By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ‘ಕಾಂತಾರ 2’ ಚಿತ್ರದ ಶೂಟಿಂಗ್ ವೇಳೆ ಅರಣ್ಯಕ್ಕೆ ಬೆಂಕಿ, ರೊಚ್ಚಿಗೆದ್ದ ಗ್ರಾಮಸ್ಥರು
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ‘ಕಾಂತಾರ 2’ ಚಿತ್ರದ ಶೂಟಿಂಗ್ ವೇಳೆ ಅರಣ್ಯಕ್ಕೆ ಬೆಂಕಿ, ರೊಚ್ಚಿಗೆದ್ದ ಗ್ರಾಮಸ್ಥರು

Blog

‘ಕಾಂತಾರ 2’ ಚಿತ್ರದ ಶೂಟಿಂಗ್ ವೇಳೆ ಅರಣ್ಯಕ್ಕೆ ಬೆಂಕಿ, ರೊಚ್ಚಿಗೆದ್ದ ಗ್ರಾಮಸ್ಥರು

Forest fire breaks out during shooting of 'Kantara 2', villagers outraged

Published January 20, 2025
Share
2 Min Read
Kantara
SHARE

ಕುಂದಾಪುರ : ರಿಷಬ್ ಶೆಟ್ಟಿ ಅವರ ‘ಕಾಂತಾರ 2’ ಚಿತ್ರೀಕರಣದ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಲಾಗಿದೆ ಎಂಬ ಆರೋಪದಿಂದಾಗಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿತ್ರತಂಡದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಲಾಗಿದೆ. ಪರಿಸರ ಹಾನಿ ಹಾಗೂ ವನ್ಯಜೀವಿಗಳಿಗೆ ಉಂಟಾಗಬಹುದಾದ ಅಪಾಯದ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ. ‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ.

ಇದು ಚಿತ್ರದ ಪ್ರೀಕ್ವೆಲ್. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸುತ್ತಮುತ್ತ ಸಾಗುತ್ತಿದೆ. ಇದರಲ್ಲಿಯೂ ಮಣ್ಣಿನ ಕಥೆ ಹೇಳಲು ರಿಷಬ್ ಶೆಟ್ಟಿ ರೆಡಿ ಆಗಿದ್ದಾರೆ. ಹೀಗಿರುವಾಗಲೇ ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪ ತಂಡದ ಮೇಲೆ ಬಂದಿದೆ. ಸಿನಿಮಾ ತಂಡದ ವಿರುದ್ಧ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.

‘ಕಾಂತಾರ’ ಯಶಸ್ಸಿನ ಬಳಿಕ ಹೊಂಬಾಳೆ ಫಿಲ್ಮ್ಸ್ ‘ಕಾಂತಾರ 2’ ಮಾಡುವ ಆಸಕ್ತಿ ತೋರಿಸಿತು. ರಿಷಬ್ ಶೆಟ್ಟಿ ಅವರು ಹೊಸ ಕಥೆಯೊಂದಿಗೆ ಎರಡನೇ ಪಾರ್ಟ್ ಮಾಡಲು ರೆಡಿ ಆಗಿದ್ದಾರೆ. ಚಿತ್ರದ ಶೂಟಿಂಗ್ ಹಾಗೂ ಅದರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕುಂದಾಪುರದಲ್ಲೇ ನಡೆಯುತ್ತಿದೆ. ಈ ಕಾರಣಕ್ಕೆ ರಿಷಬ್ ಅವರು ತಮ್ಮ ಹುಟ್ಟೂರಿಗೆ ಶಿಫ್ಟ್ ಆಗಿದ್ದಾರೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಶೂಟಿಂಗ್ ನಡೆಸಲಾಗುತ್ತಿದೆ. ಜನವರಿ 2ರಿಂದ ಈ ಭಾಗದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರತಂಡ, ಶೂಟಿಂಗ್ಗಾಗಿ ಗೋಮಾಳ ಜಾಗಕ್ಕೆ ಪರವಾನಗಿ ಪಡೆದಿದೆ. ಆದರೆ, ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದು, ಚಿತ್ರತಂಡದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಚಿತ್ರೀಕರಣಕ್ಕೆ ಯಾವೆಲ್ಲಾ ಪರವಾನಿಗೆ ನೀಡಿದ್ದಾರೆ ಎಂಬ ಮಾಹಿತಿ ಕೊಡಬೇಕು. ಅರಣ್ಯ, ಕಂದಾಯ ಇಲಾಖೆಯವರು ಮಾಹಿತಿ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ. ಸದ್ಯ ಕಾಡಿನಲ್ಲಿ ಬೆಂಕಿ ಹಚ್ಚಿದ್ದರಿಂದ ಕಾಡುಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ ಎನ್ನಲಾಗಿದೆ.

ವನ್ಯಜೀವಿಗಳಿರುವ ಪ್ರದೇಶದಲ್ಲಿ ಚಿತ್ರೀಕರಣ ನಡೆಸಬಾರದು ಎಂಬುದು ಗ್ರಾಮಸ್ಥರ ಆಗ್ರಹ. ‘ಕೂಡಲೇ ಶೂಟಿಂಗ್ ಸ್ಥಗಿತಗೊಳಿಸಿ ಪರಿಸರ ಉಳಿಸಿ. ಇಲ್ಲವಾದರೆ ಡಿಸಿ ಕಚೇರಿ ಮುಂದೆ ಧರಣಿ ನಡೆಸುತ್ತೇವೆ’ ಎಂದು ಗ್ರಾಮಸ್ಥರ ಎಚ್ಚರಿಕೆ ನೀಡಿದ್ದಾರೆ.

You Might Also Like

ವಯನಾಡ್‌ ಭೂಕುಸಿತ : ಮೃತಪಟ್ಟವರ ಸಂಖ್ಯೆ 316ಕ್ಕೆ ಏರಿಕೆ

ಪ್ರಧಾನಿ ಮೋದಿಗೆ ನೈಜೀರಿಯಾದ 2ನೇ ಅತ್ಯುನ್ನತ ನಾಗರಿಕ ಗೌರವ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಸೋಮಾಲಿಯಾದ ಬೀಚ್ ಹೋಟೆಲ್​ನಲ್ಲಿ ಆತ್ಮಾಹುತಿ ಬಾಂಬ್ ದಾಳಿ, 32 ಮಂದಿ ಬಲಿ

ರೌಡಿಶೀಟರ್ ಅಜಿತ್ ಬರ್ಬರ ಹತ್ಯೆ ದೃಶ್ಯ ಸಿಸಿಟಿವಿಯಲ್ಲಿ ಸೆರೆ

TAGGED:Kantara 2Kantara Chapter 1
Share This Article
Facebook Copy Link Print
Previous Article Top 10 News ಇಂದಿನ ಟಾಪ್-10 ಸುದ್ದಿಗಳು (20-01-2025)
Next Article External Affairs Minister Jaishankar meets Quad Foreign Ministers in Washington DC ಅಮೆರಿಕಾದಲ್ಲಿ QUAD ರಾಷ್ಟ್ರಗಳ ವಿದೇಶಾಂಗ ಸಚಿವರನ್ನು ಭೇಟಿಯಾದ ಎಸ್.ಜೈಶಂಕರ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Lpg Lpg Lpg
ಅವಧಿಗೂ ಮೊದಲು ಎಲ್‌ಪಿಜಿ ಗ್ಯಾಸ್ ಬುಕ್ ಮಾಡಿದರೆ ಖಾತೆ ಬ್ಲಾಕ್
ರಾಷ್ಟ್ರೀಯ-National
March 25, 2026
Gold And Silver Price Gold And Silver Price Gold And Silver Price
ಚಿನ್ನ-ಬೆಳ್ಳಿ ಖರೀದಿಗೆ ಮುಂದಾಗಿದ್ದವರಿಗೆ ಶಾಕ್, ಇಂದು ಮತ್ತೆ ಬೆಲೆ ಏರಿಕೆ
ರಾಜ್ಯ-Karnataka
March 25, 2026
Badshah marriage Badshah marriage Badshah marriage
ಎರಡನೇ ಮದುವೆಯಾದ ಬಾಲಿವುಡ್ ಖ್ಯಾತ ಗಾಯಕ ಬಾದ್​​ಶಾ
ಬಾಲಿವುಡ್​ - Bollywood
March 25, 2026
Python Python Python
ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
ರಾಜ್ಯ-Karnataka
March 25, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up