ಬೆಂಗಳೂರು: ಸ್ವರ್ಣ ಪ್ರಿಯರಿಗೆ ಕೊಂಚ ರಿಲೀಫ್ ಸಿಕ್ಕಿದ್ದು, ಇಂದು (ಏ. 7) ಕೊಂಚ ಇಳಿಕೆ ಕಂಡು ಬಂದಿದೆ . ಬೆಂಗಳೂರಿನಲ್ಲಿ ಸೋಮವಾರ 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 25ರೂ. ಕಡಿಮೆಯಾಗಿ 8,285 ರೂ. ಮತ್ತು 22 ಕ್ಯಾರಟ್ 1 ಗ್ರಾಂ ಚಿನ್ನದ ಬೆಲೆಯಲ್ಲಿ 28ರೂ.ಕಡಿಮೆ ಆಗಿದ್ದು 9,038 ರೂ. ಇದೆ. 22 ಕ್ಯಾರಟ್‌ನ 8 ಗ್ರಾಂ ಚಿನ್ನ 66,280 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 82,850 ರೂ. ಮತ್ತು 100 ಗ್ರಾಂಗೆ 8,28,500 ರೂ. ನೀಡಬೇಕಾಗುತ್ತದೆ. ಇನ್ನು 24 ಕ್ಯಾರಟ್‌ನ 8 ಗ್ರಾಂ ಚಿನ್ನ 72,305 ರೂ. ಬೆಲೆ ಬಾಳಿದರೆ, 10 ಗ್ರಾಂಗೆ ನೀವು 90,380 ರೂ. ಮತ್ತು 100 ಗ್ರಾಂಗೆ 9,03,800 ರೂ. ಪಾವತಿಸಬೇಕಾಗುತ್ತದೆ.
ಬೆಂಗಳೂರಿನಲ್ಲಿ ಬೆಳ್ಳಿ ದರವೂ ಯಥಾಸ್ಥಿತಿ ಕಾಯ್ದುಕೊಂಡಿದೆ. ಬೆಳ್ಳಿ 1 ಗ್ರಾಂನ ಬೆಲೆ 94 ರೂ., 8 ಗ್ರಾಂಗೆ 752 ರೂ., 10 ಗ್ರಾಂ.ಗೆ 940 ಮತ್ತು 1 ಕೆಜಿಗೆ 94,000 ರೂ. ಇದೆ.
ಜಾಗತಿಕ ಚಿನ್ನದ ಮಾರುಕಟ್ಟೆಯ ಏರಿಳಿತ ಭಾರತದಲ್ಲಿ ಚಿನ್ನದ ದರವನ್ನು ನಿರ್ಧರಿಸುವಲ್ಲಿ ಪ್ರದಾನ ಪಾತ್ರವಹಿಸುತ್ತದೆ. ಭೌಗೋಳಿಕ ರಾಜಕೀಯ ಘಟನೆಗಳು, ಆರ್ಥಿಕ ಪರಿಸ್ಥಿತಿಗಳು ಮತ್ತು ಕರೆನ್ಸಿ ಏರಿಳಿತಗಳಂತಹ ಅಂಶಗಳು ಚಿನ್ನದ ದರದ ಮೇಲೆ ನೇರ ಪರಿಣಾಮ ಬೀರುತ್ತವೆ. ಅಂತಾರಾಷ್ಟ್ರೀಯ ಮಾರುಕಟ್ಟೆಗಳು ಅನಿಶ್ಚಿತತೆಗೆ ಒಳಗಾದಾಗ ಹೂಡಿಕೆದಾರರು ಹೆಚ್ಚಾಗಿ ಚಿನ್ನದತ್ತ ಮುಖ ಮಾಡುತ್ತಾರೆ. ಇದು ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ.
ಭಾರತದಲ್ಲಿ ಚಿನ್ನವು ಅಮೂಲ್ಯ ಲೋಹ ಮಾತ್ರವಲ್ಲ ಸಂಸ್ಕೃತಿಯ ಸಂಕೇತವೂ ಹೌದು. ಹೀಗಾಗಿ ಹಬ್ಬಗಳು ಮತ್ತು ಮದುವೆ ಋತುವಿನಲ್ಲಿ ಚಿನ್ನಾಭರಣಗಳಿಗೆ ಬೇಡಿಕೆ ಹೆಚ್ಚಾಗಿ ದರದ ಏರಿಳಿತಗಳಿಗೆ ಕಾರಣವಾಗುತ್ತದೆ. ಜತೆಗೆ ಪೂರೈಕೆಯಲ್ಲಿನ ಅಡೆತಡೆಗಳು ಮತ್ತು ಆಮದು ಸುಂಕದಲ್ಲಿನ ಬದಲಾವಣೆಗಳು ಸ್ಥಳೀಯ ಚಿನ್ನದ ಬೆಲೆಗಳ ಮೇಲೆ ಪರಿಣಾಮ ಬೀರುತ್ತದೆ.