By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 2030ರ ವೇಳೆಗೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳ ಬಳಕೆ : ಕೇಂದ್ರ ಸಚಿವ ಕುಮಾರಸ್ವಾಮಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - 2030ರ ವೇಳೆಗೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳ ಬಳಕೆ : ಕೇಂದ್ರ ಸಚಿವ ಕುಮಾರಸ್ವಾಮಿ

BlogLatestರಾಷ್ಟ್ರೀಯ-National

2030ರ ವೇಳೆಗೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳ ಬಳಕೆ : ಕೇಂದ್ರ ಸಚಿವ ಕುಮಾರಸ್ವಾಮಿ

GREEN PLATE EV RALLY at Bharat Mandapam

Published September 9, 2024
Share
2 Min Read
GREEN PLATE EV RALLY at Bharat Mandapam
SHARE

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಕನಸಿನಂತೆ 2030ರ ವೇಳೆಗೆ ಶೇ.30ರಷ್ಟು ಎಲೆಕ್ಟ್ರಿಕ್ ವಾಹನಗಳನ್ನು ಬಳಕೆ ಮಾಡಲು ಗುರಿ ನಿಗದಿಪಡಿಸಲಾಗಿದ್ದು, ಆ ಗುರಿ ಮುಟ್ಟಲು ಸರ್ವ ಪ್ರಯತ್ನಗಳನ್ನು ಮಾಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.

ವಿಶ್ವ EV (ಎಲೆಕ್ಟ್ರಿಕ್ ವಾಹನ) ದಿನ ಅಂಗವಾಗಿ ಭಾರತೀಯ ಅಟೋಮೊಬೈಲ್ ಸೊಸೈಟಿ (Society of Indian Automobile Manufacturers-SIAM) ಹಮ್ಮಿಕೊಂಡಿದ್ದ ಎರಡನೇ ಆವೃತ್ತಿಯ ಎಲೆಕ್ಟ್ರಿಕ್ ವಾಹನಗಳ ರಾಲಿಯನ್ನು ಸಚಿವರು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸುವ ಮುನ್ನ ಮಾತನಾಡಿದರು.

👉 Please Follow our WhatsApp Channel for BREAKING News

ಪ್ರಧಾನಿಗಳು ನಿಗದಿಪಡಿಸಿರುವ ಗುರಿ ಮುಟ್ಟಲು ಈಗಾಗಲೇ ಅನೇಕ ನೀತಿಗಳನ್ನು ರೂಪಿಸಲಾಗಿದ್ದು, ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಎಲೆಕ್ಟ್ರೀಕ್ ವಾಹನ (EV) ಉದ್ಯಮವೂ ಭಾರತದಲ್ಲಿ ವೆಗಗತಿಯಲ್ಲಿ ಬೆಳೆಯುತ್ತಿದೆ ಎಂದು ಅವರು ಹೇಳಿದರು.

ಅಮೇರಿಕಾದಲ್ಲಿ ಆರ್‌ಎಸ್‌‍ಎಸ್‌‍ ಮತ್ತು ಮೋದಿಯನ್ನು ಟಾರ್ಗೆಟ್ ಮಾಡಿದ ರಾಹುಲ್ ಗಾಂಧಿ

ಪರಿಸರಕ್ಕೆ ಪೂರಕವಾದ ರೀತಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ತಯಾರಿಕೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಗ್ರಾಹಕರಿಗೆ ಸುಲಭವಾಗಿ ಕೈಗೆಟುಕುವಂತೆ ಕ್ರಮ ವಹಿಸಲಾಗಿದೆ ಎಂದು ಕೇಂದ್ರ ಸಚಿವರು ನುಡಿದರು.

ಮುಂದಿನ ಪೀಳಿಗೆಯ ಇಂಧನ ಕ್ಷಮತೆ ತಂತ್ರಜ್ಞಾನ ಅಭಿವೃದ್ಧಿಗೆ ಒತ್ತು ನೀಡುವ ಹಿನ್ನೆಲೆಯಲ್ಲಿ ಸುಧಾರಿತ ಬ್ಯಾಟರಿ ಸೇಲ್‌ಗಳಿಗೆ (ACC) ಪ್ರೋಡಕ್ಷನ್ ಲಿಂಕ್ಡ್ ಇನ್ಸೆಂಟಿವ್ ((PLI) ಯೋಜನೆಯನ್ನು ಜಾರಿ ಮಾಡಲಾಗಿದೆ ಎಂದ ಸಚಿವರು; ₹18,100 ಕೋಟಿ ಗುರಿಯ ಅನುದಾನ ಹೊಂದಿರುವ ಈ ಯೋಜನೆಯು 50 ಗಿಗಾ ವಾಟ್-ಗೋಚಾರ್ (GWh) ಉತ್ಪಾದನಾ ಸಾಮರ್ಥ್ಯವನ್ನು ಹೊಂದಲು ಉದ್ದೇಶಿಸಲಾಗಿದೆ. ಮೂರು ಕಂಪನಿಗಳು ಈಗಾಗಲೇ 30 GWh ನೀಡಲು ಸಾಮರ್ಥ್ಯ ಹೊಂದಿವೆ ಎಂದು ಸಚಿವರು ವಿವರಿಸಿದರು.

FAME-II ಯೋಜನೆಯು ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನಗಳ ತಯಾರಿಕೆಗೆ ಕೊಡಲಾಗುತ್ತಿರುವ ಪ್ರೋತ್ಸಾಹವನ್ನು ಮುಂದುವರಿಸಲಾಗುವುದು. ಇದಕ್ಕೆ ₹15,500 ಕೋಟಿ ಹಣವನ್ನು ಒದಗಿಸಲು ಬಜೆಟ್ ನಿರ್ಧರಿಸಲಾಗಿದ್ದು , ಮಾಲಿನ್ಯ ಕಡಿಮೆ ಮಾಡುವುದು ಮತ್ತು ದೇಶಾದ್ಯಂತ ಸಾರ್ವಜನಿಕ ಸಾರಿಗೆಯನ್ನು ವಿದ್ಯುದೀಕರಿಸಲು ಈ ಮೊತ್ತವನ್ನು ಮೀಸಲಿಡಲಾಗಿದೆ ಎಂದು ಸಚಿವರು ಹೇಳಿದರು.

ಇದರೊಂದಿಗೆ ಮಾರ್ಚ್ 2024ರಲ್ಲಿ ಆರಂಭವಾದ ಎಲೆಕ್ಟ್ರಿಕ್ ಮೋಬಿಲಿಟಿ ಪ್ರೋತ್ಸಾಹ ಯೋಜನೆ (EMPS) ಸರಕಾರ ಹೆಚ್ಚು ಒತ್ತು ನೀಡಿದೆ. ವರ್ಷದಿಂದ ವರ್ಷಕ್ಕೆ ಇದು ವೃದ್ಧಿಯಾಗುತ್ತಲೇ ಇದೆ. ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ವ್ಯಾಪಕ ಬಳಕೆಗಾಗಿ ಸರ್ಕಾರದ ಅಚಲ ಬದ್ಧತೆ ಹೊಂದಿದೆ ಎಂದು ಅವರು ಹೇಳಿದರು.

ಈ ಕಾರ್ಯಕ್ರಮದಲ್ಲಿ ಫಾರ್ಮುಲಾ ಒನ್ ರೇಸರ್ ಕಾರ್ತಿಕ್ ನಾರಾಯಣ್, SIAM ಅಧ್ಯಕ್ಷ ವಿನೋದ ಅಗರ್ವಾಲ್ , ಉಪಾಧ್ಯಕ್ಷ ಶೈಲೇಶ್ ಚಂದ್ರ, ನಿರ್ದೇಶಕರಾದ ರಾಜೇಶ್ ಮೆನನ್ ಮತ್ತು ಡೈರೆಕ್ಟರ್ ಜನರಲ್ ಪ್ರಶಾಂತ್ ಬ್ಯಾನರ್ಜಿ ಸೇರಿದಂತೆ ಉದ್ಯಮದ ಪ್ರಮುಖ ನಾಯಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ರಾಲಿಗೆ ಹಸಿರು ನಿಶಾನೆ ತೋರಿಸುವ ಮುನ್ನ ಅವರು ಎಲೆಕ್ಟ್ರಿಕ್ ಆಟೋವನ್ನು ಚಾಲನೆ ಮಾಡಿದರು. ನಂತರ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಚಾಲನೆ ಮಾಡಿದರು.

You Might Also Like

ಕರಾಳ ಶನಿವಾರ : ರಾಜ್ಯದಲ್ಲಿ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ 10ಕ್ಕೂ ಹೆಚ್ಚು ಮಂದಿ ಸಾವು

ಯೋಗಕ್ಕೆ ನಮ್ಮ‌ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವಿದೆ – ಹೆಚ್‌ಡಿಕೆ

ಇರಾನ್​ನಲ್ಲಿ ಬಸ್​ ಪಲ್ಟಿಯಾಗಿ 35 ಪಾಕ್ ಪ್ರಯಾಣಿಕರು ಸಾವು

Saudi Arabia : ಸೌದಿ ಅರೇಬಿಯಾದಲ್ಲಿ 42 ಭಾರತೀಯರ ಸಜೀವ ದಹನ..!

ಸಂವಿಧಾನ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯಾತೀತ’ ಪದಗಳನ್ನ ತೆಗೆಯಲು ಸಾಧ್ಯವಿಲ್ಲ : ಸುಪ್ರೀಂ

TAGGED:Kumaraswamy
Share This Article
Facebook Copy Link Print
Previous Article Rahul Gandhi attacks PM Modi, RSS in US ಅಮೇರಿಕಾದಲ್ಲಿ ಆರ್‌ಎಸ್‌‍ಎಸ್‌‍ ಮತ್ತು ಮೋದಿಯನ್ನು ಟಾರ್ಗೆಟ್ ಮಾಡಿದ ರಾಹುಲ್ ಗಾಂಧಿ
Next Article Journalism ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up