ಬೆಂಗಳೂರು, ಫೆಬ್ರವರಿ 23: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಬಂದಿರುವ ಸ್ಯಾಂಡಲ್‌ವುಡ್ ನಟ Darshan Thoogudeepa ಅವರಿಗೆ Karnataka High Court ನಲ್ಲಿ ಮಹತ್ವದ ಕಾನೂನು ಜಯ ದೊರಕಿದೆ. ಅವರ ಶಸ್ತ್ರಾಸ್ತ್ರ ಪರವಾನಗಿ (ಗನ್ ಲೈಸೆನ್ಸ್) ಅಮಾನತುಗೊಳಿಸಿ ಪೊಲೀಸರು ಹೊರಡಿಸಿದ್ದ ಆದೇಶಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಎದುರಿಸುತ್ತಿರುವ ಕ್ರಿಮಿನಲ್ ಆರೋಪಗಳ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ಅವರ ಗನ್ ಲೈಸೆನ್ಸ್ ಅನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದರು. ಈ ಕ್ರಮವನ್ನು ಪ್ರಶ್ನಿಸಿ ದರ್ಶನ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿತು. ದರ್ಶನ್ ಪರ ವಕೀಲರು ವಾದ ಮಂಡಿಸಿ, ದರ್ಶನ್ ಅವರು 2008ರಿಂದಲೇ ಅಧಿಕೃತವಾಗಿ ಶಸ್ತ್ರಾಸ್ತ್ರ ಪರವಾನಗಿ ಹೊಂದಿದ್ದಾರೆ. ಯಾವುದೇ ಕಾನೂನುಬಾಹಿರ ಚಟುವಟಿಕೆಗೆ ಅವರು ಶಸ್ತ್ರಾಸ್ತ್ರ ಬಳಸಿಲ್ಲ.ಕೇವಲ ಕ್ರಿಮಿನಲ್ ಪ್ರಕರಣ ದಾಖಲಾಗಿರುವ ಕಾರಣಕ್ಕೆ ತಕ್ಷಣ ಪರವಾನಗಿ ಅಮಾನತು ಮಾಡುವುದು ನ್ಯಾಯಸಮ್ಮತವಲ್ಲ ಎಂದರು.
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು ಪೊಲೀಸರ ಅಮಾನತು ಆದೇಶಕ್ಕೆ ತಡೆಯಾಜ್ಞೆ ನೀಡಿದೆ. ಇದರಿಂದ ನಟ ದರ್ಶನ್ ಅವರಿಗೆ ತಾತ್ಕಾಲಿಕ ನಿರಾಳತೆ ಸಿಕ್ಕಂತಾಗಿದೆ.
ಜೈಲಿನಿಂದ ಬಿಡುಗಡೆಯಾದ ನಂತರ ದರ್ಶನ್ ಅವರ ಮೇಲೆ ಪೊಲೀಸರು ಕಠಿಣ ನಿಗಾ ಇಟ್ಟಿದ್ದರು. ಅದರ ಭಾಗವಾಗಿಯೇ ಶಸ್ತ್ರಾಸ್ತ್ರ ಪರವಾನಗಿ ರದ್ದುಪಡಿಸಲು ಪ್ರಕ್ರಿಯೆ ಆರಂಭಿಸಲಾಗಿತ್ತು. ಆದರೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯಿಂದಾಗಿ ಸದ್ಯಕ್ಕೆ ದರ್ಶನ್ ತಮ್ಮ ಗನ್

