ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಗುರುವಾರ ಬೆಳಗ್ಗೆ ಕೋಲ್ಕತ್ತಾದ ತಮ್ಮ ನಿವಾಸದಲ್ಲಿ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿದ್ದು, ಪತ್ನಿ ಮೀರಾ ಹಾಗೂ ಮಗಳು ಸುಚೇತನಾ ಅವರನ್ನು ಅಗಲಿದ್ದಾರೆ.
ಭಟ್ಟಾಚಾರ್ಯ ಅವರು ದಕ್ಷಿಣ ಕೋಲ್ಕತ್ತಾದ ಬಲ್ಲಿಗುಂಗೆ ಪ್ರದೇಶದಲ್ಲಿ ಎರಡು ಕೋಣೆಗಳ ಸಣ್ಣ ಸರ್ಕಾರಿ ಅಪಾರ್ಟ್ಮೆಂಟ್ನಲ್ಲಿ ಸರಳ ಜೀವನ ನಡೆಸುತ್ತಿದ್ದರು. ಅವರು ದೀರ್ಘಕಾಲದ ಅಬ್ಸ್ಟ್ರಕ್ಟಿವ್ ಪಲ್ಮನರಿ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಕೆಲವು ವರ್ಷಗಳಿಂದ ಮನೆಯಲ್ಲೇ ಇರುತ್ತಿದ್ದರು. ಕೊನೆಯದಾಗಿ ಅವರು 2019 ರಲ್ಲಿ ಸಿಪಿಐ(ಎಂ) ಸಮಾವೇಶದಲ್ಲಿ ಕಾಣಿಸಿಕೊಂಡಿದ್ದರು,
ನವೆಂಬರ್ 2000 ರಿಂದ ಮೇ 2011 ರವರೆಗೆ ಮುಖ್ಯಮಂತ್ರಿಯಾಗಿದ್ದ ಅವರು 2024ರ ಚುನಾವಣೆಗೆ ಮುಂಚಿತವಾಗಿ, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ ಭಟ್ಟಾಚಾರ್ಯರ ವೀಡಿಯೊವನ್ನು ಹಂಚಿಕೊಂಡಿತ್ತು. ಇದನ್ನು ಕೃತಕ ಬುದ್ಧಿಮತ್ತೆ ಬಳಸಿ ರಚಿಸಲಾಗಿತ್ತು. ಇದರಲ್ಲಿ ಅವರು ಮತದಾರರನ್ನು ಎಡ ಮತ್ತು ಜಾತ್ಯತೀತ ಶಕ್ತಿಗಳಿಗೆ ಮತ ಹಾಕುವಂತೆ ಒತ್ತಾಯಿಸಿದ್ದರು.

