ನವದೆಹಲಿ: ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ (Aravind Kerjiwal) ಅವರನ್ನು ಸಿಬಿಐ ಬಂಧಿಸಿದ ಬೆನ್ನಲ್ಲೇ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪತ್ನಿ ಸುನೀತಾ ಕೇಜ್ರಿವಾಲ್ (Sunil kerjiwal) ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.
ಹಿಂದಿಯಲ್ಲಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ ಸುನೀತಾ ಕೇಜ್ರಿವಾಲ್ ಬಿಜೆಪಿ ನೇತೃತ್ವದ ಸರ್ಕಾರದ ಮೇಲೆ ಮುಸುಕಿನ ದಾಳಿಯನ್ನು ಪ್ರಾರಂಭಿಸಿದ್ದಾರೆ. ಇದನ್ನು ಅವರು ಈ ಹಿಂದೆ ಸರ್ವಾಧಿಕಾರ ಎಂದು ಉಲ್ಲೇಖಿಸಿದ್ದರು. “ಇಲ್ಲಿಯವರೆಗೆ ದೇವರು ಎಲ್ಲರಿಗೂ ಒಳ್ಳೆ ಬುದ್ಧಿಯನ್ನು ನೀಡಬೇಕೆಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದೆ. ಆದರೆ, ಈಗ ಸರ್ವಾಧಿಕಾರಿ ನಾಶವಾಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ” ಎಂದು ಸುನೀತಾ ಕೇಜ್ರಿವಾಲ್ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಹೈಕಮಾಂಡ್ ಸಿಎಂ ಸ್ಥಾನವನ್ನ ತೀರ್ಮಾನ ಮಾಡುತ್ತೆ ಸ್ವಾಮೀಜಿಯವರಲ್ಲ: ಸಿದ್ದರಾಮಯ್ಯ
ಬುಧವಾರ ಸಿಬಿಐ ಅಧಿಕಾರಿಗಳು ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ ನಂತರ ದೆಹಲಿ ಸಿಎಂ ಪತ್ನಿ ಸುನೀತಾ ಕೇಜ್ರಿವಾಲ್ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದರು. ಇಡೀ ವ್ಯವಸ್ಥೆಯು ತನ್ನ ಪತಿ ಜೈಲಿನಿಂದ ಹೊರಬರದಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದ್ದರು. ಈ ಪರಿಸ್ಥಿತಿಯನ್ನು ‘ಸರ್ವಾಧಿಕಾರ’ ಮತ್ತು ‘ತುರ್ತು ಪರಿಸ್ಥಿತಿ’ಗೆ ಹೋಲಿಸಿದ್ದರು. ಇದನ್ನೂ ಓದಿ: ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಕೇಸ್- ಸೂರಜ್ ರೇವಣ್ಣಗೆ ಮೆಡಿಕಲ್ ಟೆಸ್ಟ್
ಹಿಂದಿಯಲ್ಲಿ ಎಕ್ಸ್ನಲ್ಲಿ ಮಾಡಿದ ಮತ್ತೊಂದು ಪೋಸ್ಟ್ನಲ್ಲಿ ಸುನೀತಾ ಕೇಜ್ರಿವಾಲ್ ತನ್ನ ಪತಿಗೆ ಜೂನ್ 20ರಂದು ಅಬಕಾರಿ ನೀತಿಗೆ ಸಂಬಂಧಿತ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಜಾಮೀನು ನೀಡಲಾಯಿತು. ಆದರೆ, ಇದಕ್ಕೆ ತಡೆಯಾಜ್ಞೆ ಸಿಕ್ಕಿತು. ಅದಾದ ಮರುದಿನವೇ ಸಿಬಿಐ ಕೇಜ್ರಿವಾಲ್ ಅವರನ್ನು ಆರೋಪಿಯನ್ನಾಗಿ ಮಾಡಿದೆ. ಇಂದು ಅವರನ್ನು ಬಂಧಿಸಲಾಯಿತು. ಇಡೀ ವ್ಯವಸ್ಥೆಯು ಜೈಲಿನಿಂದ ಹೊರಬರದಂತೆ ನೋಡಿಕೊಳ್ಳಲು ಪ್ರಯತ್ನಿಸುತ್ತಿದೆ. ಇದು ಕಾನೂನಲ್ಲ. ಇದು ಸರ್ವಾಧಿಕಾರ, ಇದು ತುರ್ತುಸ್ಥಿತಿ” ಎಂದು ಅವರು ಬರೆದಿದ್ದಾರೆ. ಇದನ್ನೂ ಓದಿ: ಹೃದಯಾಘಾತಕ್ಕೆ ಮತ್ತೊಂದು ಬಲಿ- 24 ವರ್ಷದ ಯುವತಿ ಸಾವು