ನವದೆಹಲಿ : ಜಮ್ಮು ಮತ್ತು ಕಾಶ್ಮೀರ, ಹರಿಯಾಣ ವಿಧಾನಸಭೆ ಚುನಾವಣೆ 2024ರ ಫಲಿತಾಂಶಗಳು ಪ್ರಕಟವಾಗುತ್ತಿದ್ದು ಹರಿಯಾಣದಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಸಾಧಿಸಿದೆ. 51 ಕ್ಷೇತ್ರಗಳಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಬಿಜೆಪಿ 36 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.
ಹರಿಯಾಣದ ಎಲ್ಲಾ 90 ಅಸೆಂಬ್ಲಿ ಸ್ಥಾನಗಳಿಗೆ ಅಕ್ಟೋಬರ್ 5 ರಂದು ಮತದಾನ ನಡೆಯಿತು. ಭಾರತೀಯ ಜನತಾ ಪಕ್ಷ (ಬಿಜೆಪಿ), ಕಾಂಗ್ರೆಸ್, ಜನನಾಯಕ್ ಜನತಾ ಪಕ್ಷ (ಜೆಜೆಪಿ), ಮತ್ತು ಇಂಡಿಯನ್ ನ್ಯಾಷನಲ್ ಲೋಕ ದಳ (ಐಎನ್‌ಎಲ್‌ಡಿ) ಹರಿಯಾಣದಲ್ಲಿ ಪ್ರಮುಖ ಪಕ್ಷಗಳಾಗಿವೆ. ಜೆಜೆಪಿಯು ಆಜಾದ್ ಸಮಾಜ ಪಕ್ಷದೊಂದಿಗೆ (ಕಾನ್ಶಿ ರಾಮ್) ಮೈತ್ರಿ ಮಾಡಿಕೊಂಡಿದ್ದರೆ, ಐಎನ್‌ಎಲ್‌ಡಿ ಬಹುಜನ ಸಮಾಜ ಪಕ್ಷ (ಬಿಎಸ್‌ಪಿ) ಜೊತೆ ಮೈತ್ರಿ ಮಾಡಿಕೊಂಡಿದೆ.
ಜಮ್ಮುಕಾಶ್ಮೀರದಲ್ಲಿ ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೆ, 51 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿದೆ. ಪಿಡಿಪಿ 4 ಕ್ಷೇತ್ರಗಳಲ್ಲಿ, ಇತರರು 8 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. 2014 ರಲ್ಲಿ ಸರ್ಕಾರ ರಚಿಸಿದ ಮೆಹಬೂಬಾ ಮುಫ್ತಿ ಅವರ ಪಿಡಿಪಿ ಕೇವಲ ಮೂರು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಜನರ ತೀರ್ಪಿಗೆ ತಲೆಬಾಗುತ್ತೇನೆ : ಮುಫ್ತಿ ಪುತ್ರಿ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯಲ್ಲಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಪುತ್ರಿ ಇಲ್ತಿಜಾ ಮುಫ್ತಿ ಸೋಲೊಪ್ಪಿಕೊಂಡಿದ್ದಾರೆ. ಮಂಗಳವಾರ ಪ್ರಕಟವಾದ ಫಲಿತಾಂಶದಲ್ಲಿ ಅವರು 5,000ಕ್ಕೂ ಹೆಚ್ಚು ಮತಗಳಿಂದ ಪರಾಭವಗೊಂಡಿದ್ದಾರೆ.
ನಾನು ಜನರ ತೀರ್ಪನ್ನು ಸ್ವೀಕರಿಸುತ್ತೇನೆ. ಬಿಲ್ಬೆಹರಾದಲ್ಲಿ ನಾನು ಜನರಿಂದ ಸ್ವೀಕರಿಸಿರುವ ಪ್ರೀತಿ ಮತ್ತು ಅಕ್ಕರೆ ಎಂದೂ ನನ್ನ ನೆನಪಿನಲ್ಲಿರುತ್ತದೆ. ಇಡೀ ಚುನಾವಣಾ ಪ್ರಚಾರದಲ್ಲಿ ಕಠಿಣ ಪರಿಶ್ರಮ ಹಾಕಿದ ಪಿಡಿಪಿ ಕಾರ್ಯಕರ್ತರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಇದೇ ಪ್ರಥಮ ಬಾರಿಗೆ ಚುನಾವಣಾ ಕಣಕ್ಕಿಳಿದಿದ್ದ ಇಲ್ತಿಜಾ ಮುಫ್ತಿ ಹೇಳಿದ್ದಾರೆ.
ವಿಧಾನಸಭೆಯಲ್ಲಿ 90 ಸದಸ್ಯಬಲ ಹೊಂದಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18 ರಿಂದ ಅಕ್ಟೋಬರ್ 1 ರವರೆಗೆ ಮೂರು ಹಂತಗಳಲ್ಲಿ ಮತದಾನ ನಡೆದವು. ಇದು 10 ವರ್ಷಗಳಲ್ಲಿ ನಡೆದ ಮೊದಲ ಚುನಾವಣೆಯಾಗಿದೆ. ಸದ್ಯ ಕಾಂಗ್ರೆಸ್ 50ರಲ್ಲಿ ಮತ್ತು ಬಿಜೆಪಿ 20 ಸ್ಥಾನದಲ್ಲಿ ಮುನ್ನಡೆ ಸಾಧಿಸಿವೆ. ಸ್ಪಷ್ಟ ಬಹುಮತ ದಾಟಿ ಸರ್ಕಾರ ರಚನೆಯತ್ತ ಕಾಂಗ್ರೆಸ್ ದಾಪುಗಾಲು ಇಡುತ್ತಿದೆ.