By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಇಲ್ಲಿವೆ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಷ್ಟ್ರೀಯ-National > ಇಲ್ಲಿವೆ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು
ರಾಜ್ಯ-KarnatakaLatest

ಇಲ್ಲಿವೆ ಇಂದು ನಡೆದ ಸಚಿವ ಸಂಪುಟದ ಪ್ರಮುಖ ನಿರ್ಣಯಗಳು

Here are the key decisions of the Cabinet today

Published September 25, 2025
Share
6 Min Read
Cabinet Meeting
SHARE

•”ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು (ಮುಂಬಡ್ತಿಗಾಗಿ ಕಡ್ಡಾಯ ತರಬೇತಿ) ನಿಯಮಗಳು 2025ಕ್ಕೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.

•ಉನ್ನತ ಶಿಕ್ಷಣ ಇಲಾಖೆಯಡಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ ತಂತ್ರಾಂಶ 2ನೇ ಆವೃತ್ತಿ (UUCMS-V-2.0) ಯನ್ನು ರೂ.40.29 ಕೋಟಿಗಳ ಮೊತ್ತದಲ್ಲಿ ಅಭಿವೃದ್ಧಿಪಡಿಸಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.

•ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ನಿಧಿಯಡಿಯಲ್ಲಿ 110 ಜಂಕ್ಷನ್ ಗಳಲ್ಲಿ ಬೆಂಗಳೂರು ನಗರಕ್ಕೆ ಅವಶ್ಯಕವಿರುವ ಟ್ರಾಫಿಕ್ ಸಿಗ್ನಲ್ ಗಳನ್ನು ರೂ. 56.45 ಕೋಟಿಗಳ ಅಂದಾಜು ಅನುಷ್ಠಾನಗೊಳಿಸಲು ಅನುಮತಿಯನ್ನು ಸಚಿವ ಸಂಪುಟ ನೀಡಿದೆ.

•”ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ-2025-32ಕ್ಕೆ ಅನುಮೋದನೆ ನೀಡಿದೆ.

•ಕಲಬುರಗಿ ಜಿಲ್ಲೆಯ ಸೇಡಂ ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿತು.

•ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಪ್ರಸ್ತುತ ಇರುವ 60 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಮೊದಲನೇ ಹಂತದಲ್ಲಿ 250 ಹಾಸಿಗೆಗಳ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ ರೂ.95.60 ಕೋಟಿಗಳ ಅಂದಾಜು ಮೊತ್ತದಲ್ಲಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

•PM-ABHIM & Re-appropriate anticipated saving budget during 2021-26 ರಡಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಿರ್ಮಿಸಲು ಮಂಜೂರಾಗಿರುವ 50 ಹಾಸಿಗೆಗಳ ತೀವು ನಿಗಾ ಆರೈಕೆ ಘಟಕವನ್ನು (CCB) ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕು ಆಸ್ಪತ್ರೆಗೆ ಸ್ಥಳಾಂತರಿಸಿ, ಅಂದಾಜು ಮೊತ್ತ ರೂ.23.75 ಕೋಟಿಗಳಲ್ಲಿ (ಕಟ್ಟಡ + ವೈದ್ಯಕೀಯ ಉಪಕರಣ) ನಿರ್ಮಿಸಲು ಅನುಮೋದನೆ ನೀಡಿದೆ.

•ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವಿಸ್ತರಣೆ ಹಾಗೂ ಆಧುನೀಕರಣದ ರೂ.329.00 ಕೋಟಿಗಳ ಪರಿಷ್ಕೃತ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.

•ಚಿಕ್ಕಮಗಳೂರು ಜಿಲ್ಲೆಯ. ಕಡೂರು ತಾಲ್ಲೂಕಿನಲ್ಲಿ ಹೊಸದಾಗಿ ತಾಲ್ಲೂಕು ಪ್ರಜಾಸೌಧ ಕಟ್ಟಡವನ್ನು (Type-C ಮಾದರಿ) ರೂ.16.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

•”ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆಯನ್ನು ಸರ್ಕಾರ ನೀಡಿದೆ.

•”ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ, 2025″ಕ್ಕೆ ಅನುಮೋದನೆಯನ್ನು ಸಚಿವ ಸಂಪುಟ ನೀಡಿದೆ.

•ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರಕ್ಕೆ 2ನೇ ಹಂತದ ಒಳಚರಂಡಿ ವ್ಯವಸ್ಥೆ ಒದಗಿಸುವ ಯೋಜನೆಯ ರೂ.128.74 ಕೋಟಿಗಳ ವಿಸ್ತ್ರತ ಯೋಜನಾ ವರದಿಗೆ ಪರಿಷ್ಕೃತ ಆಡಳಿತಾತ್ಮಕ ಅನುಮೋದನೆ ನೀಡಿದೆ.

•ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಘಟಕದ ಅಧೀನದಲ್ಲಿ ಹೊಸದಾಗಿ ಸ್ಥಾಪಿಸಿರುವ ಎರಡು ಐ.ಆರ್.ಬಿ ಪಡೆಗಳಿಗೆ ಅವಶ್ಯಕವಿರುವ ಮೂಲಭೂತ ವಸತಿ/ವಸತಿಯೇತರ ಸೌಕರ್ಯಗಳನ್ನು ರೂ.60.00 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಲ್ಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.

•ಇನ್ಸ್ಟಿಟ್ಯೂಟ್ ಆಫ್ ಗ್ಯಾಸ್ಟೋಎಂಟ್ರಾಲಜಿ ಸೈನ್ಸಸ್ ಅಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್, ಬೆಂಗಳೂರು ಸಂಸ್ಥೆಗೆ ಅವಶ್ಯವಿರುವ ರೋಬೋಟಿಕ್ ವೈದ್ಯಕೀಯ ಉಪಕರಣವನ್ನು ರೂ.20.00 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

•ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಸಂಸ್ಥೆ ಬಾಗಲಕೋಟೆ ಇಲ್ಲಿ 150 ಎಂಬಿಬಿಎಸ್ ಪ್ರವೇಶ ಮಿತಿಯೊಂದಿಗೆ ಪ್ರಾರಂಭಿಸಲು ಅವಶ್ಯವಿರುವ ವೈದ್ಯಕೀಯ ಕಾಲೇಜು ಕಟ್ಟಡ, ಬಾಲಕ, ಬಾಲಕಿಯರ ಹಾಸ್ಟೆಲ್‌ಗಳು, ಬೋಧಕ ಸಿಬ್ಬಂದಿಗಳ ವಸತಿಗೃಹಗಳು ಹಾಗೂ ಇತರೆ ಪೂರಕವಾದ ಕಾಮಗಾರಿಗಳಿಗೆ ಅವಶ್ಯವಿರುವ ರೂ.450.00 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

•ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ GRP (Glass Reinforced Plastic pipe) ರೈಸಿಂಗ್ ಮೇನ್ ಸೇರಿ ರಾಜಕಾಲುವೆಯ ಬಳಿಯ Used Water Treatment Plant ಆವರಣದಲ್ಲಿರುವ ಸಂಸ್ಕರಿಸಿದ ನೀರಿನ ಪಂಪಿಂಗ್ ಸ್ಟೇಷನ್, ದೇವನಹಳ್ಳಿ ಬಳಿಯ ಐಟಿ ಪಾರ್ಕ್ ಕೈಗಾರಿಕಾ ಪ್ರದೇಶದಲ್ಲಿರುವ 40 MLD ಸಾಮರ್ಥ್ಯದ ತೃತೀಯ ಹಂತದ ಸಂಸ್ಕರಣಾ ಘಟಕದ 5 ವರ್ಷಗಳ ಕಾರ್ಯಾಚರಣೆ ಮತ್ತು ನಿರ್ವಹಣೆಯನ್ನು ರೂ.45.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಸರ್ಕಾರದ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

•ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ ಎಲೆಮಲ್ಲಪ್ಪ ಚೆಟ್ಟಿಯಲ್ಲಿರುವ 15 ದ.ಲ.ಲೀ ಸಾಮರ್ಥ್ಯದ ತ್ಯಾಜ್ಯ ನೀರು ಶುದ್ದೀಕರಣ ಘಟಕವನ್ನು ಮತ್ತು ಸಾದರಮಂಗಲದಲ್ಲಿ 5 ದ.ಲ.ಲೀ ಸಾಮರ್ಥ್ಯದ ISPS (Intermediate Sewage Pumping Station) ಮತ್ತು ಸುಮಾರು 3.5 ಕಿ.ಮೀಗಳ 450mm dia DI (Ductile Iron) ಪೈಪ್ ಲೈನ್ ನ 5 ವರ್ಷಗಳ ಸಮಗ್ರ ಕಾರ್ಯಚರಣೆ ಮತ್ತು ನಿರ್ವಹಣೆ (O&M)ಯನ್ನು ರೂ.19.07 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

•ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 90 ದ.ಲ.ಲೀ ಸಾಮರ್ಥ್ಯದ ಬೆಳ್ಳಂದೂರು ತ್ಯಾಜ್ಯ ನೀರು ಶುದ್ದೀಕರಣ ಘಟಕದ 5 ವರ್ಷಗಳ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ಯನ್ನು ರೂ.23.36 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಿದೆ.

•ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ ಹೊರಮಾವುನಲ್ಲಿರುವ 20 MLD ಬಳಸಿದ ನೀರು ಸಂಸ್ಕರಣಾ ಘಟಕವನ್ನು (UWTP) 05 ವರ್ಷಗಳ ಅವಧಿಗೆ ಸಮಗ್ರ ಕಾರ್ಯಾಚರಣೆ ಮತ್ತು ನಿರ್ವಹಣೆ (O&M) ರೂ.15.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಕೋಟಿಗಳ ಅನುಮೋದನೆ ನೀಡಿದೆ.

•ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ಕಲಂ 241(7) ಅವಕಾಶದಡಿ 1200 ಚದರ ಅಡಿಗಳಿಗಿಂತ ಹೆಚ್ಚಿನ ವಿಸ್ತೀರ್ಣದ ವಸತಿ ಕಟ್ಟಡಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರ ಪಡೆಯುವುದರಿಂದ ವಿನಾಯಿತಿ ನೀಡಿದೆ.

•ಪ್ರಾಧಿಕಾರದ ವ್ಯಾಪ್ತಿಯಲ್ಲಿ ಪಿಪಿಪಿ ಮಾದರಿಯಲ್ಲಿ ಪ್ರತಿನಿತ್ಯ 1750 ಮೆ. ಟನ್ ಕಟ್ಟಡಗಳ ಹಾಗೂ ನಿರ್ಮಾಣ ಸಾಮಗ್ರಿಗಳ ಭಗ್ನಾವಶೇಷ ತ್ಯಾಜ್ಯದ ಸಂಗ್ರಹಣೆ ಮತ್ತು ವಿಲೇವಾರಿ ಮಾಡುವ (750 ಟಿಪಿಡಿಯ ಒಂದು ಪ್ಯಾಕೇಜ್ ಹಾಗೂ 500 ಟಿಪಿಡಿಯ ಎರಡು ಪ್ಯಾಕೇಜ್) ಯೋಜನೆಗೆ ಆಡಳಿತಾತ್ಮಕ ಅನುಮೋದನೆ ಮತ್ತು ಟೆಂಡರ್ ಅನುಮೋದನೆ ನೀಡಿದೆ.

ಸಮೀಕ್ಷಾ ಕರ್ತವ್ಯದಿಂದ ವಿಮುಕ್ತರಾಗುವ ನೌಕರರ ಮೇಲೆ ಶಿಸ್ತು ಕ್ರಮ :
ರಾಜ್ಯದಲ್ಲಿ ನಡೆದಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯ ಕುರಿತು ಕೆಲವು ನಿರ್ದೇಶನಗಳನ್ನು ನೀಡಲು ಮತ್ತು ಸಮಸ್ಯೆಗಳನ್ನು ಪರಿಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ದಿನಾಂಕ:27.09.2025 ರಂದು ಮುಂಜಾನೆ 11.30 ಗಂಟೆಗೆ ರಾಜ್ಯದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿ‍ರ್ವಹಣಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಇಂದಿಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರಿಗೆ ಸಚಿವ ಸಂಪುಟದ ನಿರ್ಣಯಗಳ ವಿವರಗಳನ್ನು ನೀಡಿದ ಅವರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಕೈಗೊಳ್ಳಲಾಗಿರುವ ಈ ಸಮೀಕ್ಷಾ ಕಾರ್ಯದಲ್ಲಿ ನಿಯೋಜಿಸಲ್ಪಡುವ ಅಧಿಕಾರಿ/ನೌಕರರು ಸಮೀಕ್ಷಾ ಕಾರ್ಯಕ್ಕೆ ಹಾಜರಾಗದೇ ಮತ್ತು ಕರ್ತವ್ಯಗಳನ್ನು ನಿರ್ವಹಿಸದೇ ಇರುವಂತಹವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಬೆಂಗಳೂರು ವ್ಯಾಪ್ತಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಅಧಿಕಾರ ಪ್ರಾಯೋಜಿಸಲಾಗಿದೆ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕಾಗಿ ಗಣತಿದಾರರಾಗಿ ನಿಯೋಜಿಸಲ್ಪಡುವ ಸರ್ಕಾರ, ನಿಗಮ/ಮಂಡಳಿಗಳ ಅಧಿಕಾರಿ/ ನೌಕರರುಗಳ ವಿರುದ್ಧ ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಗಳು, 2021ರಡಿ ಹಾಗೂ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು, 1957ರನ್ವಯ ಶಿಸ್ತುಕ್ರಮ ಮತ್ತು ದಂಡನೆ ವಿಧಿಸುವ ಅಧಿಕಾರವನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರಿಗೆ ಪ್ರತ್ಯಾಯೋಜಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಗಣಪತಿ ಆತ್ಮಹತ್ಯೆ ಕೇಶವನಾರಾಯಣ ಆಯೋಗದ ವರದಿ ತಿರಸ್ಕಾರ:
ಹಿಂದಿನ ಗೃಹಸಚಿವರಾದ ಕೆ.ಜೆ.ಜಾರ್ಜ್‌ ಹಾಗೂ ಎ.ಎಮ್‌ ಪ್ರಸಾದ ಐ.ಪಿ.ಎಸ್‌ ಪ್ರಣವ ಮೊಹಾಂತಿ ಐ.ಪಿ.ಎಸ್‌ ಇವರುಗಳ ವಿರುದ್ಧ ದಿ.ಗಣಪತಿಯವರು ಸಂದರ್ಶನದಲ್ಲಿ ಆರೋಪಿಸಿರುವುದನ್ನು ತಳ್ಳಿಹಾಕಿ ಎಮ್‌.ಕೆ.ಗಣಪತಿಯವರ ಆತ್ಮಹತ್ಯೆಗೆ ಇವರುಗಳು ಕಾರಣವಲ್ಲವೆಂಬ ಅಭಿಪ್ರಾಯವನ್ನು ಕೇಶವನಾರಾಯಣ ಆಯೋಗವು ಸ್ಪಷ್ಟವಾಗಿ ಹೇಳಿದ್ದು, ತನಿಖಾ ಪ್ರಕರಣದಲ್ಲಿ ಕೆಲವು ನ್ಯೂನ್ಯತೆಗಳು ಕಂಡುಬಂದಿರುವುದರಿಂದ ಕೆಲವು ಅಧಿಕಾರಿ/ಸಿಬ್ಬಂದಿಯವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಮಾಡಿರುವ ಶಿಫಾರಸ್ಸನ್ನು ರಾಜ್ಯ ಸಚಿವ ಸಂಪುಟ ತಿರಸ್ಕರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ ಹಾಗೂ ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ ಪಾಟೀಲ ಇಂದಿಲ್ಲಿ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು.

ಸಚಿವ ಸಂಪುಟದ ಸಭೆಯ ನಂತರ ಸುದ್ದಿಗಾರರಿಗೆ ಸಚಿವ ಸಂಪುಟದ ನಿರ್ಣಯಗಳ ವಿವರಗಳನ್ನು ನೀಡಿದ ಅವರು ಶ್ರೀ ಎಂ.ಕೆ ಶ್ರೀವಾಸ್ತವ್‌, ಐಪಿಎಸ್‌ ನಿವೃತ್ತ ಪೊಲೀಸ್‌ ಮಹಾನಿರ್ದೇಶಕರು ಇವರು ಸರ್ಕಾರಕ್ಕೆ ಸಲ್ಲಿಸಿರುವ ಅಧ್ಯಯನ ವರದಿಯಲ್ಲಿ ತನಿಖಾ ಕ್ರಮಗಳ ಬಗ್ಗೆ ವಿಚಾರಣಾ ಆಯೋಗವು ಮಾಡಿರುವ ಆಕ್ಷೇಪಣೆಗಳನ್ನು ಸಿ.ಬಿ.ಐ ಸಲ್ಲಿಸಿರುವ ವರದಿಯನ್ನು ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯವು ಮಾನ್ಯ ಮಾಡಿರುವುದರಿಂದ ಮತ್ತು ಮಾನ್ಯ ಸರ್ವೋಚ್ಛ ನ್ಯಾಯಾಲಯವು ಎಸ್‌.ಎಲ್‌.ಪಿ ಯಲ್ಲಿ ಸಿ.ಬಿ.ಐ ಪ್ರಕರಣವನ್ನು ಮುಕ್ತಾಯ ಮಾಡಿರುವುದನ್ನು ಎತ್ತಿ ಹಿಡಿದಿರುವುದರಿಂದ, ಅಧಿಕಾರಿಗಳ ವಿರುದ್ಧದ ಇಲಾಖಾ ವಿಚಾರಣೆಯ ಶಿಫಾರಸ್ಸನ್ನು ಒಪ್ಪುವ ಅಗತ್ಯವಿಲ್ಲವೆಂದು ಅಧ್ಯಯನ ವರದಿಯಲ್ಲಿ ತಿಳಿಸಲಾಗಿರುತ್ತದೆ.

ಶ್ರೀ ಕೆ.ಎನ್‌. ಕೇಶವನಾರಾಯಣ, ಮಾನ್ಯ ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು ಇವರ ವಿಚಾರಣಾ ವರದಿಯನ್ನು ಸಚಿವ ಸಂಪುಟವು ಭಾಗಶ: ಒಪ್ಪಿ, ಅಧಿಕಾರಿಗಳ ವಿರುದ್ಧದ ಇಲಾಖಾ ತನಿಖೆಯ ಶಿಫಾರಸ್ಸನು ತಿರಸ್ಕರಿಸಿದೆ ಎಂದು ತಿಳಿಸಿದರು.

You Might Also Like

Bihar Election : ಮಧ್ಯಾಹ್ನ 3 ಗಂಟೆಯವರೆಗೆ ಶೇ. 53.7 ರಷ್ಟು ಮತದಾನ

ಇನ್ನೂ ಮೂರ್ನಾಲ್ಕು ದಿನಗಳ ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಳಗಾವಿ ಮಹಾನಗರ ಪಾಲಿಕೆಯ ಇಬ್ಬರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದು

Video : ರಾಮನಗರದಲ್ಲಿ ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ, ವಿಡಿಯೋ ವೈರಲ್

ಮನೆಯವರಿಂದ ಜಗದೀಶ್ ಮೃತದೇಹಕ್ಕೆ ಅಂತಿಮ ಪೊಜೆ

TAGGED:Cabinet Meeting
Share This Article
Facebook Copy Link Print
Previous Article ಅ.2ರಂದು ತೆರೆಗೆ ಬರುತ್ತಿರುವ ಕಾಂತಾರ : ಚಾಪ್ಟರ್‌-1 ಬುಕಿಂಗ್‌ ಆರಂಭ
Next Article ಕಾವೇರಿ ಆರತಿ ವೇಳೆ ಪ್ರತಿ ದಿನ ಉಚಿತವಾಗಿ ಲಡ್ಡು ವಿತರಣೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Bairati Basavaraj
ರೌಡಿ ಬಿಕ್ಲು ಶಿವ ಕೊಲೆ ಪ್ರಕರಣ : ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
ರಾಜ್ಯ-Karnataka Latest
February 10, 2026
yogi adityanath
ಇನ್ನೆಂದೂ ಬಾಬರಿ ಮಸೀದಿಯನ್ನು ಪುನರ್‌ನಿರ್ಮಿಸಲು ಸಾಧ್ಯವಿಲ್ಲ : ಯೋಗಿ ಆದಿತ್ಯನಾಥ್
ರಾಷ್ಟ್ರೀಯ-National
February 10, 2026
ಲವ್ ಪ್ರಪೋಸಲ್ ಒಪ್ಪದ ಸಹಪಾಠಿಗೆ ತರಗತಿಯೊಳಗೇ ಗುಂಡಿಕ್ಕಿ ಕೊಂದು ಆತ್ಮಹತ್ಯೆಗೆ ಶರಣಾದ ಯುವಕ
ರಾಷ್ಟ್ರೀಯ-National
February 10, 2026
ಚಂದ್ರಯಾನ-4 ಲ್ಯಾಂಡಿಂಗ್‌ಗೆ ದಕ್ಷಿಣ ಧ್ರುವದ ಬಳಿ ತಾಣ ಗುರುತಿಸಿದ ಇಸ್ರೋ
ರಾಷ್ಟ್ರೀಯ-National
February 10, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up