ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೋಂ ಗ್ರೌಂಡ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinaaswamy Stadium) ಹೊಸ ನಯಕ ಶುಭಮನ್ ಗಿಲ್ (Shubam Gill) ಸಾರಥ್ಯದ ಗುಜುರಾತ್ ಟೈಟಾನ್ಸ್ (Gujarath) ಎದುರು ಸೆಣಸೆಲು ಎದುರಾಗಿದ್ದು, ಇಂದು ಸಂಜೆ 7:30 ಕ್ಕೆ ಪಂದ್ಯ ಆರಂಭವಾಗಲಿದೆ.

ಸದ್ಯ ಐಪಿಎಲ್ (IPL) ಅಂಕಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿರುವ ಆರ್‌ಸಿಬಿ ಯನ್ನ ಮುಂದಿನ ಎಲ್ಲಾ ಪಂದ್ಯಗಳನ್ನು ಗೆಲ್ಲಲೇಬೇಕೆಂದು ಪಣ ತೊಟ್ಟಿದೆ. ಆರ್‌ಸಿಬಿ ಕಳೆದ ಎರಡು ಪಂದ್ಯಗಳಲ್ಲಿ ಭರ್ಜರಿ ಜಯ ಪ್ರರ್ದಶಿಸಿ ಅತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.

ಅದರಲ್ಲೂ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಎದುರು 9 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಇದೀಗ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂಥದ್ದೇ ಪ್ರದರ್ಶನ ನೀಡಿ ನಾಕ್‌ಔಟ್ ಹಂತಕ್ಕೆ ಮತ್ತಷ್ಟು ಹತ್ತಿರವಾಗಲು ಆರ್‌ಸಿಬಿ ಎದುರು ನೋಡುತ್ತಿದೆ.

ಗಿಲ್ ಸಾರಥ್ಯದಲ್ಲಿ ಆರಂಭಿಕ ಪಂದ್ಯಗಳನ್ನು ಗೆದ್ದು ಉತ್ತಮ ಪ್ರದರ್ಶನ ನೀಡಿದ್ದ ಗುಜರಾತ್ ಟೈಟಾನ್ಸ್ ತಂಡ ಬಳಿಕ ಸತತ ವೈಫಲ್ಯಗಳೊಂದಿಗೆ ನಿರಾಸೆ ಅನುಭವಿಸಿದೆ. ಕಳೆದ 5 ಪಂದ್ಯಗಳಲ್ಲಿ ಟೈಟಾನ್ಸ್ 3 ಸೋಲು ಕಂಡಿದೆ. ಈವರೆಗೆ ಆಡಿರುವ 10 ಪಂದ್ಯಗಳಲ್ಲಿ 4 ಜಯ ಮತ್ತು 6 ಸೋಲಿನೊಂದಿಗೆ 8 ಅಂಕಗಳನ್ನು ಕಲೆಹಾಕಿದ್ದು 8ನೇ ಸ್ಥಾನ ಅಲಂಕರಿಸಿದೆ. ಹೀಗಾಗಿ ಉಳಿದ 4 ಪಂದ್ಯಗಳಲ್ಲಿ ಎಲ್ಲವನ್ನೂ ಗೆದ್ದು ಸುಲಭವಾಗಿ ಪ್ಲೇ-ಆಫ್ಸ್ ತಲುಪಲು ಗಿಲ್ ಪಡೆ ಎದುರು ನೋಡುತ್ತಿದೆ. ಇತ್ತಂಡಗಳು ಒಟ್ಟು 4 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಉಭಯ ತಂಡಗಳು ತಲಾ ಎರಡರಲ್ಲಿ ಗೆಲುವು ಸಾಧಿಸಿದೆ.

