ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ (ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ನ್ಯಾ.ವಿಶ್ವಜಿತ್ ಶೆಟ್ಟಿ ಅವರಿದ್ದ ಹೈಕೋರ್ಟ್ ಏಕಸದಸ್ಯ ಪೀಠ 6 ವರ್ಷದ ಬಳಿಕ ನವೀನ್ ಕುಮಾರ್, ಅಮಿತ್, ಎಚ್‌ಎಲ್ ಸುರೇಶ್ ಅವರಿಗೆ ಜಾಮೀನು ನೀಡಿದೆ.
ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಆರೋಪಿಗಳು ಆರು ವರ್ಷಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣದ ವಿಚಾರಣೆ ಮುಗಿಯದೇ ಇರುವುದರಿಂದ ದೀರ್ಘಕಾಲ ಅವರನ್ನು ಜೈಲಿನಲ್ಲಿ ಇಡುವಂತಿಲ್ಲ ಎಂದು ಅಭಿಪ್ರಾಯಪಟ್ಟಿರುವ ಪೀಠ, ಜಾಮೀನು ಮಂಜೂರು ಮಾಡಿದೆ.
ಹಿರಿಯ ವಕೀಲ ಅರುಣ್ ಶಾಮ್, ಮಧುಕರ್ ದೇಶಪಾಂಡೆ, ಬಸವರಾಜ್ ಸಪ್ಪಣ್ಣನವರ್ ಆರೋಪಿಗಳ ಪರ ವಾದ ಮಂಡಿಸಿದರು. ಈ ಪ್ರಕರಣದಲ್ಲಿ ಈ ಹಿಂದೆ ಆರೋಪಿ ಎ11 ಮೋಹನ್ ನಾಯಕ್‌ಗೆ ಮಾತ್ರ ಜಾಮೀನು ದೊರೆತಿತ್ತು.
ಆರೋಪಿಗಳ ಪರ ಹಿರಿಯ ವಕೀಲ ಅರುಣ್ ಶ್ಯಾಂ ವಾದ ಮಂಡಿಸಿದ್ದರು. ಕೋರ್ಟ್ ಹಲವು ಷರತ್ತು ವಿಧಿಸಿದ್ದು ಈ ಷರತ್ತು ಪೂರ್ಣಗೊಂಡ ಬಳಿಕ ಇಂದು ಸಂಜೆ ಅಥವಾ ನಾಳೆ ಆರೋಪಿಗಳು ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆಯಿದೆ.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

