ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಮುಂದಿನ ಮೂರು ಗಂಟೆಗಳ ಕಾಲ ಮಳೆಯ (Rain) ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.
ಭಾನುವಾರ ರಾಜ್ಯದಲ್ಲಿ ಉತ್ತಮ ಮಳೆಯಗಿದ್ದು, ಬಾಗಲಕೋಟೆ, ಬೆಳಗಾವಿ, ಬೀದರ್, ಬಿಜಾಪುರ, ದಕ್ಷಿಣ ಕನ್ನಡ, ಧಾರವಾಡ, ಗದಗ, ಕಲಬುರಗಿ, ಹಾವೇರಿ, ಕೊಪ್ಪಳ, ರಾಯಚೂರು, ಉಡುಪಿ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಿಗೆ ಮತ್ತೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ.
ಮುಂದಿನ 3 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಿಂಚು, ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, ಗಾಳಿಯ ವೇಗ 30 ರಿಂದ 40 ಕಿ.ಮೀ ಇರುವ ಸಾಧ್ಯತೆಯಿದೆ.