By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ್ ಹೊರಗುಳಿಯುವ ಸಾಧ್ಯತೆ..? – ಐಸಿಸಿಯಿಂದ ಕಠಿಣ ಎಚ್ಚರಿಕೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ಕ್ರೀಡೆ-Sports - ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ್ ಹೊರಗುಳಿಯುವ ಸಾಧ್ಯತೆ..? – ಐಸಿಸಿಯಿಂದ ಕಠಿಣ ಎಚ್ಚರಿಕೆ

ಕ್ರೀಡೆ-SportsLatest

ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ್ ಹೊರಗುಳಿಯುವ ಸಾಧ್ಯತೆ..? – ಐಸಿಸಿಯಿಂದ ಕಠಿಣ ಎಚ್ಚರಿಕೆ

ICC warns Pakistan of severe sanctions over T20 World Cup boycott drama

Published January 25, 2026
Share
2 Min Read
Pakistan Pakistan Pakistan
SHARE

ಬೆಂಗಳೂರು: ಮುಂದಿನ ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ್ ಕ್ರಿಕೆಟ್ ತಂಡ ಹೊರಗುಳಿಯುವ ಸಾಧ್ಯತೆ ಇದೆ ಎಂಬ ಸುದ್ದಿಗಳು ಕ್ರಿಕೆಟ್ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿವೆ. ಈ ಬೆಳವಣಿಗೆಯ ಬೆನ್ನಲ್ಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪಾಕಿಸ್ತಾನ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.

ಟಿ20 ವಿಶ್ವಕಪ್‌ನಿಂದ ಬಾಂಗ್ಲಾದೇಶ್ ತಂಡವನ್ನು ಕೈ ಬಿಡುವ ವಿಚಾರದ ನಂತರ, ಪಾಕಿಸ್ತಾನ್ ತಂಡದ ಭವಿಷ್ಯ ಕೂಡ ಅನುಮಾನದಲ್ಲಿದೆ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಹೇಳಿಕೆ ನೀಡಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ್ ತಂಡ ಭಾಗವಹಿಸುವುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ. ಈ ನಿರ್ಧಾರ ಸಂಪೂರ್ಣವಾಗಿ ಪಾಕಿಸ್ತಾನ್ ಸರ್ಕಾರದ ಕೈಯಲ್ಲಿದೆ. ಸರ್ಕಾರ ಏನು ತೀರ್ಮಾನ ಕೈಗೊಳ್ಳುತ್ತದೆಯೋ ಅದರ ಮೇಲೆ ಪಾಕ್ ತಂಡದ ವಿಶ್ವಕಪ್ ಭವಿಷ್ಯ ನಿಂತಿದೆ ಎಂದು ಅವರು ತಿಳಿಸಿದ್ದಾರೆ.

ಈ ಹೇಳಿಕೆಯ ಮೂಲಕ ಬಾಂಗ್ಲಾದೇಶ್ ಕ್ರಿಕೆಟ್ ಬೋರ್ಡ್‌ಗೆ ಪರೋಕ್ಷ ಬೆಂಬಲ ಸೂಚಿಸಿರುವ ಪಿಸಿಬಿ, ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಬೆದರಿಕೆಯನ್ನು ಕೂಡ ಒಡ್ಡಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಇತ್ತ ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್‌ನಿಂದ ಹೊರಗುಳಿದರೆ, ಟೂರ್ನಿಗೆ ಭಾರೀ ಆರ್ಥಿಕ ನಷ್ಟ ಸಂಭವಿಸಲಿದೆ ಎಂಬ ಲೆಕ್ಕಾಚಾರವನ್ನು ಪಿಸಿಬಿ ಮಾಡಿದೆ. ಅದರಲ್ಲೂ ಭಾರತ–ಪಾಕಿಸ್ತಾನ್ ನಡುವಿನ ಹೈವೋಲ್ಟೇಜ್ ಪಂದ್ಯ ನಡೆಯದಿದ್ದರೆ, ವಿಶ್ವಕಪ್ ಟೂರ್ನಿಯೇ ಬಹುತೇಕ ವಿಫಲವಾದಂತೆ ಆಗಲಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಬಿಸಿಸಿಐ ಹಾಗೂ ಐಸಿಸಿಗೆ ಬಿಗ್ ಶಾಕ್ ನೀಡಲು ಪಿಸಿಬಿ ತೆರೆಮರೆಯ ಪ್ರಯತ್ನ ನಡೆಸುತ್ತಿದೆ ಎಂಬ ಆರೋಪಗಳೂ ಕೇಳಿಬರುತ್ತಿವೆ.

ಈ ಬೆಳವಣಿಗೆಯ ಬೆನ್ನಲ್ಲೇ ಐಸಿಸಿ ಕೂಡ ಪಾಕಿಸ್ತಾನ್‌ಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದು, ಟಿ20 ವಿಶ್ವಕಪ್‌ನಿಂದ ಪಾಕ್ ತಂಡ ಹೊರಗುಳಿದರೆ ಕಠಿಣ ಪರಿಣಾಮ ಎದುರಾಗಲಿದೆ ಎಂದು ಸೂಚಿಸಿದೆ. ಪಾಕಿಸ್ತಾನ್ ಟಿ20 ವಿಶ್ವಕಪ್‌ಗೆ ಕೈಕೊಟ್ಟರೆ, ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದಲೇ ಬ್ಯಾನ್ ಮಾಡುವ ಸಾಧ್ಯತೆ ಇದೆ ಎಂದು ಐಸಿಸಿ ಎಚ್ಚರಿಸಿದೆ.

ಅಷ್ಟೇ ಅಲ್ಲದೆ, ಯಾವುದೇ ಅಂತಾರಾಷ್ಟ್ರೀಯ ತಂಡಗಳೊಂದಿಗೆ ದ್ವಿಪಕ್ಷೀಯ ಸರಣಿ ಆಡಲು ಅವಕಾಶ ನೀಡುವುದಿಲ್ಲ. ಜೊತೆಗೆ ಪಾಕಿಸ್ತಾನ್ ಸೂಪರ್ ಲೀಗ್‌ನಲ್ಲಿ ಆಡಲು ವಿದೇಶಿ ಆಟಗಾರರಿಗೆ ಎನ್‌ಒಸಿ ನೀಡುವುದಿಲ್ಲ ಎಂದು ಕೂಡ ಸ್ಪಷ್ಟಪಡಿಸಲಾಗಿದೆ. ಇದಲ್ಲದೆ ಏಷ್ಯಾಕಪ್ ಟೂರ್ನಿಯಿಂದಲೂ ಪಾಕಿಸ್ತಾನ್ ತಂಡವನ್ನು ಬ್ಯಾನ್ ಮಾಡುವ ಎಚ್ಚರಿಕೆ ನೀಡಲಾಗಿದೆ. ಅಂದರೆ ಟಿ20 ವಿಶ್ವಕಪ್‌ನಿಂದ ಹೊರಗುಳಿದರೆ ಪಾಕಿಸ್ತಾನ್ ಕ್ರಿಕೆಟ್‌ಗೆ ಅಂತಾರಾಷ್ಟ್ರೀಯ ಮಾನ್ಯತೆ ರದ್ದಾಗುವ ಭೀತಿ ಎದುರಾಗಿದೆ.

ಟಿ20 ವಿಶ್ವಕಪ್‌ನಿಂದ ಹೊರಗುಳಿಯುವ ಬೆದರಿಕೆ ಒಡ್ಡಿರುವ ಪಿಸಿಬಿಗೆ ಐಸಿಸಿ ಕೌಂಟರ್ ಅಟ್ಯಾಕ್ ನೀಡಿದ್ದು, ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಇದೀಗ ಭಾರೀ ಇಕ್ಕಟ್ಟಿಗೆ ಸಿಲುಕಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಾನ್ಯತೆ ರದ್ದತಿಯ ಸೂಚನೆಯ ಕಾರಣ, ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್‌ನಿಂದ ಹೊರಗುಳಿಯುವುದು ಅನುಮಾನವೇ ಎಂಬ ಅಭಿಪ್ರಾಯ ಕ್ರಿಕೆಟ್ ವಲಯದಲ್ಲಿ ವ್ಯಕ್ತವಾಗುತ್ತಿದೆ.

You Might Also Like

ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟರ್ ಪತನ, ಇಬ್ಬರು ಪೈಲಟ್‌ಗಳು ಸೇರಿ ಮೂವರ ಸಾವು

ವಿವಾಹ ವಾರ್ಷಿಕೋತ್ಸವದಂದೇ ಗಂಡು ಮಗುವಿಗೆ ಜನ್ಮ ನೀಡಿದ ನಟಿ ಹರಿಪ್ರಿಯಾ

ಕೆಡಿಪಿ ಸಭೆಯಲ್ಲಿ ನಿದ್ದೆ ಮಾಡಿ ಸುದ್ದಿಯಾದ ಎಂಎಲ್‌ಸಿ ವಸಂತ ಕುಮಾರ್‌

ರಾಯರ ಭಕ್ತರಿಗೆ ಮೋಸ, ಆನ್​​ಲೈನ್​​ ಬುಕ್ಕಿಂಗ್ ನಲ್ಲಿ ವಂಚನೆ

ಮಹಾಲಕ್ಷ್ಮಿ ಕೊಲೆ ಪ್ರಕರಣ ಕುರಿತು ಗೃಹಸಚಿವ ಪರಮೇಶ್ವರ್ ಹೇಳಿದ್ದೇನು..?

TAGGED:ICCpakistan
Share This Article
Facebook Copy Link Print
Previous Article sgvdgdgh sgvdgdgh sgvdgdgh ಕೆನಡಾದ ಬರ್ನಬಿಯಲ್ಲಿ ಭಾರತೀಯ ಯುವಕನ ಗುಂಡಿಕ್ಕಿ ಹತ್ಯೆ
Next Article Police Medal 01 Police Medal 01 Police Medal 01 ರಾಜ್ಯದ 22 ಮಂದಿ ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ : ಇಲ್ಲಿದೆ ಲಿಸ್ಟ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up