ಉತ್ತರ ಕನ್ನಡ : ಉತ್ತರ ಕನ್ನಡದ ಭಟ್ಕಳ ತಾಲೂಕಿನಲ್ಲಿ ಆಕಸ್ಮಿಕವಾಗಿ ಮಗು ಸತ್ತ ಘೋರವಾದ ದುರಂತ ಸಂಭವಿಸಿದೆ. ಮನೆಯಲ್ಲಿ ಜೋಕಾಲಿ ಆಡುವ ವೇಳೆ ಚೂಡಿದಾರದ ಶಾಲು ಕುತ್ತಿಗೆಗೆ ಸಿಲುಕಿ 12 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ, ಭಟ್ಕಳ ತಾಲೂಕಿನ ತೆರ್ನಮಕ್ಕಿಯ ಸಬ್ಬತ್ತಿಯಲ್ಲಿ ನಡೆದಿದೆ. ತೆರ್ನಮಕ್ಕಿ ಸಬ್ಬತ್ತಿ ನಿವಾಸಿ ಪ್ರಣಿತಾ ಜಗನ್ನಾಥ ನಾಯ್ಕ (12) ಮೃತ ಬಾಲಕಿ.
ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮನೆಯಲ್ಲಿ ಜೋಕಾಲಿ ಆಟ ಆಡುತ್ತಿದ್ದಳು. ಆಡುವಾಗ ಪ್ರಣಿತಾ ಕುತ್ತಿಗೆಯಲ್ಲಿದ್ದ ವೇಲ್ ಜೋಕಾಲಿಗೆ ಸಿಲುಕಿ ತೀವ್ರವಾಗಿ ಅಸ್ವಸ್ಥಗೊಂಡಿದ್ದಳು. ಕೂಡಲೇ ಸ್ಥಳೀಯ ಆಸ್ಪತ್ರೆಗೆ ತೆಗೆದುಕೊಂಡು ಹೋಗುವಾಗಲೇ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ. ಈ ಕುರಿತು ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

