-ಸಿಎಂ ತವರಿನಲ್ಲಿ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್ ಧೂಳಿಪಟ
ಬೆಂಗಳೂರು: ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ (Teachers Constituency) ಕಾಂಗ್ರೆಸ್ ಅಭ್ಯರ್ಥಿಗಳು (Congress Candidates) ಗೆಲುವು ದಾಖಲಿಸಿದ್ದಾರೆ.
ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರಾಮೋಜಿಗೌಡ (Ramoji Gowda) 11,841 ಮೊದಲ ಪ್ರಾಶಸ್ತ್ಯ ಮತಗಳನ್ನು ಪಡೆದು, ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಡಿ.ಟಿ ಶ್ರೀನಿವಾಸ್ (DT. Srinivas ) 11,700ಕ್ಕೂ ಅಧಿಕ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಅಭ್ಯರ್ಥಿಗಳ ಗೆಲುವನ್ನು ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಸಂಭ್ರಮಿಸಿದ್ದಾರೆ. ಇದನ್ನೂ ಓದಿ: 3 ನೇ ಬಾರಿ ಪ್ರಧಾನಿಯಾಗಿ ಮೋದಿ ಜೂ.9 ರಂದು ಪ್ರಮಾಣ ವಚನ
ಮೈತ್ರಿ ಅಭ್ಯರ್ಥಿಗೂ ಗೆಲುವು:
ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ.ಧನಂಜಯ್ ಸರ್ಜಿಗೆ ಭರ್ಜರಿ ಗೆಲುವಾಗಿದೆ. 37,627 ಮತಗಳನ್ನು ಪಡೆದುಕೊಂಡಿರುವ ಸರ್ಜಿ 6,935 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.ಇದನ್ನೂ ಓದಿ: ವಿಧಾನ ಪರಿಷತ್ ಚುನಾವಣೆಗೆ ಅವಿರೋಧವಾಗಿ 11 ಅಭ್ಯರ್ಥಿಗಳು ಆಯ್ಕೆ
ಇನ್ನೂ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ರಘುಪತಿ ಭಟ್ 7,039 ಮತಗಳನ್ನ ಪಡೆದುಕೊಂಡರೇ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ 13,516 ಮತಗಳನ್ನ ಪಡೆದು ಸೋಲು ಕಂಡಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪ ಪ್ರಕರಣ: ಮತ್ತೆ 4 ದಿನ ಪ್ರಜ್ವಲ್ ರೇವಣ್ಣ ಪೊಲೀಸ್ ಕಸ್ಟಡಿಗೆ
ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಎರಡು ಚುನಾವಣೆಗಳಲ್ಲಿ ಕಾಂಗ್ರೆಸ್ ಧೂಳಿಪಟವಾಗಿದೆ. ಇತ್ತೀಚೆಗಷ್ಟೇ ಮೈಸೂರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡಿತ್ತು. ಗುರುವಾರವೂ ಶಿಕ್ಷಕರ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಸೋತಿದ್ದರು. ಇದೀಗ ನೈರುತ್ಯ ಪದವೀಧರರ ಕ್ಷೇತ್ರದ ಚುನಾವಣೆಯಲ್ಲೂ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೀನಾಯ ಸೋಲು ಕಂಡಿದ್ದು, ಕಾಂಗ್ರೆಸ್‌ಗೆ ಮುಖಭಂಗವಾಗಿದೆ.ಇದನ್ನೂ ಓದಿ: ಚುನಾವಣೆಯಲ್ಲಿ ಗೆದ್ದ ಬಾಲಯ್ಯಗೆ ಅಭಿನಂದನೆ ತಿಳಿಸಿದ ಕಾಜಲ್

