ರಾಮನಗರ: ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ (Bengaluru-Mysuru Expressway) ತಡರಾತ್ರಿ ಭೀಕರ ಅಪಘಾತ (Accident) ಸಂಭವಿಸಿದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳು (Engineering Students) ಸಾವನ್ನಪ್ಪಿರುವ ಘಟನೆ ರಾಮನಗರ (Ramanagara) ತಾಲೂಕಿನ ಕಪನಯ್ಯನದೊಡ್ಡಿ ಬಳಿ ನಡೆದಿದೆ.
ಡಿಕ್ಕಿ ರಭಸಕ್ಕೆ ಕಾರಿನಲ್ಲಿದ್ದ ವಿಶ್ವ (21) ಮತ್ತು ಸೂರ್ಯ (21) ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕ ಸುಹಾಸ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಬೆಂಗಳೂರಿನ ಕಡೆಗೆ ಹೋಗುತ್ತಿದ್ದ ಫಾರ್ಚುನರ್ ಕಾರು ಓವರ್ ಟೇಕ್ ಮಾಡಲು ಹೋಗಿ ಲಾರಿಗೆ (Lorry) ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಇದನ್ನೂ ಓದಿ:ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ರೇಣುಕಾಸ್ವಾಮಿ ಮನೆಗೆ ಭೇಟಿ
ಆಂಧ್ರ ಮೂಲದ ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ. ಕಾರ್ಯನಿಮಿತ್ತ ಮೈಸೂರಿಗೆ ಹೋಗಿ ಬೆಂಗಳೂರಿಗೆ ವಾಪಸ್ಸಾಗುವ ಸಂದರ್ಭ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಇದನ್ನೂ ಓದಿ:ರೇಣುಕಾಸ್ವಾಮಿ ಹತ್ಯೆ ಪ್ರಕರಣ – ಡಿ ಗ್ಯಾಂಗ್‌ನ ಮತ್ತಿಬ್ಬರು ಅರೆಸ್ಟ್

