ಬೀಜಿಂಗ್: ಜಪಾನ್ ಪ್ರವಾಸದ ಬಳಿಕ ಇದೀಗ ಪ್ರಧಾನಿ ಮೋದಿ ಚೀನಾ ಪ್ರವಾಸ ಕೈಗೊಂಡಿದ್ದು, ಟಿಯಾಂಜಿನ್‌ಗೆ ಬಂದಿಳಿದಿದ್ದಾರೆ. 7 ವರ್ಷಗಳ ನಂತರ ಪ್ರಧಾನಿ ಮೋದಿ ಚೀನಾಗೆ ಭೇಟಿ ನೀಡುತ್ತಿದ್ದು, ಇಂದಿನಿಂದ (ಆ.30) ಸೆ.1ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಶನಿವಾರ (ಆ.30) ಸಂಜೆ 5ರ ಸುಮಾರಿಗೆ ಟಿಯಾಂಜಿನ್‌ಗೆ ಬಂದಿಳಿದ ಪ್ರಧಾನಿ ಮೋದಿಯನ್ನು ಅಲ್ಲಿನ ಭಾರತೀಯ ಸಮುದಾಯ ಪ್ರೀತಿಯಿಂದ ಬರಮಾಡಿಕೊಂಡಿತು.
ಚೀನಾದ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ ಶಾಂಘೈ ಸಹಕಾರ ಮಂಡಳಿ ರಾಷ್ಟ್ರಗಳ ಮುಖ್ಯಸ್ಥರ ಮಂಡಳಿಯ 25ನೇ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಆ.31ರಂದು ಸಭೆಯ ಔತಣಕೂಟದಲ್ಲಿ ಭಾಗಿಯಾಗಲಿದ್ದು, ಸೆ.1ರಂದು ಮುಖ್ಯ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಯದಲ್ಲಿ ಪ್ರಧಾನಿ ಮೋದಿ ಕೆಲವು ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ.

ಇನ್ನೂ ಭಾನುವಾರ (ಆ.31) ಚೀನಾ ಅಧ್ಯಕ್ಷ ಕ್ಷಿ ಜಿನ್‌ಪಿಂಗ್ ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿರುವ ಹೆಚ್ಚುವರಿ ಆಮದು ಸುಂಕದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಜೊತೆಗೆ ರಷ್ಯಾ ಅಧ್ಯಕ್ಷ ಪುಟಿನ್ (Putin) ಅವರನ್ನು ಭೇಟಿಯಾಗಲಿದ್ದಾರೆ.

ಜಪಾನ್ ಭೇಟಿಗೂ ಮುನ್ನ ಸಂದರ್ಶನವೊಂದರಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ-ಚೀನಾ ಸಂಬಂಧ ಬಹಳ ನಿರ್ಣಾಯಕವಾಗಿವೆ ಮತ್ತು ಇದು ಎರಡೂ ದೇಶಗಳ ನಡುವಿನ ಶಾಂತಿ ಮತ್ತು ಸಮೃದ್ಧಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತವೆ ಎಂದರು.
“ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಆಹ್ವಾನದ ಮೇರೆಗೆ, ನಾನು ಇಲ್ಲಿಂದ ಟಿಯಾಂಜಿನ್‌ಗೆ SCO ಶೃಂಗಸಭೆಯಲ್ಲಿ ಭಾಗವಹಿಸಲು ತೆರಳುತ್ತೇನೆ. ಕಳೆದ ವರ್ಷ ನಾನು ಕಜಾನ್‌ನಲ್ಲಿ (ರಷ್ಯಾದಲ್ಲಿ ನಡೆದ SCO ಶೃಂಗಸಭೆಯಲ್ಲಿ) ಕ್ಸಿ ಜಿನ್ಪಿಂಗ್ರನ್ನು ಭೇಟಿಯಾಗಿದ್ದೆ. ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ನಾವು ಸ್ಥಿರ ಮತ್ತು ಸಕಾರಾತ್ಮಕ ಪ್ರಗತಿಯನ್ನು ಸಾಧಿಸಿದ್ದೇವೆ” ಎಂದು ಮೋದಿ ಹೇಳಿದ್ದಾರೆ.
ಮೋದಿ-ಪುಟಿನ್ ಮಾತುಕತೆ :
ಈ ಶೃಂಗಸಭೆಯ ಸಮಯದಲ್ಲಿ ಪ್ರಧಾನಿ ಮೋದಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಟ್ರಂಪ್ರ ಸುಂಕಗಳ ಪರಿಣಾಮ, ಯುಕ್ರೇನ್‌ನೊಂದಿಗಿನ ರಷ್ಯಾದ ಸಂಘರ್ಷ ಮತ್ತು ಗಾಜಾದಲ್ಲಿನ ಪರಿಸ್ಥಿತಿಯ ಬಗ್ಗೆ ಮೋದಿ ಮತ್ತು ಪುಟಿನ್ ಚರ್ಚಿಸುವ ಸಾಧ್ಯತೆಯಿದೆ,

