ಬೆಂಗಳೂರು, ಜ.6: ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಮತ್ತೊಮ್ಮೆ ದೊಡ್ಡ ಶಾಕ್ ಎದುರಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರೀ ಏರಿಕೆ ದಾಖಲಾಗಿದೆ. ನಿನ್ನೆ ಪ್ರತಿ ಗ್ರಾಂಗೆ 145 ರೂ ಏರಿದ್ದ ಚಿನ್ನದ ಬೆಲೆ, ಇಂದು ಮತ್ತಷ್ಟು 130 ರೂ ಹೆಚ್ಚಳ ಕಂಡಿದ್ದು, ಒಟ್ಟಾರೆ ಎರಡು ದಿನಗಳಲ್ಲಿ 275 ರೂ ಏರಿಕೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿಯೂ ಚಿನ್ನದ ಬೆಲೆ ಹೆಚ್ಚಳವಾಗಿರುವುದು ದೇಶೀಯ ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ.
ಇದಕ್ಕೆ ಸಮಾನವಾಗಿ ಬೆಳ್ಳಿಯ ಬೆಲೆಯೂ ಭರ್ಜರಿ ಏರಿಕೆ ಕಂಡಿದೆ. ನಿನ್ನೆ 1 ಗ್ರಾಂಗೆ 6 ರೂ ಹೆಚ್ಚಿದ್ದ ಬೆಳ್ಳಿ ಬೆಲೆ, ಇಂದು ಕೂಡ ಅದೇ ಪ್ರಮಾಣದಲ್ಲಿ ಏರಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,27,250 ರೂ ಆಗಿದ್ದು, 24 ಕ್ಯಾರಟ್ ಅಪರಂಜಿ ಚಿನ್ನದ ಬೆಲೆ 1,38,820 ರೂಗೆ ತಲುಪಿದೆ. 100 ಗ್ರಾಂ ಬೆಳ್ಳಿಯ ಬೆಲೆ 25,300 ರೂ ಆಗಿದೆ.
ರಾಜಧಾನಿ ಬೆಂಗಳೂರಿನಲ್ಲಿಯೂ ಚಿನ್ನ–ಬೆಳ್ಳಿ ಬೆಲೆಗಳಲ್ಲಿ ಏರಿಕೆ ಕಂಡಿದ್ದು, 10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆ 1,27,250 ರೂ ಇದ್ದು, 100 ಗ್ರಾಂ ಬೆಳ್ಳಿ ಬೆಲೆ 25,300 ರೂ ಆಗಿದೆ. ತಮಿಳುನಾಡು, ಕೇರಳ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಬೆಳ್ಳಿ ಬೆಲೆ 100 ಗ್ರಾಂಗೆ 27,100 ರೂವರೆಗೆ ಏರಿಕೆಯಾಗಿದೆ.
ಭಾರತದಲ್ಲಿನ ಚಿನ್ನ–ಬೆಳ್ಳಿ ಬೆಲೆ (ಜನವರಿ 6)
24 ಕ್ಯಾರಟ್ ಚಿನ್ನ (1 ಗ್ರಾಂ): ₹13,882
22 ಕ್ಯಾರಟ್ ಚಿನ್ನ (1 ಗ್ರಾಂ): ₹12,725
18 ಕ್ಯಾರಟ್ ಚಿನ್ನ (1 ಗ್ರಾಂ): ₹10,412
ಬೆಳ್ಳಿ (1 ಗ್ರಾಂ): ₹253
ಬೆಂಗಳೂರಿನ ಚಿನ್ನ–ಬೆಳ್ಳಿ ಬೆಲೆ
24 ಕ್ಯಾರಟ್ ಚಿನ್ನ (1 ಗ್ರಾಂ): ₹13,882
22 ಕ್ಯಾರಟ್ ಚಿನ್ನ (1 ಗ್ರಾಂ): ₹12,725
ಬೆಳ್ಳಿ (1 ಗ್ರಾಂ): ₹253
ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಮುಂದಿನ ದಿನಗಳಲ್ಲಿಯೂ ಅಸ್ಥಿರತೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

