ಬೆಂಗಳೂರು :ಕರ್ನಾಟಕದ ಹವಾಮಾನ ಇಲಾಖೆಯು ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹೇಳಿದೆ. ವಿಶೇಷವಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ. ಕರಾವಳಿ ಪ್ರದೇಶದ ಮೂರು ಜಿಲ್ಲೆಗಳಿಗೆ ಆರಂಜ್ ಮತ್ತು ಹಳದಿ ಎಚ್ಚರಿಕೆ ನೀಡಲಾಗಿದೆ. ಅದೇ ರೀತಿ, ಬಯಲು ಸೀಮೆಯ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 8ರ ವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಜೋರಾದ ಗಾಳಿಯೊಂದಿಗೆ ಸಾಧಾರಣದಿಂದ ಭಾರೀ ಮಳೆ ನಿರೀಕ್ಷಿಸಲಾಗಿದೆ. ಆಗಸ್ಟ್ 6 ಮತ್ತು 7ರಂದು ಕೆಲವು ಪ್ರದೇಶಗಳಲ್ಲಿ ಅತಿ ಭಾರೀ ಮಳೆ ಬೀಳುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಲ್ಲಿ ಸ್ಥಳೀಯವಾಗಿ ಸಾಧಾರಣ ಮಳೆ ನಿರೀಕ್ಷೆಯಿದೆ.
ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಆರಂಜ್ ಎಚ್ಚರಿಕೆ ನೀಡಲಾಗಿದೆ. ತುಮಕೂರು, ಕೊಡಗು, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.
ಕೊಡಗಿನಲ್ಲಿ ಆರೆಂಜ್ ಅಲರ್ಟ್: ಇಂದು ಶಾಲಾ, ಕಾಲೇಜುಗಳಿಗೆ ರಜೆ!
ಕೊಡಗಿನಲ್ಲಿ (Kodagu) ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ನಿರಂತರ ಮಳೆ (Heavy Rain) ಸುರಿಯುತ್ತಿರುವ ಹಿನ್ನೆಲೆ ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ಘೋಷಿಸಿದ್ದು, ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

