ಮಂಗಳೂರು: ಮುಂದಿನ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ದಿನಗಳಲ್ಲಿ ಸುರಿದ ಭಾರೀ ಗಾಳಿ ಮಳೆಗೆ ಜಿಲ್ಲೆಯಾದ್ಯಂತ ಹಲವು ಹಾನಿಗಳುಂಟಾಗಿತ್ತು. ವಿದ್ಯುತ್ ಕಂಬ, ಮರಗಳು ಧರಾಶಾಹಿಯಾಗಿತ್ತು. ಹಲವು ಕಡೆ ಗಾಳಿಯಿಂದ ಹಾನಿ ಉಂಟಾಗಿದ್ದು, ಕರಾವಳಿ ಜನರಲ್ಲಿ ಇನ್ನೂ ಆತಂಕ ಹೆಚ್ಚಾಗಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳು ಸೇರಿದಂತೆ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ದಕ್ಷಿಣ ಒಳನಾಡಿನ ಉಡುಪಿ, ಉತ್ತರ ಒಳನಾಡಿನ ಕಲಬುರಗಿ, ಬೆಳಗಾವಿ, ಬೀದರ್ನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆಮ ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

