ಬೆಂಗಳೂರು: ವಿಧಾನ ಪರಿಷತ್ (Vidhan Parishad) ಟಿಕೆಟ್ ಹಂಚಿಕೆ ವಿಚಾರವಾಗಿ ಮೊದಲೇ ಹೈ ಪವರ್ ಕಮಿಟಿ ನೇಮಿಸಿ ಸಲಹೆ ಪಡೆಯಬೇಕಿತ್ತು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Dr G Parameshwar) ಹೇಳಿದ್ದಾರೆ.
ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಪಕ್ಷಕ್ಕೆ ಕೆಲಸ ಮಾಡಿ ಅನೇಕ ಅನುಭವ ಇರುವವರಿಗೆ ಎಂಎಲ್‌ಸಿಯಾಗಲು (MLC) ಅವಕಾಶ ಕೊಡಬೇಕು. ಆದರೆ ನಮ್ಮ ಸಲಹೆಯನ್ನು ಅವರು ಕೇಳಿಲ್ಲ. ಅಭ್ಯರ್ಥಿಗಳ ಆಯ್ಕೆಗೆ ಸ್ಕ್ರೀನಿಂಗ್ ಮಾಡುವುದು ಬಹಳ ಕಷ್ಟ. ಮೊದಲೇ ಹೈ ಪವರ್ ಕಮಿಟಿ ಮಾಡಿ ಸಲಹೆ ಪಡೆಯಬೇಕಿತ್ತು. ಈಗ ಕಾಲ ಮೀರಿ ಹೋಗಿದೆ. ಈಗಾಗಲೇ ಸಿಎಂ ಡಿಸಿಎಂ ದೆಹಲಿಗೆ ಹೋಗಿ ಬಿಟ್ಟಿದ್ದಾರೆ ಎಂದರು. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದ ಸಿಬ್ಬಂದಿ ಕಚೇರಿಗೆ ಹುಸಿ ಬಾಂಬ್ ಬೆದರಿಕೆ
ಇನ್ಮುಂದೆ ಯಾವುದಾದರೂ ನೇಮಕಕ್ಕೆ ಹೈ ಪವರ್ ರೀತಿಯ ಕಮಿಟಿ ಮಾಡಬೇಕಾ ಎಂಬ ಪ್ರಶ್ನೆಗೆ ನೋಡೋಣ ಎಂದು ಉತ್ತರಿಸಿದರು. ಇದನ್ನೂ ಓದಿ: ಪ್ರಜ್ವಲ್ ಬರುತ್ತಿದ್ದಂತೆ ಬಂಧನ: ಪರಮೇಶ್ವರ್
ಇಲಾಖೆ ವಿಚಾರವಾಗಿ ನಾನು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇನೆ. ಭೇಟಿ ವೇಳೆ ಪರಿಷತ್ ವಿಚಾರ ಚರ್ಚೆಯಾಗಿಲ್ಲ. ಒಟ್ಟು ಇರುವ 7 ಸ್ಥಾನಗಳಿಗೆ ಎಷ್ಟು ಅರ್ಜಿಗಳು ಬಂದಿವೆ ಎನ್ನುವುದು ನನಗೆ ಗೊತ್ತಿಲ್ಲ ಎಂದು ಹೇಳಿದರು.ಇದನ್ನೂ ಓದಿ: ಬ್ರಿಜ್ ಭೂಷಣ್ ಶರಣ್ ಸಿಂಗ್ ಪುತ್ರನ ಬೆಂಗಾವಲು ವಾಹನ ಡಿಕ್ಕಿ- ಸ್ಥಳದಲ್ಲೇ ಇಬ್ಬರು ಸಾವು, ಓರ್ವ ಗಂಭೀರ

