ಹಾದು ಹೋಗಿದೆ. ಹೀಗಾಗಿ ತುಂಬಾ ಎಚ್ಚರಿಕೆ ವಹಿಸಿ ಅರಣ್ಯವನ್ನು ಅಗ್ನಿ ಅವಘಡದಿಂದ ರಕ್ಷಿಸಬೇಕಾಗಿದೆ. ಸದ್ಯ ಅರಣ್ಯ ಇಲಾಖೆಯಿಂದ ಬೆಂಕಿ ನಿಯಂತ್ರಣ ರೇಖೆ ನಿರ್ಮಿಸುವ ಕಾರ್ಯ ಸಮಾರೋಪಾದಿಯಲ್ಲಿ ಸಾಗಿದ್ದು, ಇದೀಗ ಸುಮಾರು ಶೇ.80ರಷ್ಟು ಬೆಂಕಿ ನಿಯಂತ್ರಣ ರೇಖೆಯನ್ನು ನಿರ್ಮಿಸಿರುವುದು ವಿಶೇಷವಾಗಿದೆ.

2650 ಚದರ ಕಿ.ಮೀ ಬೆಂಕಿ ತಡೆ ರೇಖೆ
ಬಂಡೀಪುರ ರಾಷ್ಟ್ರೀಯ ಉದ್ಯಾನವನ ಹಾಗೂ ಹುಲಿ ಸಂರಕ್ಷಿತ ಪ್ರದೇಶದಲ್ಲಿನ 13 ವಲಯದಲ್ಲಿ ಸುಮಾರು 2650 ಚದರ ಕಿಲೋ ಮೀಟರ್ ನಷ್ಟು ಬೆಂಕಿ ನಿಯಂತ್ರಣ ರೇಖೆಯನ್ನು ನಿರ್ಮಿಸಲಾಗುತ್ತಿದೆ. ಇದನ್ನು ರಾಷ್ಟ್ರೀಯ ಹೆದ್ದಾರಿ, ಟೈಗರ್ ಹಾಗೂ ವಾಟರ್ ರಸ್ತೆಗಳಲ್ಲಿ 10 ರಿಂದ 20 ಮೀಟರ್ ತನಕ ಮಾಡಲಾಗುತ್ತಿದೆ. ಇಷ್ಟೇ ಅಲ್ಲದೆ ಸೂಕ್ಷ್ಮ ಪ್ರದೇಶಗಳಲ್ಲಿಯೂ ನಿಗಾವಹಿಸಲಾಗಿದೆ.

ಬೆಂಕಿ ನಿಯಂತ್ರಣ ರೇಖೆ ಕುರಿತಂತೆ ಮಾಹಿತಿ ನೀಡಿರುವ ಬಂಡೀಪುರದ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಪ್ರಭಾಕರನ್ ಅವರು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಹಕಾರದಲ್ಲಿ ಬೆಂಕಿ ತಡೆಗೆ ಸರ್ವ ರೀತಿಯಲ್ಲಿ ಸಿದ್ಧತೆಯನ್ನು ಮತ್ತು ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸದ್ಯ ಬೆಂಕಿ ನಿಯಂತ್ರಣ ರೇಖೆಗೆ ಸಂಬಂಧಿಸಿದಂತೆ ಕುರುಚಲು ಕಾಡು ಕಡಿದು ಅದನ್ನು ಸುಡುವ ಕೆಲಸ ಶೇ.80ರಷ್ಟು ಮುಗಿದಿದೆ ಎಂದು ಹೇಳಿದ್ದಾರೆ.

450 ಫೈರ್ ವಾಚರ್‌ಗಳ ನೇಮಕ
ಇಷ್ಟೇ ಅಲ್ಲದೆ, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೆಂಕಿ ಬೀಳದಂತೆ ಅರಣ್ಯ ಇಲಾಖೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಕಾಡಂಚಿನ ಗ್ರಾಮಗಳ ರೈತರು ಜಮೀನಿನಲ್ಲಿ ಬೆಂಕಿ ಹಾಕುವಾಗ ಮುನ್ನಚ್ಚರಿಕೆ ಇರಲಿ. ಕಾಡು ಹಾಗೂ ಪ್ರಾಣಿಗಳ ಸಂರಕ್ಷಣೆಗೆ ರೈತರು, ಸಾರ್ವಜನಿಕರ ಸಹಕಾರ ಇಲಾಖೆ ಮೇಲಿರಲಿ ಎಂದು ಮನವಿಯನ್ನು ಕೂಡ ಮಾಡಿದ್ದಾರೆ. ಇದರ ಜತೆಗೆ ಅರಣ್ಯ ಪ್ರದೇಶದಲ್ಲಿ ವನ್ಯಪ್ರಾಣಿಗಳಿಗೆ ನೀರಿನ ವ್ಯವಸ್ಥೆ ಮಾಡುವುದು, ಸೋಲಾರ್ ಬೋರ್ ವೆಲ್ ಗಳ ತಪಾಸಣೆ ನಡೆಸಿ ಕೆರೆಕಟ್ಟೆಗಳಿಗೆ ನೀರು ತುಂಬಿಸಲಾಗುತ್ತದೆ ಎಂದು ಹೇಳಿದ್ದಾರೆ.

ಇಷ್ಟೇ ಅಲ್ಲದೆ ಬೇಸಿಗೆಯ ದಿನಗಳಲ್ಲಿ ಅಗ್ನಿಅವಘಡಗಳು ಸಂಭವಿಸದಂತೆ ನೋಡಿಕೊಳ್ಳುವ ಸಲುವಾಗಿ ಕಾವಲಿಗೆ ಅರಣ್ಯದಲ್ಲಿ 450 ಫೈರ್ ವಾಚರ್ ಗಳನ್ನು ನೇಮಕ ಮಾಡುವ ಕಾರ್ಯವೂ ನಡೆಯಲಿದೆ. ಅರಣ್ಯದ 13 ವಲಯಗಳಲ್ಲಿ ಸಂಚರಿಸುತ್ತಾ ಪರಿಶೀಲನೆ ನಡೆಸಲು ಒಂದು ಅಥವಾ ಎರಡು ಹೆಚ್ಚುವರಿ ಜೀಪುಗಳ ವ್ಯವಸ್ಥೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ಸಂರಕ್ಷಿತ ಅರಣ್ಯದಲ್ಲಿ 450 ಫೈರ್ವಾಚರ್ಗಳ ನೇಮಕ ಈ ತಿಂಗಳ ಅಂತ್ಯದೊಳಗೆ ಆಗಲಿದೆ. 13 ವಲಯಗಳಲ್ಲಿ ಒಂದು ಅಥವಾ ಎರಡು ಹೆಚ್ಚುವರಿ ಜೀಪು ನೀಡಲಾಗಿದೆ.

ಕಾಡ್ಗಿಚ್ಚು ತಡೆಗೆ ಸನ್ನದ್ಧವಾದ ಇಲಾಖೆ
ಎಲ್ಲ ವಲಯಗಳಲ್ಲಿ ಎರಡು ವಾಚ್ ಟವರ್ಗಳಿದ್ದು, ವಾಚ್ ಟವರ್ ಇಲ್ಲದ ಕಡೆಗಳಲ್ಲಿ ಮಚ್ಚಾನ್ ನಲ್ಲಿ ಬೆಳಗ್ಗೆ 6 ರಿಂದ ಸಂಜೆ 6 ತನಕ ಹದ್ದಿನ ಕಣ್ಣಿಟ್ಟ ಸಿಬ್ಬಂದಿ ಕಾವಲು ಕಾಯಲಿದ್ದಾರೆ. ಒಂದು ವೇಳೆ ಬೆಂಕಿ ಅವಘಡ ಸಂಭವಿಸಿದ ಸಂದರ್ಭ ಅದನ್ನು ನಿಯಂತ್ರಿಸಲು ಅನುಕೂಲವಾಗುವಂತೆ ಬೆಂಕಿ ನಂದಿಸುವ ಬೋಯರ್ಸ್, ಸ್ಪ್ರೇಯರ್ಸ್, ಫೈರ್ ಬೇಯರ್ಸ್‌ಗನ್ನು ಸಿದ್ಧಗೊಳಿಸಲಾಗುತ್ತಿದೆ. ಇದೆಲ್ಲರ ನಡುವೆ ಅರಣ್ಯ ಸಿಬ್ಬಂದಿ, ಫೈರ್ ವಾಚರ್ ಮತ್ತು ವಿಶೇಷ ಹುಲಿ ಸಂರಕ್ಷಣಾ ಪಡೆಯ ಸಿಬ್ಬಂದಿ ಕೂಡ ಗಸ್ತು ನಡೆಸಲಿದ್ದಾರೆ.

ಗುಂಡ್ಲುಪೇಟೆ ಹಾಗೂ ಬಂಡೀಪುರ ಉಪ ವಿಭಾಗದ ಅಧಿಕಾರಿಗಳ ಸಭೆ ನಡೆಸಿ ಬೇಸಿಗೆಯಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಹಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಅರಣ್ಯದ ಪ್ರಮುಖ ಸ್ಥಳ ಹಾಗೂ ಹೆದ್ದಾರಿಯಲ್ಲಿ ಡ್ರೋಣ್ ಮೂಲಕ ಕಿಡಿಗೇಡಿಗಳ ಚಲನ, ವಲನಗಳ ಮೇಲೆ ಕಣ್ಣಿಡಲಾಗುತ್ತದೆ. ಅಗ್ನಿಶಾಮಕ ದಳಕ್ಕೆ ಪತ್ರ ಬರೆದು ಸಹಕಾರ ಪಡೆಯುವ ನಿರ್ಧಾರ ಮಾಡಲಾಗಿದೆ. ಒಟ್ಟಾರೆ ಬಂಡೀಪುರ ಅರಣ್ಯದಲ್ಲಿ ಕಾಡ್ಗಿಚ್ಚು ತಡೆಗೆ ಅರಣ್ಯ ಇಲಾಖೆ ಸನ್ನದ್ಧವಾಗಿರುವುದಂತು ನಿಜ

You Might Also Like

ಮೈಸೂರು: ಹೃದಯಾಘಾತದಿಂದ ಎಸ್​ಎಸ್​ಎಲ್​ಸಿ ವಿದ್ಯಾರ್ಥಿನಿ ಸಾವು

ಹೊಸಕೋಟೆ ಬಳಿ ಭೀಕರ ಸರಣಿ ಅಪಘಾತ: ಸ್ಥಳದಲ್ಲೇ 7 ಮಂದಿ ಸಾವು

ಬಿಎಚ್‌ಇಎಲ್‌ ಕಾರ್ಖಾನೆಗೆ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಭೇಟಿ

ಇನ್ನು ಮುಂದೆ ದೇವಾಲಯಗಳಲ್ಲಿ ಚಿತ್ರೀಕರಣಕ್ಕೆ ಶುಲ್ಕ ಪಾವತಿ ಕಡ್ಡಾಯ

ಕಟ್ಟಡದಿಂದ ಜಿಗಿದು ಬಾಲಿವುಡ್ ನಟಿ ಮಲೈಕಾ ಅರೋರಾ ತಂದೆ ಆತ್ಮಹತ್ಯೆ

TAGGED:#forest departmentBandipur
Share This Article
Facebook Copy Link Print
Previous Article Top 10 News ಇಂದಿನ ಟಾಪ್-10 ಸುದ್ದಿಗಳು (13-01-2025)
Next Article Randeep Surjewala ಸಿಎಂ ಬಣಕ್ಕೆ ಸುರ್ಜೇವಾಲ ವಾರ್ನಿಂಗ್‌
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up