ಬೆಂಗಳೂರು: ಮನೆಗೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ಮತ್ತು ಮಹಿಳೆ ಕಿಡ್ನ್ಯಾಪ್ ಆರೋಪ ಪ್ರಕರಣದಲ್ಲಿ ಸದ್ಯ ಎಸ್‌ಐಟಿ (SIT) ವಶದಲ್ಲಿರುವ ಮಾಜಿ ಸಚಿವ ಹೆಚ್.ಡಿ.ರೇವಣ್ಣ (HD.Revanna) ಅವರ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದ್ದು, ಅವರಿಗೆ ಜಾಮೀನು (Bail) ಸಿಗುತ್ತದೆಯೇ ಅಥವಾ ಜೈಲಿಗೆ (Jail) ಹೋಗುತ್ತಾರೋ ಎಂಬುದು ನಿರ್ಧಾರವಾಗಲಿದೆ.
ದೌರ್ಜನ್ಯ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ರೇವಣ್ಣರ ಹೆಚ್ಚಿನ ವಿಚಾರಣೆ ಅವಶ್ಯಕತೆ ಇದೆ ಎಂದು ಎಸ್‌ಐಟಿ ಅಧಿಕಾರಿಗಳು ನಾಲ್ಕು ದಿನ ಕಸ್ಟಡಿಗೆ ಪಡೆದಿದ್ದರು. ಇಂದು ಆರೋಪಿ ರೇವಣ್ಣ ಅವರ ಎಸ್‌ಐಟಿ ಕಸ್ಟಡಿ ಅಂತ್ಯವಾಗಲಿದ್ದು, ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು. ಇದನ್ನೂ ಓದಿ: ವಿದ್ಯುತ್ ಬಿಲ್ ಅಧಿಕವಾಗಿ ನೀಡಿದಕ್ಕೆ ಮತ್ತೊಂದು ಕೊಲೆ: ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಜಾಮೀನು ತೀರ್ಪು ಆರೋಪಿ ಪರ ಬಂದರೆ ರೇವಣ್ಣ ಮನೆಗೆ ಹೋಗುತ್ತಾರೆ. ಜಾಮೀನು ಸಿಗದೇ ಹೋದರೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗಲಿದ್ದಾರೆ. ಬಹುತೇಕ ಕಿಡ್ನ್ಯಾಪ್ ಕೇಸ್‌ನಲ್ಲಿ ವಿಚಾರಣೆ ಮುಗಿದಿರೋ ಹಿನ್ನೆಲೆ ಕಸ್ಟಡಿಗೆ ಕೇಳುವ ಸಾಧ್ಯತೆ ಕಡಿಮೆ ಎನ್ನುತ್ತಿದೆ ಎಸ್‌ಐಟಿ ಮೂಲಗಳು.ಇದನ್ನೂ ಓದಿ: ಮಹಿಳೆ ಕಿಡ್ನಾಪ್ ಕೇಸ್- ಎ2 ಆರೋಪಿ ಸತೀಶ್ ಬಾಬು 8 ದಿನ SIT ಕಸ್ಟಡಿಗೆ
ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ಬಂಧನವಾಗಿರೋ ರೇವಣ್ಣಗೆ ರೋಟಿನ್ ಚೆಕಪ್‌ಗೆ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆರೋಪಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಉಲ್ಬಣಿಸಿದ ಕಾರಣ ಎದೆ ಉರಿ ಹೆಚ್ಚಾಗಿತ್ತು. ಈ ಹಿನ್ನೆಲೆ ಬೌರಿಂಗ್ ಆಸ್ಪತ್ರೆಯಲ್ಲಿ ಆರೋಪಿಗೆ ಎಳನೀರು ಕುಡಿಸಿ ಪ್ರಾಥಮಿಕ ಚಿಕಿತ್ಸೆ ಕೊಟ್ಟಿದ್ದಾರೆ. ಎದೆ ಉರಿ ಹೆಚ್ಚಾಗಿದ್ದರಿಂದ ಆಸ್ಪತ್ರೆ ವೈದ್ಯರು ವಿಕ್ಟೋರಿಯಾ ಆಸ್ಪತ್ರೆಗೆ ರೆಫರ್ ಮಾಡಿದ್ದರು. ನಂತರ ಹೆಚ್.ಡಿ.ರೇವಣ್ಣ ಡಿಸ್ಚಾರ್ಜ್ ಆಗಿದ್ದಾರೆ.ಇದನ್ನೂ ಓದಿ: ಕೆಆರ್ ನಗರದ ಸಂತ್ರಸ್ತೆ ನನಗೆ ಗೊತ್ತಿಲ್ಲ, ದೂರನ್ನೂ ಕೊಡಿಸಿಲ್ಲ: ಶಾಸಕ ರವಿಶಂಕರ್