Delhi Rain: ದೆಹಲಿಯಲ್ಲಿ ಭಾರೀ ಮಳೆ ಸುರಿದ ಪರಿಣಾಮ ನಗರದ ಕೆಲವು ಭಾಗಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯ ಹಿನ್ನೆಲೆ ಇಂದು ದೆಹಲಿಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಶಾಸ್ತ್ರಿ ಭವನ, ಆರ್‌ಕೆ ಪುರಂ, ಮೋತಿ ಬಾಗ್ ಮತ್ತು ಕಿದ್ವಾಯಿ ನಗರ ಸೇರಿದಂತೆ ದೆಹಲಿ-ಎನ್‌ಸಿಆರ್‌ನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಮಳೆಗೆ ನಗರದ ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತಗೊಂಡಿದೆ. ದೆಹಲಿಯಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ಭಾರೀ ಮಳೆಯ ಪರಿಣಾಮ ಪಂಚಕುಯಿಯನ್ ಮಾರ್ಗ್, ಮಿಂಟೋ ರಸ್ತೆ, ಮಥುರಾ ರಸ್ತೆ ಹಾಗೂ ಭಾರತ್ ಮಂಟಪದ ಗೇಟ್ ಸಂಖ್ಯೆ 7 ಜಲಾವೃತಗೊಂಡಿದೆ. ಇನ್ನು ಗೌತಮಬುದ್ಧನಗರದಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ. ದೆಹಲಿ, ಎನ್‌ಸಿಆರ್‌ನ ಹೆಚ್ಚಿನ ಸ್ಥಳಗಳಲ್ಲಿ ಮಧ್ಯಮದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆಯಿಂದಾಗಿ ಪ್ರತಿಕೂಲ ಹವಾಮಾನ ಉಂಟಾಗಿದ್ದು, ದೆಹಲಿಯಲ್ಲಿ ನೂರಕ್ಕೂ ಹೆಚ್ಚು ವಿಮಾನಗಳು ವಿಳಂಬವಾಗಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

