ಅಹಮದಾಬಾದ್: ಕರ್ನಾಟಕದಲ್ಲಿ ಎರಡು ಎಚ್‌ಎಂಪಿವಿ (ಹ್ಯೂಮನ್ ಮೆಟಾಪ್ನ್ಯೂಮೋವೈರಸ್) ಪ್ರಕರಣಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ದೃಢಪಡಿಸಿದ ಕೆಲವೇ ಗಂಟೆಗಳ ನಂತರ ಗುಜರಾತ್‌ನ ಅಹಮದಾಬಾದ್‌ನಲ್ಲಿ ಮತ್ತೊಂದು HMPV ಪ್ರಕರಣ ಪತ್ತೆಯಾಗಿದೆ. ಇದು ಗುಜರಾತ್‌ನಲ್ಲಿ ಎಚ್‌ಎಂಪಿವಿ ಮೊದಲ ಪ್ರಕರಣವಾಗಿದೆ.
ಅಹಮದಾಬಾದ್ನ 2 ವರ್ಷ ವಯಸ್ಸಿನ ಮಗುವಿನಲ್ಲಿ ಎಚ್‌ಎಂಪಿವಿ ವೈರಸ್ ಪತ್ತೆಯಾಗಿದೆ. ಆ ಶಿಶುವನ್ನು ಅಹಮದಾಬಾದ್‌ನ ಚಂದ್‌ಖೇಡಾ ಪ್ರದೇಶದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆ ಮಗು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿತ್ತು.
ಈ ಮೊದಲು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಕರ್ನಾಟಕದಲ್ಲಿ ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (ಎಚ್‌ಎಂಪಿವಿ)ಯ ಎರಡು ಪ್ರಕರಣಗಳನ್ನು ಖಚಿತಪಡಿಸಿತ್ತು. ಬಹಳ ಉಸಿರಾಟದ ವೈರಲ್ ರೋಗಕಾರಕಗಳ ಮೂಲಕ ಪತ್ತೆ ಮಾಡಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ತಿಳಿಸಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿದ್ದ 3 ತಿಂಗಳ ಹೆಣ್ಣು ಮಗುವಿನಲ್ಲಿ ಎಚ್‌ಎಂಪಿವಿ ಇರುವುದು ಪತ್ತೆಯಾಗಿದೆ. ಆ ಮಗುವನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

