ರಾಯ್‌ಪುರ, ಮೇ 12: ಛತ್ತೀಸ್ಗಢದ ರಾಯ್ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ.
ಚಟೌಡ್ ಗ್ರಾಮದ ಕುಟುಂಬವೊಂದು ಕುಟುಂಬ ಸಮಾರಂಭದಲ್ಲಿ ಭಾಗವಹಿಸಲು ಬನ್ಸಾರಿ ಗ್ರಾಮಕ್ಕೆ ಹೋಗಿತ್ತು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಹಿಂತಿರುಗುವಾಗ, ಅವರು ಪ್ರಯಾಣಿಸುತ್ತಿದ್ದ ಲಾರಿ ಖರೋರಾ ಪೊಲೀಸ್ ಠಾಣೆ ವ್ಯಾಪ್ತಿಯ ಸರಗಾಂವ್ ಬಳಿ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ತಕ್ಷಣವೇ ರಾಯ್‌ಪುರದ ಡಾ.ಬಿ.ಆರ್. ಅಂಬೇಡ್ಕರ್ ಸ್ಮಾರಕ ಆಸ್ಪತ್ರೆಗೆ ದಾಖಲಿಸಲಾಯಿತು.

