ಡೆಹ್ರಾಡೂನ್: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಮನೆಗಳು ಮತ್ತು ಐಟಿ ಪಾರ್ಕ್ ಪ್ರದೇಶ ಜಲಾವೃತಗೊಂಡಿದೆ. ತಪೋವನ್‌ನಲ್ಲಿ ಹಲವಾರು ಮನೆಗಳು ಮುಳುಗಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ.
ಕಾರ್ಲಿಗಾಡ್ ನದಿಯಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ ಸುತ್ತಮುತ್ತಲಿನ ಪ್ರದೇಶದಲ್ಲಿ ತೀವ್ರ ಹಾನಿ ಸಂಭವಿಸಿದೆ. ಆ ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಇದನ್ನೂ ಓದಿ: ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ
ಭಾರೀ ಮತ್ತು ನಿರಂತರ ಮಳೆಯಿಂದಾಗಿ ನದಿ ಅಪಾಯಕಾರಿ ಮಟ್ಟ ತಲುಪಿದ್ದು, ಸೋಮವಾರ ರಾತ್ರಿ ಪ್ರಮುಖ ಸೇತುವೆ ಕುಸಿದು ಬಿದ್ದಿದೆ. ನದಿಪಾತ್ರದಲ್ಲಿರುವ ಆಸ್ತಿಪಾಸ್ತಿಗಳಿಗೆ ಅಪಾರ ಹಾನಿಯಾಗಿದೆ.

