By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ವಿಚಾರ : ಹೆಚ್ಡಿಕೆ ಮಹತ್ವದ ಹೇಳಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Blog - ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ವಿಚಾರ : ಹೆಚ್ಡಿಕೆ ಮಹತ್ವದ ಹೇಳಿಕೆ

BlogLatestTop Storiesರಾಜಕೀಯ | Politics

ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ವಿಚಾರ : ಹೆಚ್ಡಿಕೆ ಮಹತ್ವದ ಹೇಳಿಕೆ

HD Kumaraswamy on Channapatna by-election candidate

Published October 10, 2024
Share
3 Min Read
HD Kumaraswamy
SHARE

ರಾಮನಗರ/ಚನ್ನಪಟ್ಟಣ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಚನ್ನಪಟ್ಟಣದಲ್ಲಿ ಗುರುವಾರ ಕಾರ್ಯಕರ್ತರ ಸಭೆಗೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ಯೋಗೇಶ್ವರ್ ಅವರಿಗೆ ಅಥವಾ ಇನ್ನಾರಿಗೆ ಆಗಲಿ ಕ್ಷೇತ್ರವನ್ನು ಬಿಟ್ಟುಕೊಡಬೇಕೆಂದು ಬಿಜೆಪಿ ವರಿಷ್ಠರ ಜತೆ ಒಪ್ಪಂದವಾಗಿರಲಿಲ್ಲ ಎಂಬ ಅಂಶವನ್ನು ಇಟ್ಟಿ ಹೇಳಿದರು.

ಚುನಾವಣೆ ಸಮೀಪಿಸುತ್ತಿದೆ. ಆವತ್ತು ಏನೇನು ನಡೆಯಿತು ಎಂದು ಹೇಳಲೇಬೇಕು. ಜನರಿಗೆ ಸತ್ಯ ಗೊತ್ತಾಗಬೇಕು ಎಂಬುದು ನನ್ನ ಉದ್ದೇಶ ಎಂದು ಸಚಿವರು ಹೇಳಿದರು.

ದಸರಾ ಮತ್ತು ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಊರುಗಳತ್ತ ಹೊರಟ ಜನ, ಬಸ್ಸುಗಳು ರಶ್, ಟ್ರಾಫಿಕ್ ಜಾಮ್

ಬೆಂಗಳೂರು ಗ್ರಾಮಾಂತರ ಲೋಕಾಸಭೆ ಕ್ಷೇತ್ರದಿಂದ ಡಾ ಸಿಎನ್ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಯಾಗಲು ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರೇ ಮೂಲ ಕಾರಣ. ಅವರ ಒತ್ತಾಯಕ್ಕೆ ಗೌರವ ಕೊಟ್ಟು, ಅವರ ಮಾತಿಗೆ ತಲೆಬಾಗಿ ಅವರನ್ನು ಅಭ್ಯರ್ಥಿ ಮಾಡಲಾಯಿತು.

ಅದಕ್ಕೂ ಮೊದಲು ನಾನು ಸಿ.ಪಿ.ಯೋಗೇಶ್ವರ್ ಅವರೇ ಗ್ರಾಮಾಂತರ ಕ್ಷೇತ್ರಕ್ಕೆ ಅಭ್ಯರ್ಥಿ ಆಗಬೇಕು ಎಂದು ಹೇಳಿದ್ದೆ. ಅವರನ್ನು ಗೆಲ್ಲಿಸಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರದ್ದು ಎಂದು ಪದೇಪದೆ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಅವರು ಅಂದಿನ ಬೆಳವಣಿಗೆಗಳ ಮೇಲೆ ಬೆಳಕು ಚೆಲ್ಲಿದರು.

ಈ ಕ್ಷಣದ ತನಕ ಚನ್ನಪಟ್ಟಣ ಕ್ಷೇತ್ರದಲ್ಲಿ ಅಭ್ಯರ್ಥಿ ಯಾರಾಗಬೇಕು ಎಂದು ನಾನು ನಿರ್ಧಾರ ಮಾಡಿಲ್ಲ. ಕಾರ್ಯಕರ್ತರ ಸಭೆಗಳನ್ನು ಮಾಡಲಾಗುತ್ತಿದೆ. ಅಂತಿಮವಾಗಿ ರಾಜ್ಯ ಮತ್ತು ದೆಹಲಿ ಮಟ್ಟದ ನಾಯಕರ ಜತೆ ಚರ್ಚೆ ನಡೆಸಿ ನಿರ್ಧಾರ ಮಾಡಲಾಗುವುದು.

ಬಿಜೆಪಿ ನಾಯಕರು, ಕಾರ್ಯಕರ್ತರು ಸಭೆ ಮಾಡಿರುವುದರಲ್ಲಿ ತಪ್ಪೇನಿಲ್ಲ. ಅದನ್ನು ತಪ್ಪು ಎಂದು ನಾನು ಹೇಳಲಾರೆ. ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆ. ಕಾರ್ಯಕರ್ತರ ಅಭಿಪ್ರಾಯದಂತೆ ನಾನು ನಿರ್ಧಾರ ಕೈಗೊಳ್ಳಬೇಕಿದೆ. ಏಕೆಂದರೆ ಕಾರ್ಯಕರ್ತರು ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಿಕೊಂಡಿದ್ದಾರೆ. ಅವರ ಅಭಿಪ್ರಾಯಕ್ಕೆ ವಿರುದ್ಧವಾಗಿ ನಾನು ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವರು ಹೇಳಿದರು.
ನಾನು ಪ್ರಾಥಮಿಕ ಹಂತದಲ್ಲಿಯೇ ಯೋಗೇಶ್ವರ್ ಅವರಿಗೆ ಹೇಳಿದ್ದೆ. ಜೆಡಿಎಸ್ ಬಿಜೆಪಿ ಒಂದಾದರೆ ಇಲ್ಲಿ ಗೆಲ್ಲುವುದು ಕಷ್ಟವಲ್ಲ. ಕಾಂಗ್ರೆಸ್ ಪಕ್ಷವನ್ನು ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕಟ್ಟಿ ಹಾಕಲಾಗಿದೆ. ಅದೇ ರೀತಿ ಚನ್ನಪಟ್ಟಣದಲ್ಲಿಯೂ ಕಟ್ಟಿ ಹಾಕಬೇಕಿದೆ. ಒಮ್ಮತದ ಎನ್ ಡಿಎ ಅಭ್ಯರ್ಥಿ ಹಾಕಿದರೆ ಇದು ಸುಲಭ. ಈ ಮಾತನ್ನು ನಾನು ಯೋಗೇಶ್ವರ್ ಅವರಿಗೆ ಹೇಳಿದ್ದೇನೆ ಎಂಬುದಾಗಿ ಸಚಿವರು ಹೇಳಿದರು.

ಮೈತ್ರಿಗೆ ಮೂಲ ಕಾರಣರು ಯಾರು ಎಂಬುದನ್ನು ನಾನು ಬೀದಿಯಲ್ಲಿ ಚರ್ಚೆ ಮಾಡಲಾರೆ. ಹಾಗೆ ಮಾಡುವುದು ರಾಷ್ಟ್ರೀಯ ನಾಯಕರಿಗೆ ಅಪಮಾನ ಮಾಡಿದಂತೆಯೇ. ಯೋಗೇಶ್ವರ್ ಅವರು ಮೈತ್ರಿ ಬಗ್ಗೆ ಯಾರ ಜತೆ ಚರ್ಚೆ ನಡೆಸಿದ್ದರು ಎಂಬುದು ನನಗೆ ಗೊತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

ಅಭ್ಯರ್ಥಿ ಆಗಬೇಕು ಎಂದ ಯೋಗೇಶ್ವರ್ ಅವರು ಒಮ್ಮೆ ನನ್ನ ಬಳಿ ಬಂದಿದ್ದರು. ದೆಹಲಿಯಲ್ಲಿ ಚರ್ಚೆ ಮಾಡಿದ್ದರು. ಹಾಗಿದ್ದರೆ ತಾವು ಕ್ಷೇತ್ರದಲ್ಲಿನ ನಮ್ಮ ಮುಖಂಡರ ಜತೆ ಚರ್ಚಿಸಿ ವಿಶ್ವಾಸಕ್ಕೆ ತೆಗೆದುಕೊಳ್ಳಿ ಎಂದು ಸಲಹೆ ಮಾಡಿದ್ದೆ. ಆಮೇಲೆ ನಡೆದಿದ್ದು ನನಗೆ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿಯೂ ಅಭ್ಯರ್ಥಿ ಆಗಬೇಕು ಎಂದು ಅನೇಕ ನಾಯಕರು ಇದ್ದಾರೆ ಎಂದು ಅವರು ತಿಳಿಸಿದರು.

ನಿಖಿಲ್ ಕುಮಾರಸ್ವಾಮಿ ಅವರು ಈ ಚುನಾವಣೆಗೆ ನಿಲ್ಲಬೇಕು ಅಥವಾ ನಿಲ್ಲಿಸಬೇಕು ಎಂಬ ಬಗ್ಗೆ ಈ ಕ್ಷಣದವರೆಗೂ ಚರ್ಚೆ ನಡೆದಿಲ್ಲ, ನಾನು ತೀರ್ಮಾನ ಮಾಡಿಲ್ಲ. ನನ್ನ ಉದ್ದೇಶ ಇಲ್ಲಿ ಕಾಂಗ್ರೆಸ್ ಸೋಲಬೇಕು, ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ಗೆಲ್ಲಬೇಕು. ಈ ಹಿನ್ನೆಯಲ್ಲಿ ಸೂಕ್ತ ಅಭ್ಯರ್ಥಿ ಯಾರು ಎಂಬುದನ್ನು ಎರಡೂ ಪಕ್ಷಗಳ ರಾಷ್ಟ್ರ, ರಾಜ್ಯ ನಾಯಕರು ಕೂತು ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದರು.

ಒಂದೂವರೆ ವರ್ಷದಿಂದ ಎಸ್ ಐಟಿ ಭಜನೆ:
ಕೋವಿಡ್ ಖರೀದಿ ಹಗರಣದ ಬಗ್ಗೆ ತನಿಖೆ ನಡೆಸಲು ಎಸ್ ಐಟಿ ರಚನೆ ಮಾಡಿರುವ ಬಗ್ಗೆ ಕಟುವಾಗಿ ಟೀಕಿಸಿರುವ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಈ ಭಜನೆ ಕಳೆದ ಒಂದೂವರೆ ವರ್ಷದಿಂದ ನಡೆಯುತ್ತಿದೆ ಎಂದು ಲೇವಡಿ ಮಾಡಿದರು.

ಇದೇ ಕಾಂಗ್ರೆಸ್ ನಾಯಕರು ಪ್ರತಿಪಕ್ಷದಲ್ಲಿ ಇದ್ದಾಗ ಕೋವಿಡ್ ಖರೀದಿ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡಿದ್ದರು. ಸಾರ್ವಜನಿಕ ಲೆಕ್ಕಪತ್ರ ಸಮಿತಿ ಅಧ್ಯಕ್ಷರು ಕಾಂಗ್ರೆಸ್ ಪಕ್ಷಕ್ಕೆ ಸೇರಿದವರೇ ಇದ್ದರು. ಆಗ ಏನು ಮಾಡುತ್ತಿದ್ದರು. ಇವರು ಅಧಿಕಾರಕ್ಕೆ ಬಂದು ಒಂದೂವರೆ ವರ್ಷ ಆಯಿತು. ಆಗಿನಿಂದ ಏನು ಮಾಡುತ್ತಿದ್ದರು? ತನಿಖೆ ಯಾಕೆ ಮಾಡಲಿಲ್ಲ? ಈಗ ಮೂಡಾ, ವಾಲ್ಮೀಕಿ ಹಗರಣಗಳು ಸರ್ಕಾರವನ್ನು ಸುತ್ತಿಕೊಂಡಿವೆ. ಅದಕ್ಕೆ ಜನರ ಗಮನ ಬೇರೆಡೆಗೆ ಸೆಳೆಯುವ ಹುನ್ನಾರದಿಂದ ಎಸ್ ಐಟಿ ಭಜನೆ ನಡೆಯುತ್ತಿದೆ ಎಂದು ಅವರು ಹೇಳಿದರು.

You Might Also Like

ಕಾರ್ಯಕ್ರಮದ ಮಧ್ಯೆ ಎದ್ದು ಹೋದ ಡಿಸಿಎಂ, ಇಲ್ಲದವರಿಗೇಕೆ ಸ್ವಾಗತ ಎಂದ ಸಿಎಂ ಸಿದ್ದರಾಮಯ್ಯ

ದರ್ಶನ್ ಅರೆಸ್ಟ್ ಬಗ್ಗೆ ಮಾತನಾಡಲು ಇಚ್ಚಿಸದ ನಟ ಪ್ರಕಾಶ್ ರೈ

ಜಮ್ಮು ಮತ್ತು ಕಾಶ್ಮೀರದ ಸಿಎಂ ಆಗಿ ಒಮರ್ ಅಬ್ದುಲ್ಲಾ ಪ್ರಮಾಣವಚನ ಸ್ವೀಕಾರ

ಮೆಕ್ಸಿಕೋದಲ್ಲಿ ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ

ಷರತ್ತುಬದ್ಧ ಜಾಮೀನು ಮಂಜೂರು : ದೆಹಲಿ ಸಿಎಂ ಕೇಜ್ರಿವಾಲ್‌ಗೆ ಬಿಡುಗಡೆ ಭಾಗ್ಯ

TAGGED:hd kumaraswamy
Share This Article
Facebook Copy Link Print
Previous Article Holiday rush traffic congestion: Trains and buses overbooked ದಸರಾ ಮತ್ತು ವೀಕೆಂಡ್ ರಜೆ ಹಿನ್ನೆಲೆಯಲ್ಲಿ ಊರುಗಳತ್ತ ಹೊರಟ ಜನ, ಬಸ್ಸುಗಳು ರಶ್, ಟ್ರಾಫಿಕ್ ಜಾಮ್
Next Article Cabinet Meeting ಸಚಿವ ಸಂಪುಟ ಸಭೆಯ ತೀರ್ಮಾನಗಳು ಮತ್ತು ಹೈಲೈಟ್ಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

PM Modi PM Modi PM Modi
ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
ರಾಷ್ಟ್ರೀಯ-National
March 24, 2026
Dead Body Dead Body Dead Body
ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
ಬೀದರ್​-Bidar
March 24, 2026
Delhi Assembly Complex
ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
ರಾಷ್ಟ್ರೀಯ-National
March 24, 2026
Supreme Court Supreme Court Supreme Court
ಹಿಂದೂ, ಬೌದ್ಧ, ಸಿಖ್‌ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
ರಾಜ್ಯ-Karnataka Latest
March 24, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up