ಬೆಂಗಳೂರು: ಇಂಡಿಯನ್ ಮೀಟಿಯರಾಲಾಜಿಕಲ್ ಡಿಪಾರ್ಟ್ಮೆಂಟ್ (IMD) ನೀಡಿರುವ ಮುನ್ಸೂಚನೆಯ ಪ್ರಕಾರ, ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಇಂದು ಮತ್ತು ಮುಂದಿನ 3 ದಿನಗಳಲ್ಲಿ ಭಾರೀ ಮಳೆ, ಗುಡುಗು-ಮಿಂಚು ಸಹಿತ ಮಳೆ ಮತ್ತು ಬಿರುಗಾಳಿ ಬೀಳುವ ಸಾಧ್ಯತೆ ಇದೆ. ರಾಜ್ಯದ ವಿವಿಧ ಭಾಗಗಳಲ್ಲಿ ಹಳದಿ & ಕಿತ್ತಳೆ ಎಚ್ಚರಿಕೆ (Yellow & Orange Alert) ಜಾರಿಗೊಳಿಸಲಾಗಿದೆ.
ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಅಬ್ಬರಿಸುತ್ತಿರುವ ಮಳೆ, ಮಲೆನಾಡಿ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿದೆ. ಆದರೆ ಉತ್ತರ ಒಳನಾಡಿನ ಒಣಹವೆಯ ಜಿಲ್ಲೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ನಿರೀಕ್ಷತದಷ್ಟು ಆಗುತ್ತಿಲ್ಲ. ಅಲ್ಲಲ್ಲಿ ಸಾಧಾರಣ ಮಳೆ ಆಗುತ್ತಿದೆ. ರೈತರು ಮುಂಗಾರು ಬಿತ್ತನೆಗೆ ಹೊಲ ಹದ ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿದ್ದಾರೆ.
ಪೂರ್ವ ಮುಂಗಾರು ಮಳೆಯ ಆರ್ಭಟವು ಹೆಚ್ಚಾಗುವ ಸಂಭವವಿದೆ. ಬಳಗಾಳಕೊಲ್ಲಿ ಸಮುದ್ರದಲ್ಲಿ ಮಾತ್ರವಲ್ಲದೇ ರಾಜಸ್ಥಾನ, ರಾಯಸೀಮಾ ಪ್ರದೇಶಗಳು ಭೂಮಿ ಮೇಲ್ಮೈನಲ್ಲೂ ಉಂಟಾಗಿರುವ ಹವಾಮಾನ ಬದಲಾವಣೆ ಕಾರಣದಿಂದ ಕರ್ನಾಟಕದಲ್ಲಿ ಮಳೆ ಆವರಿಸುವ ಲಕ್ಷಣಗಳು ಗೋಚರಿಸಿವೆ.
ಮುಂದಿನ 2-3ದಿನ ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಕೋಲಾರ, ತುಮಕೂರು, ಶಿವಮೊಗ್ಗ, ದಾವಣಗೆರೆ ಸೇರಿ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ಆಗಲಿದೆ. ನಂತರ ಏಪ್ರಿಲ್ 24ರವರೆಗೆ ರಾಜ್ಯಾವ್ಯಾಪಿ ಮಳೆ ಮತ್ತಷ್ಟು ಅಬ್ಬರಿಸಲಿದೆ. ಆಗ ಈ ಮೇಲಿನ ಜಿಲ್ಲೆಗಳು ಒಳಗೊಂಡಂತೆ ಚಿಕ್ಕಬಳ್ಳಾಪುರ, ಹಾಸನ, ಮಂಗಳೂರು, ಉಡುಪಿ, ಉತ್ತರ ಕನ್ನಡ, ಚಿತ್ರದುರ್ಗ, ಬಳ್ಳಾರಿ, ಹಾವೇರಿ, ಗದಗ, ಕೊಪ್ಪಳ, ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್,ಕಲಬುರಗಿ, ರಾಯಚೂರು, ಯಾದಗಿರಿ ಹೀಗೆ ಎಲ್ಲ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.