ಬೆಂಗಳೂರು: ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಈ ಕೂಲ್ ವೆದರ್ ಜೊತೆಗೆ ಹಲವೆಡೆ ಸಾಧಾರಣ ಮಳೆಯಾಗುತ್ತಿದೆ.
ಮುಂದಿನ ನಾಲ್ಕು ದಿನ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಿಗೂ ಮಳೆ ಅಲರ್ಟ್ ಇದೆ.
ಇನ್ನೂ ಸಿಲಿಕಾನ್ ಸಿಟಿಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಮೋಡ ಕವಿದ ವಾತವರಣ ಮುಂದುವರಿದಿದೆ. ಜೊತೆಗೆ ಹಲವೆಡೆ ಮಳೆಯಾಗುತ್ತಿದ್ದು, ಇಂದು ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಬಿಹಾರದಲ್ಲಿ ಕಾರು-ಆಟೋ ಡಿಕ್ಕಿ: 6 ಮಂದಿ ಸಾವು

ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಇಂದು ಮಳೆ ಎಚ್ಚರಿಕೆ ನೀಡಲಾಗಿದೆ. 30-40 ಕಿಮೀ ವೇಗದಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಗರಿಷ್ಠ- 27°ಸಿ , ಕನಿಷ್ಠ 21° ತಾಪಮಾನವಿರಲಿದೆ.
ನಿನ್ನೆ ಬೆಂಗಳೂರಿನಾದ್ಯಂತ ಮಳೆಯಾಗಿತ್ತು. ನಗರದ ಯಲಹಂಕ ಹಾಗೂ ದಾಸರಹಳ್ಳಿಯಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಇಂದು ಕೂಡ ನಗರದಲ್ಲಿ ಮಳೆ ಸಾಧ್ಯತೆ ಇದೆ. ಜುಲೈ 12ರ ವರೆಗೆ ನಗರದಲ್ಲಿ ಮಳೆ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: KRS ಡ್ಯಾಂನಿಂದ ನಾಲೆಗಳಿಗೆ ನೀರು ಬಿಡುಗಡೆ ಮುಂದೂಡಿಕೆ

