ಸಬರಕಾಂತ: ಗುಜರಾತ್ನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ್ದಾರೆ. ಗುಜರಾತ್ನ ಸಬರಕಾಂತ ಜಿಲ್ಲೆಯಲ್ಲಿ ದೇವಸ್ಥಾನದಿಂದ ಹಿಂದಿರುಗುವಾಗ ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಟ್ರಕ್ಗೆ ಕಾರು ಡಿಕ್ಕಿಯಾಗಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅರಾವಳಿ ಜಿಲ್ಲೆಯಲ್ಲಿರುವ ಶಾಮಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಅಹಮದಾಬಾದ್ಗೆ ಹಿಂತಿರುಗುತ್ತಿದ್ದಾಗ ಕಾರು ಹಿಮ್ಮತ್ನಗರ ಪ್ರದೇಶದ ಸಹಕಾರಿ ಗಿರಣಿ ಬಳಿ ಬಂದ ತಕ್ಷಣ ಟ್ರಕ್ಗೆ ಡಿಕ್ಕಿ ಹೊಡೆದಿದೆ, ಕಾರಿನಲ್ಲಿದ್ದ ಎಂಟು ಜನರ ಪೈಕಿ 7 ಮಂದಿ ಸಾವನ್ನಪ್ಪಿದ್ದಾರೆ. ಪ್ರಾಣ ಕಳೆದುಕೊಂಡವರೆಲ್ಲರೂ ಅಹಮದಾಬಾದ್ ನಿವಾಸಿಗಳು.
ಅಗ್ನಿಶಾಮಕ ದಳದ ಸಿಬ್ಬಂದಿಯೊಂದಿಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಕತಾರ್ ಬಳಸಿ ಕಾರಿನಿಂದ ಶವಗಳನ್ನು ಹೊರತೆಗೆದಿದ್ದಾರೆ. ಪೊಲೀಸರು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಅಪಘಾತದ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಕಾರು ಅತಿವೇಗ ಮತ್ತು ಚಾಲಕ ನಿದ್ದೆಗೆ ಜಾರಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಹಠಾತ್ ನಿದ್ದೆ ಜಾಸ್ತಿಯಾದ ಕಾರಣ ಮುಂದೆ ಹೋಗುತ್ತಿದ್ದ ಟ್ರಕ್ ಕಾಣಿಸದೇ ಕಾರು ನೇರವಾಗಿ ಡಿಕ್ಕಿ ಹೊಡೆದಿದೆ. ಹಿಂದಿನಿಂದ ಟ್ರಕ್ಗೆ ಡಿಕ್ಕಿ ಹೊಡೆದಿದ್ದರಿಂದ ಕಾರು ಮುಂಭಾಗದಿಂದ ತೀವ್ರವಾಗಿ ನಜ್ಜುಗುಜ್ಜಾಗಿದೆ ಎಂದು ಹೇಳಿದ್ದಾರೆ.