By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ರಾಜ್ಯ-KarnatakaLatest

ಭೈರತಿ ಬಸವರಾಜ್ ಬಂಧನದ ಕುರಿತು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

Home Minister Parameshwara's response on Bhairati Basavaraj's arrest

Published February 13, 2026
Share
2 Min Read
P P P
SHARE

ಬೆಂಗಳೂರು: ಮಾಜಿ ಸಚಿವ ಹಾಗೂ ಹಾಲಿ ಶಾಸಕ ಭೈರತಿ ಬಸವರಾಜ್ ಬಂಧನದ ಕುರಿತು ಸದಾಶಿವನಗರ ನಿವಾಸದ ಬಳಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.

ಸಿಐಡಿ ಅವರ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಈ ಹಿನ್ನೆಲೆ ಭೈರತಿ ಬಸವರಾಜ್ ಕೋರ್ಟ್‌ನಲ್ಲಿ ಬೇಲ್‌ಗೆ ಅರ್ಜಿ ಸಲ್ಲಿಸಿದ್ದರು. ನಂತರ ಅವರು ಸುಪ್ರೀಂ ಕೋರ್ಟ್‌ಗೂ ಬೇಲ್ ಅರ್ಜಿ ಹಾಕಿದರೂ ಅಲ್ಲಿ ಕೂಡ ಅರ್ಜಿ ತಿರಸ್ಕೃತವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಅವರ ಮುಂದೆ ಕೇವಲ ಎರಡು ಆಯ್ಕೆಗಳು ಮಾತ್ರ ಇದ್ದವು – ಒಂದು ಸರಂಡರ್ ಆಗುವುದು, ಇಲ್ಲವೇ ಬಂಧನಕ್ಕೆ ಒಳಪಡುವುದು. ಈ ಕಾರಣದಿಂದ ಅವರು ಸರಂಡರ್ ಆಗಿದ್ದಾರೆ. ಮುಂದಿನ ಕಾನೂನು ಪ್ರಕ್ರಿಯೆ ತನ್ನ ಹಾದಿಯಲ್ಲಿ ಸಾಗಲಿದೆ. ಇದನ್ನು ಬಿಟ್ಟರೆ ಸದ್ಯ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಬದಲಾವಣೆ ಚರ್ಚೆ – ‘Enough is Enough’
ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಬಾರದೆಂದು ಹೈಕಮಾಂಡ್ ಸೂಚಿಸಿದ್ದರೂ ಕೆಲ ಶಾಸಕರು ಹೇಳಿಕೆ ನೀಡುತ್ತಿರುವ ಬಗ್ಗೆ ಪ್ರಶ್ನಿಸಿದಾಗ ಪರಮೇಶ್ವರ್ ಕಠಿಣವಾಗಿ ಪ್ರತಿಕ್ರಿಯಿಸಿದರು.

ನಮ್ಮ ಎಐಸಿಸಿ ಅಧ್ಯಕ್ಷರು ಬಾಯಿ ಮುಚ್ಚಿಕೊಂಡು ಸುಮ್ಮನಿರಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅದಕ್ಕಿಂತ ಕಠಿಣವಾಗಿ ಹೇಳಲು ಸಾಧ್ಯವಿಲ್ಲ. ಆದರೂ ಕೆಲ ಶಾಸಕರು ಮತ್ತು ಮುಖಂಡರು ಪದೇ ಪದೇ ಮಾತನಾಡುತ್ತಿರುವುದು ಸರಿಯಲ್ಲ. ಇದು ಕೂಡಲೇ ನಿಲ್ಲಬೇಕು ಎಂದು ಹೇಳಿದರು.

ಜನರು ನಮ್ಮಿಂದ ನಿರೀಕ್ಷಿಸುವುದು ಅಭಿವೃದ್ಧಿ ಮತ್ತು ಆಡಳಿತ. ಸಾರ್ವಜನಿಕವಾಗಿ ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದು ಸರಿಯಲ್ಲ. ಹೈಕಮಾಂಡ್ ಇದನ್ನು ಗಮನಿಸುತ್ತಿದೆ ಎಂದು ಭಾವಿಸುತ್ತೇನೆ. ಸಮಯ ಬಂದಾಗ ನಾನು ಕೂಡ ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುತ್ತೇನೆ ಎಂದರು.

“Enough is Enough. ಇದು ಕೂಡಲೇ ನಿಲ್ಲಲೇಬೇಕು. ನಾವು ಅಭಿವೃದ್ಧಿಯ ಕಡೆ ಗಮನ ಕೊಡಬೇಕು. ಹೈಕಮಾಂಡ್ಗೆ ಯಾವಾಗ ಏನು ಮಾಡಬೇಕು ಗೊತ್ತಿದೆ. ಇಂತಹ ಸಂದರ್ಭಗಳು ಅವರಿಗೆ ಹೊಸದಲ್ಲ. ಕರ್ನಾಟಕದಲ್ಲಿ ಈ ಹಿಂದೆ ಕೂಡ ಕ್ರಮ ತೆಗೆದುಕೊಂಡಿದ್ದಾರೆ. ಎಲ್ಲರೂ ಸಹನೆಯಿಂದ ವರ್ತಿಸುವುದನ್ನು ಕಲಿಯಬೇಕು,” ಎಂದು ಅವರು ಹೇಳಿದರು.

ಚಿನ್ನಸ್ವಾಮಿ ಕ್ರೀಡಾಂಗಣ – ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಅನುಮತಿ
ಬೆಂಗಳೂರು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜನೆ ಕುರಿತು ಸಚಿವರು ಪ್ರತಿಕ್ರಿಯೆ ನೀಡಿದರು.

In-principle ಅನುಮತಿ ನೀಡಲಾಗಿದೆ. ಜಸ್ಟೀಸ್ ಕುನ್ಹಾ ಶಿಫಾರಸುಗಳನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿದೆ. ಮ್ಯಾಚ್‌ಗೆ ಮೊದಲು ಕೈಗೊಳ್ಳಬೇಕಾದ ಕ್ರಮಗಳು, ಮೂಲಭೂತ ಸೌಕರ್ಯಗಳ ವ್ಯವಸ್ಥೆ ಸೇರಿದಂತೆ ಮೂರು ಪ್ರಮುಖ ಭಾಗಗಳಲ್ಲಿ ಸೂಚನೆ ನೀಡಲಾಗಿದೆ.

ಇದಕ್ಕಾಗಿ ಜಿಬಿಎ ಆಯುಕ್ತರು, ನಗರ ಪೊಲೀಸ್ ಆಯುಕ್ತರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ. ಐಪಿಎಲ್ ಪಂದ್ಯಾವಳಿ ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಲಾಗುತ್ತದೆ.

ಈ ಬಾರಿ ಭದ್ರತಾ ಕ್ರಮಗಳನ್ನು ನಾಲ್ಕು ಪಟ್ಟು ಹೆಚ್ಚಿಸಲಾಗುತ್ತದೆ. ಕಳೆದ 50 ವರ್ಷಗಳಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ರೀತಿಯ ಘಟನೆ ನಡೆದಿರಲಿಲ್ಲ. ಜನರ ಭದ್ರತೆಗೆ ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

You Might Also Like

ಕುಣಿಗಲ್ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಕಾರ್ಮಿಕರ ದಿನಾಚರಣೆ

ಕೇಂದ್ರ ಸಚಿವ ಚಿರಾಗ್ ಪಾಸ್ವಾನ್‌ಗೆ ಜೀವ ಬೆದರಿಕೆ

ಭವಾನಿ ರೇವಣ್ಣ ಅವರ ನಿರೀಕ್ಷಣಾ ಜಾಮೀನನ್ನು ರದ್ದುಪಡಿಸಲು ಸುಪ್ರೀಂ ನಿರಾಕರಣೆ

ಪಾಕಿಸ್ತಾನವನ್ನು ಆಕ್ರಮಿಸಲು ಆರಂಭಿಸಿದ BLA, ಬಲೂಚಿಸ್ತಾನ ಧ್ವಜ ಹಾರಾಟ

ಮುಂದುವರಿದ ರೇವಣ್ಣರ ಟೇಂಪಲ್‌ ರನ್‌; ಧರ್ಮಸ್ಥಳದ ಮಂಜುನಾಥನಿಗೆ ವಿಶೇಷ ಪೂಜೆ

TAGGED:Bhairati Basavaraj
Share This Article
Facebook Copy Link Print
Previous Article BNP BNP BNP ಬಾಂಗ್ಲಾದೇಶ ಚುನಾವಣಾನಾ ಫಲಿತಾಂಶ : ಬಿಎನ್‌ಪಿಗೆ 197 ಸ್ಥಾನಗಳಲ್ಲಿ ಮುನ್ನಡೆ
Next Article Tariq Rahman And Modi ಫೆ.17ರಂದು ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ಪ್ರಮಾಣ, ಪ್ರಧಾನಿ ಮೋದಿಗೆ ಆಹ್ವಾನ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Road Road Road
ಚಿಕ್ಕೋಡಿ: ರಸ್ತೆಯೇ ಇಲ್ಲದೆ ಜೀವನ ಸಾಗಿಸುತ್ತಿರುವ ನಿಡಸೋಸಿ ಗ್ರಾಮದ ಜನ
ಬೆಳಗಾವಿ-Belagavi
April 2, 2026
Machchi Machchi Machchi
ಬೆಂಗಳೂರು–ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾಂಗು, ಮಚ್ಚುಗಳ ದರ್ಬಾರ್ , ಜನರಲ್ಲಿ ಆತಂಕ
ಬೆಳಗಾವಿ-Belagavi
April 2, 2026
dgdfhfhfh dgdfhfhfh dgdfhfhfh
ಸಮಯಪಾಲಿಸದ ಅಧಿಕಾರಿಗಳು – ಸಾರ್ವಜನಿಕರಿಗೆ ತೊಂದರೆ
ಬಳ್ಳಾರಿ-Ballary
April 2, 2026
Gas out of Stock Gas out of Stock Gas out of Stock
ಆಟೋ ಚಾಲಕರ ಬದುಕಿಗೆ ದೊಡ್ಡ ಹೊಡೆತ ನೀಡಿದ ಗ್ಯಾಸ್ ದರ ಏರಿಕೆ
ಬೆಳಗಾವಿ-Belagavi
April 2, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up