ಬೆಂಗಳೂರು : ನಟ ಸಂಗೀತ ನಿರ್ದೇಶಕ ಸಾಧು ಕೋಕಿಲ ಅವರಿಗೆ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ಪ್ರದಾನ ಮಾಡಿದೆ.
ಈ ಕುರಿತು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿರುವ ಸಾಧು ಕೋಕಿಲ ಅವರು, ‘ಸಂಗೀತ ಕ್ಷೇತ್ರದಲ್ಲಿನ ನನ್ನ ಸಾಧನೆ, ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಿ ಪುರಸ್ಕರಿಸಿದ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯದ ಕುಲಪತಿಗಳಿಗೆ ನನ್ನ ಧನ್ಯವಾದಗಳು’ ಎಂದು ಬರೆದುಕೊಂಡಿದ್ದಾರೆ.
‘ಈ ನನ್ನ ಸಂಗೀತ ಪಯಣದಲ್ಲಿ ಬೆಂಬಲವಾಗಿ ನಿಂತ ಎಲ್ಲ ಸಂಗೀತ ಪ್ರೇಮಿಗಳು ಮತ್ತು ಹಿತೈಷಿಗಳಿಗೆ ನನ್ನ ಅನಂತಾನಂತ ವಂದನೆಗಳು’ ‘ಸಾಧು ನಹಿ ಡಾಕ್ಟರ್ ಸಾಧು ಬೋಲೋ’ ಎಂಬ ಕ್ಯಾಪ್ಷನ್ ಜೊತೆಗೆ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಫೋಟೋ ಪೋಸ್ಟ್ ಮಾಡಿದ್ದಾರೆ.
ಹಾಸ್ಯ ನಟನಾಗಿ ಮಾತ್ರವಲ್ಲದೇ ಸಂಗೀತ ಕ್ಷೇತ್ರದಲ್ಲಿ ಕೂಡ ಸಾಧು ಕೋಕಿಲ ಅವರು ಗಮನ ಸೆಳೆದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ.
ಹಲವು ವರ್ಷಗಳಿಂದ ಸಾಧು ಕೋಕಿಲ ಅವರು ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ನಟನಾಗಿ, ಡೈರೆಕ್ಟರ್ ಆಗಿ, ಸಂಗೀತ ನಿರ್ದೇಶಕನಾಗಿ, ಗಾಯಕನಾಗಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರಿಗೆ ಇರುವ ಅಭಿಮಾನಿ ಬಳಗ ಕೂಡ ತುಂಬ ದೊಡ್ಡದು.