ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನ ಚುನಾವಣಾ ಪೂರ್ಣದಲ್ಲಿ ಘೋಷಿಸಿತ್ತು. ಹಂತ ಹಂತವಾಗಿ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳನ್ನ ಜಾರಿಗೊಳಿಸಿದ್ದು, ಪಂಚ ಗ್ಯಾರಂಟಿಗಳ ಫೈಕಿ ಗೃಹ ಲಕ್ಷ್ಮಿ ಯೋಜನೆಯಡಿ ಪ್ರತಿ ಮನೆಯ ಮಹಿಳೆಗೆ 2000 ಹಣ ನೀಡಲಾಗುತ್ತಿತ್ತು.
ಆದರೆ, ಕಳೆದ ಕೆಲವು ತಿಂಗಳಿಂದ ಹಣ ಜಮಾ ಆಗದ ಹಿನ್ನೆಲೆ ಮಹಳಾ ಫಲಾನುಭವಿಗಳು ಆಕ್ರೋಶವನ್ನ ವ್ಯಕ್ತಪಡಿಸುತ್ತಿದ್ದಾರೆ.ಈ ಕುರಿತು ಪ್ರತಿಕ್ರಿಯಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಜನವರಿ, ಫೆಬ್ರವರಿ ಹಾಗೂ ಮಾರ್ಚ್ ತಿಂಗಳು ಹಣ ಬಾಕಿ ಉಳಿದಿದೆ.
ಈ ಬಾಕಿ ಉಳಿದ ಹಣವನ್ನ ಹಂತ ಹಂತವಾಗಿ ಮೇ ತಿಂಗಳಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದು, ಆದಷ್ಟು ಶೀಘ್ರದಲ್ಲಿ ಹಣ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.

