-ಹೆಚ್.ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ಅವರ ಮೇಲೆ ಮನೆ ಕೆಲಸದಾಕೆ ದೂರು
ಹಾಸನ: ಅಶ್ಲೀಲ ವಿಡಿಯೋ ವೈರಲ್ ಹಾಗೂ ಪೆನ್‌ಡ್ರೈವ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ (HD Reavana) ಕುಟುಂಬಕ್ಕೆ ಶಾಕ್ ಮೇಲೆ ಶಾಕ್ ಎದುರಾಗಿದೆ. ನೋಟಿಸ್ ಕೊಟ್ಟು ತನಿಖೆ ನಡೆಸುತ್ತಿರುವ ಪೊಲೀಸರು ಇಂದು ಹಾಸನದ ಹೆಚ್.ಡಿ ರೇವಣ್ಣ ಮನೆಗೆ (House) ಭೇಟಿ ನೀಡಿದ್ದಾರೆ.

ಹೊಳೆನರಸೀಪುರದ ಮನೆಗೆ ಭೇಟಿ ನೀಡಿದ ನಗರ ಠಾಣೆ ಪೊಲೀಸರು ಕೆಲ ನಿಮಿಷಗಳ ಕಾಲ ಮಾಹಿತಿ ಕೇಳಿದ್ದಾರೆ. ಪೊಲೀಸರು ಮನೆಗೆ ಭೇಟಿ ಕೊಟ್ಟಾಗ ಹೆಚ್.ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ (BHavani Revanna) ಅವರು ಮನೆಯಲ್ಲಿಯೇ ಇದ್ದರು. ಇದನ್ನೂ ಓದಿ: ಅಮೇಥಿ ಬಿಟ್ಟು ರಾಯ್‌ಬರೇಲಿಗೆ ಹೋದ ರಾಹುಲ್ – ಭಯ ಪಡಬೇಡಿ ಎಂದ ಮೋದಿ
ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ಮೇಲೆ ಮನೆ ಕೆಲಸದಾಕೆ ದೂರು ನೀಡಿದ್ದಾರೆ. ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಹೆಚ್.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಹಾಸನದಲ್ಲಿ ಕೆರೆ ಮೀನು ತಿಂದು ಇಬ್ಬರ ಸಾವು, 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ
ಮನೆ ಕೆಲಸದಾಕೆ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಲ್ಲಿ ಭವಾನಿ ರೇವಣ್ಣಗೂ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಇಂದು ಅಥವಾ ನಾಳೆ ವಿಚಾರಣೆಗೆ ಆಗಮಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ. ಸ್ಥಳೀಯ ಪೊಲೀಸರ ಮೂಲಕ ಎಸ್‌ಐಟಿ ತಂಡ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಹೆಚ್‌ಡಿ ರೇವಣ್ಣ

