ಅಡ್ವೆಂಚರ್ಸ್ ಕಾಮಿಡಿ ಕಥಾಹಂದರ ಒಳಗೊಂಡಿರುವ, ಮಲ್ಟಿ ಸ್ಟಾರರ್ ಸಿನಿಮಾ “ಫಾರೆಸ್ಟ್” ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಣೆ ಮಾಡಿದೆ. 2025ರ ಜನವರಿ 24 ರಂದು ಈ ಚಿತ್ರ ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.
ಎನ್ ಎಂ ಕಾಂತರಾಜ್ ಅವರು ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ನಲ್ಲಿ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕಾಡಿನಲ್ಲೇ ನಡೆಯುವ ಅಡ್ವೆಂಚರಸ್ ಕಾಮಿಡಿ ಕಥೆಯನ್ನು ನಿರ್ದೇಶಕ ಚಂದ್ರಮೋಹನ್ ಈ ಚಿತ್ರದ ಮೂಲಕ ವಿಭಿನ್ನವಾಗಿ ಹೇಳುವ ಪ್ರಯತ್ನ ಮಾಡಿದ್ದಾರೆ.
ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ||ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.
ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು ಅಭಿನಯಿಸಿರುವ ಮಲ್ಟಿ ಸ್ಟಾರರ್ ಚಿತ್ರ ಇದಾಗಿದೆ.
.
.

