By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬ್ರೇಕಿಂಗ್ : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ, 5 ಲಕ್ಷ ದಂಡ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಬ್ರೇಕಿಂಗ್ : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ, 5 ಲಕ್ಷ ದಂಡ

ರಾಜ್ಯ-KarnatakaLatest

ಬ್ರೇಕಿಂಗ್ : ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ, 5 ಲಕ್ಷ ದಂಡ

Former MP Prajwal Revanna sentenced to life imprisonment, Rs 5 lakh fine in rape case

Published August 2, 2025
Share
2 Min Read
PRajwal Revanna 01 PRajwal Revanna 01 PRajwal Revanna 01
SHARE

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲೆ ಮೈಸೂರಿನ ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಇದರ ಜೊತೆಗೆ 5 ಲಕ್ಷ ರೂಪಾಯಿ ದಂಡವನ್ನು ವಿಧಿಸಲಾಗಿದೆ. ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಈ ಮಹತ್ವದ ತೀರ್ಪನ್ನು ಇಂದು ಪ್ರಕಟಿಸಿದ್ದಾರೆ.

ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು, “ಈ ಪ್ರಕರಣ ಗಂಭೀರವಾದದ್ದು. ಅಪರಾಧಿಯ ಕ್ರೈಮಿನಲ್ ಮನಸ್ಥಿತಿ ಮತ್ತು ದುಷ್ಕೃತ್ಯಗಳು ಸ್ಪಷ್ಟವಾಗಿವೆ. ಆದ್ದರಿಂದ, ಜೀವಾವಧಿ ಶಿಕ್ಷೆ ಮತ್ತು 5 ಲಕ್ಷ ರೂಪಾಯಿ ದಂಡ ವಿಧಿಸಲಾಗುತ್ತಿದೆ” ಎಂದು ತೀರ್ಪು ನೀಡಿದರು.

ಪ್ರಜ್ವಲ್ ರೇವಣ್ಣ ವಿರುದ್ಧ 2024ರ ಲೋಕಸಭೆ ಚುನಾವಣೆ ಸಂದರ್ಭ ಸರಣಿ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದವು. ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು.

ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ. ಹೆಚ್​ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅವರು ದೋಷಿ ಎಂದು ಸಾಬೀತಾಗಿದ್ದು, ಶಿಕ್ಷೆಯಾಗಿದೆ.

ಪ್ರಜ್ವಲ್ ರೇವಣ್ಣ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರವೆಸಗಿ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಿಸಿಕೊಂಡಿರುವ ಆರೋಪ ಸಂಬಂಧ ಮೂರು ಪ್ರತ್ಯೇಕ ಪ್ರಕರಣಗಳು ಇನ್ನೂ ವಿಚಾರಣಾ ಹಂತದಲ್ಲಿ ಇವೆ. ಅವುಗಳ ತೀರ್ಪು ಇನ್ನಷ್ಟೇ ಹೊರಬೀಳಬೇಕಿದೆ.

ಮೈಸೂರಿನ ಕೆ.ಆರ್.ನಗರದಲ್ಲಿ ಒಬ್ಬ ಮನೆಕೆಲಸದ ಮಹಿಳೆಯ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪವಿತ್ತು. ಮಹಿಳೆ ಬಡವಳಾಗಿದ್ದು, ಕೂಲಿ ಕೆಲಸ ಮಾಡುತ್ತಿದ್ದಳು. ಪ್ರಕರಣದಲ್ಲಿ ಪೊಲೀಸರು ದೂರು ದಾಖಲಿಸಿ, ವಿಚಾರಣೆ ನಡೆಸಿದ ನಂತರ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು.

ಪ್ರಾಸಿಕ್ಯೂಷನ್ ಪರ ವಕೀಲರಾದ ಎಸ್ಪಿಪಿ ಬಿ.ಎನ್. ಜಗದೀಶ್ ಅವರು, “ಇದು ಸಾಮಾನ್ಯ ಅತ್ಯಾಚಾರ ಪ್ರಕರಣವಲ್ಲ. ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ನಡೆಸಲಾಗಿದೆ. ಅವಳು ಶಿಕ್ಷಿತಳಲ್ಲ, ಬಡವಳು ಮತ್ತು ಅಧಿಕಾರದ ದುರುಪಯೋಗಕ್ಕೆ ಬಲಿಯಾಗಿದ್ದಾಳೆ” ಎಂದು ವಾದಿಸಿದರು.

ಅಲ್ಲದೇ, “ಪ್ರಜ್ವಲ್ ರೇವಣ್ಣ ಅವರು ತಮ್ಮ ರಾಜಕೀಯ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಅವರ ಕ್ರೈಮಿನಲ್ ಮನಸ್ಥಿತಿ ಮತ್ತು ಕ್ರೂರತೆ ಸ್ಪಷ್ಟವಾಗಿದೆ. ಇಂತಹ ಪ್ರಕರಣಗಳಲ್ಲಿ ಗರಿಷ್ಠ ಶಿಕ್ಷೆ ವಿಧಿಸುವುದು ಅಗತ್ಯ” ಎಂದು ಒತ್ತಿ ಹೇಳಿದರು.

ಪ್ರಜ್ವಲ್ ರೇವಣ್ಣ ಪರ ವಕೀಲೆ ನಳಿನಾ ಮಾಯಾಗೌಡ ಅವರು, “ಇದು ರಾಜಕೀಯ ಪ್ರೇರಿತ ಪ್ರಕರಣ. ಪ್ರಜ್ವಲ್ ಯುವಕನಾಗಿದ್ದು, ಅವರ ಭವಿಷ್ಯವನ್ನು ನಾಶಪಡಿಸಬಾರದು. ಸಂತ್ರಸ್ತೆಗಿಂತ ಪ್ರಜ್ವಲ್ ಅವರಿಗೆ ಹೆಚ್ಚು ಹಾನಿಯಾಗಿದೆ” ಎಂದು ಪ್ರತಿವಾದ ಮಂಡಿಸಿದರು.

You Might Also Like

ಅಜಿತ್ ಪವಾರ್ ನಿಧನಕ್ಕೆ ಪ್ರಧಾನಿ ಸಂತಾಪ

ಅಂಬೇಡ್ಕರ್ ಕುರಿತ ಹೇಳಿಕೆ : ಅಮಿತ್ ಶಾ ವಿರುದ್ಧ ವಕೀಲರ ಆಕ್ರೋಶ

ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ

ಬಳ್ಳಾರಿ ಆಯ್ತು ಈಗ ಬೆಳಗಾವಿಯಲ್ಲೂ ಬಾಣಂತಿಯರು-ಶಿಶುಗಳ ಸರಣಿ ಸಾವು

ರಸಗೊಬ್ಬರ ಕೊರತೆ ಇಲ್ಲ, ರೈತರು ಆತಂಕಕ್ಕೊಳಗಾಗಬಾರದು : ಕೃಷಿ ಸಚಿವ ಚಲುವರಾಯಸ್ವಾಮಿ

TAGGED:prajwal revannaRape Case
Share This Article
Facebook Copy Link Print
Previous Article Dharmasthala 01 Dharmasthala 01 Dharmasthala 01 ಧರ್ಮಸ್ಥಳ ಪ್ರಕರಣ : 9ನೇ ಪಾಯಿಂಟ್‌ನಲ್ಲಿ ಎಸ್ಐಟಿಯಿಂದ ಶೋಧ ಕಾರ್ಯ
Next Article PM Mdi PM Mdi PM Mdi ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಹಣ ಬಿಡುಗಡೆ ಮಾಡಿದ ಪ್ರಧಾನಿ ಮೋದಿ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
asfsfsdfd asfsfsdfd asfsfsdfd
ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ
ರಾಷ್ಟ್ರೀಯ-National Latest
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up