ಹಾಸನ : ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದ್ದು, ವಿಡಿಯೋ ಮಾಡಿ ಸಂತ್ರಸ್ತೆಯ ಸಹೋದರನಿಗೆ ಕಳಿಸಿರುವಂತಹ ಘಟನೆ ಹಾಸನದ ) ಪೆನ್‌ಷನ್ ಮೊಹಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಘಟನೆ ಸಂಬಂಧ ಸಂತ್ರಸ್ತೆ ಸಹೋದರ ಪೊಲೀಸರಿಗೆ ದೂರು ನೀಡಿದ್ದು, ಮೂವರು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ.
ದುರುಳರು ಬುದ್ಧಿಮಾಂದ್ಯ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ. ಆ ಪೈಶಾಚಿಕ ಕೃತ್ಯದ ವಿಡಿಯೋವನ್ನು ಸಂತ್ರಸ್ತೆಯ ಸಹೋದರನಿಗೆ ಕಳುಹಿಸಿ ಬಳಿಕ ಡಿಲೀಟ್ ಮಾಡಿದ್ದಾರೆ. ಇತ್ತ ವಿಡಿಯೋ ನೋಡಿದ ಸಂತ್ರಸ್ತೆಯ ಕುಟುಂಬ ಬೆಚ್ಚಿಬಿದ್ದಿದೆ.
ಸದ್ಯ ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತೆ ಸಹೋದರ ಪೊಲೀಸರಿಗೆ ದೂರು ಹಿನ್ನಲೆ ಅಬ್ದುಲ್ ಅಫ್ತಾಬ್, ರಾಜಿಕ್ ಪಾಷಾ ಮತ್ತು ಉಮ್ರಾನ್ ವಿರುದ್ಧ ಪ್ರಕರಣ ದಾಖಲಾಗಿದೆ. ಆರೋಪಿಗಳ ಹುಡುಕಾಟದ ಜೊತೆಗೆ ಅತ್ಯಾಚಾರ ನಡೆದ ಸ್ಥಳ, ಯಾವಾಗ ನಡೆದಿದೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದಾರೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

