ಹಾವೇರಿ: ಮಾಜಿ ಸಚಿವ ಬಿ.ಸಿ ಪಾಟೀಲ್ (B.C. Patil) ಅಳಿಯ ಕೆ.ಜಿ ಪ್ರತಾಪ್ ಕುಮಾರ್(K.G. Pratap Kumar) (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿಗುವ ಘಟನೆ ದಾವಣಗೆರೆ (Davangere) ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ಬಳಿ ನಡೆದಿದೆ.
ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಬಿ.ಸಿ ಪಾಟೀಲ್ ಪುತ್ರಿ ಸೌಮ್ಯ ಅವರ ಪತಿಯಾಗಿರುವ ಪ್ರತಾಪ್ ಕುಮಾರ್ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೊನ್ನಾಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ – 24 ಗಂಟೆಯಲ್ಲಿ ದಾಖಲೆ ಮಳೆ
ಪ್ರತಾಪ್ ಕುಮಾರ್ ಅತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಎಸ್‌ಪಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದು, ಮಧ್ಯಾಹ್ನ ಎರಡೂವರೆ ಗಂಟೆಗೆ ವಾಹನದಲ್ಲಿ ವಿಷವನ್ನು ಕುಡಿದಿರುವುದು ಕಂಡು ಬಂದಿದೆ. ವೈಯಕ್ತಿಕ ಕಾರಣದಿಂದ ಸಾವನ್ನಪ್ಪಿದ್ದಾರೆ ಎನ್ನುವ ಶಂಕೆ ಇದೆ.
ಶಿವಮೊಗ್ಗದಿಂದ ಕತ್ತಲೆಗೆರೆಗೆ ಬರುತ್ತಿದ್ದರು ಎನ್ನುವ ಮಾಹಿತಿ ಸಿಕ್ಕಿದೆ. ಅವರು ವಿಷ ಸೇವನೆ ಮಾಡಿದ ವಿಚಾರವನ್ನು ಪ್ರತಾಪ್ ಅವರ ಅಣ್ಣ ಪ್ರಭು ಎನ್ನುವರು ಮಾಹಿತಿ ನೀಡಿದ್ದರು. ಕಾರಿನಲ್ಲಿ ಪ್ರತಾಪ್ ಕುಮಾರ್ ಒಬ್ಬರೇ ಇದ್ದರು. ಇಲ್ಲಿಯವರೆಗೆ ಡೆತ್ ನೋಟ್ ಸಿಕ್ಕಿಲ್ಲ. ತನಿಖೆ ನಂತರ ಸಾವಿನ ಬಗ್ಗೆ ನಿಖರ ಕಾರಣ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಭಾರೀ ಮಳೆಗೆ ಜನ ತತ್ತರ- 150ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ನೀರು
ಪ್ರತಾಪ್ ಕುಮಾರ್ ಕೆ.ಜಿ ಅವರು ಬಿ.ಸಿ ಪಾಟೀಲ್ ಪತ್ನಿ ವನಜಾ ಅವರ ಸಹೋದರನಾಗಿದ್ದಾನೆ. ಗಂಡು ಮಕ್ಕಳು ಇಲ್ಲದೇ ಕಾರಣ ಹಿರಿಯ ಪುತ್ರಿಯಾದ ಸೌಮ್ಯಳನ್ನು ಬಿಸಿ ಪಾಟೀಲ್ ಸೋದರ ಮಾವನಿಗೆ ಕೊಟ್ಟು ಮದುವೆ ಮಾಡಿದ್ದರು.
ಬಿ.ಸಿ ಪಾಟೀಲ್ ಅವರ ಕೃಷಿಗೆ ಸಂಬಂಧಿಸಿದ ವ್ಯವಹಾರವನ್ನು ಪ್ರತಾಪ್ ಕುಮಾರ್ ನೋಡಿಕೊಳ್ಳುತ್ತಿದ್ದರು. ಅಳಿಯನ ಆತ್ಮಹತ್ಯೆಯಿಂದ ಬಿಸಿ ಪಾಟೀಲ್ ಕುಗ್ಗಿದ್ದು ಹಿರೇಕೆರೂರಿನಲ್ಲಿ ಇದ್ದ ಅವರು ಶಿವಮೊಗ್ಗಲ್ಲಿರುವ ಮೆಗ್ಗಾನ್ ಆಸ್ಪತ್ರೆಗೆ ಈಗ ದೌಡಾಯಿಸಿದ್ದಾರೆ.ಇದನ್ನೂ ಓದಿ: ಹಾವೇರಿ ರಸ್ತೆ ಅಪಘಾತ: ಮೃತರ ಕುಟುಂಬಸ್ಥರಿಗೆ ಸಹಾಯ ಮಾಡಿದ ಶಿವಣ್ಣ ದಂಪತಿ

