ಸಾಮಾನ್ಯವಾಗಿ ಅಭಿಮಾನಿಗಳಿಗೆ ತಮ್ಮ ನೆಚ್ಚಿನ ನಟ-ನಟಿಯರ ಬರ್ತ್‌ಡೇ ಎಂದರೆ ಎಲ್ಲಿಲ್ಲದ ಖುಷಿ, ಸಂಭ್ರಮ. ತಮ್ಮ ನೆಚ್ಚಿನ ಸ್ಟಾರ್‌ಗಳ ಹುಟ್ಟುಹಬ್ಬವನ್ನ ಅವರ ಜೊತೆಯೇ ಅದ್ದೂರಿಯಾಗಿ ಆಚರಿಸಲು ಖುಷಿ ಪಡುತ್ತಾರೆ.
ಸದ್ಯ ನಾಳೆ ಗೋಲ್ಡನ್ ಸ್ಟಾರ್ ಗಣೇಶ್ (Ganesh) ಅವರು ನಾಳೆ 46ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ಬಾರಿಯೂ ಅವರು ತಮ್ಮ ತಮ್ಮ ಹುಟ್ಟುಹಬ್ಬವನ್ನ ಆಚರಿಸಿಕೊಳ್ಳುತ್ತಿಲ್ಲ ಎಂದು ಅಭಿಮಾನಿಗಳಿಗೆ ಪತ್ರ ಬರೆದಿದ್ದಾರೆ.

ಕೊರೋನಾ ಹಾಗೂ ತಂದೆಯ ನಿಧನದಿಂದ ನಾಲ್ಕು ವರ್ಷಗಳಿಂದ ಬರ್ತ್ ಡೇ ಸೆಲೆಬ್ರೇಷನ್ ಗೆ ಬ್ರೇಕ್ ಗಣೇಶ್ ಬ್ರೇಕ್ ಹಾಕಿದ್ದರು. ಆದರಂತೆ ಈ ಬಾರಿಯೂ ನಾನು ಊರಲ್ಲಿ ಇಲ್ಲ. ಮುಂದಿನ ವರ್ಷ ಸಂಭ್ರಮಿಸೋಣ ಎಂದು ಮನವಿ ಮಾಡಿದ್ದಾರೆ.
ಜೂಲೈ 2 ರಂದು ನಾನು ನನ್ನ ಬೆಂಗಳೂರು ನಿವಾಸದಲ್ಲಿ ಲಭ್ಯವಿಲ್ಲ. ಅದೇಕೋ ತಮ್ಮೊಂದಿಗೆ ನನ್ನ ಹುಟ್ಟುಹಬ್ಬ ಆಚರಿಸಿಕೊಳ್ಳಬೇಕೆಂಬ ನನ್ನ ಹಂಬಲ ಈ ಬಾರಿಯೂ ಕೈಗೂಡುತತ್ತಿಲ್ಲ. ಹೀಗಾಗಿ ನನ್ನ ಪ್ರೀತಿಯ ಅಭಿಮಾನಿಗಳು ಮನೆಯ ಬಳಿ ಬಾರದೇ ತಾವು ಇದ್ದಲ್ಲಿಂದಲೇ ನನ್ನನ್ನು ಹರಿಸಿ, ಆಶೀರ್ವದಿಸಿ. ಮಂದಿನ ವರ್ಷ ಖಂಡಿತ ಒಟ್ಟಿಗೆ ಹುಟ್ಟುಹಬ್ಬ ಆಚರಿಸೋಣ. ಅನಾನುಕೂಲಕ್ಕೆ ಕ್ಷಮೆಯಿರಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಅಭಿಮಾನಿಗಳಲಲಿ ಮನವಿ ಮಾಡಿದ್ದಾರೆ.

