ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರ ತೀರಿಸಿಕೊಳ್ಳುವ ಆವೇಶದಲ್ಲಿರುವ ಕೇಂದ್ರ ಸರ್ಕಾರ ಮಹತ್ವದ ನ್ಯೂನಿರ್ಣಯಗಳನ್ನು ಕೈಗೊಳ್ಳುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಯಾವೊಬ್ಬ ಪಾಕಿಸ್ತಾನಿ ಪ್ರಜೆಯೂ ಕೇಂದ್ರ ಸರ್ಕಾರ ನೀಡಿರುವ ಗಡುವನ್ನು ಮೀರಿ ದೇಶದಲ್ಲಿ ಉಳಿಯದಂತೆ ನೋಡಿಕೊಳ್ಳಬೇಕೆಂದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಲ್ಲಾ ರಾಜ್ಯಗಳಿಗೆ ನಿರ್ದೇಶನ ನೀಡಿದ್ದಾರೆ.
ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಕರೆ ಮಾಡಿ ಈ ಬಗ್ಗೆ ಅಮಿತ್ ಶಾ ಮಾತನಾಡಿದ್ದಾರೆ. ಎಲ್ಲಾ ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿರುವ ಪಾಕಿಸ್ತಾನಿ ಪ್ರಜೆಗಳನ್ನು ಪತ್ತೆಹಚ್ಚಿ ದೇಶದಿಂದ ವಾಪಸ್ ಕಳುಹಿಸಬೇಕು ಎಂದು ಹೇಳಿದ್ದಾರೆಂದು ವರದಿಯಾಗಿದೆ.
ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ಬಳಿಕ ಪಾಕ್ ಸಂಬಂಧ ಕಡಿದುಕೊಂಡ ಭಾರತ ಸರ್ಕಾರದ ʻಪಂಚʼ ನಿರ್ಣಯಗಳಲ್ಲಿ ಪಾಕಿಸ್ತಾನಿ ಪ್ರಜೆಗಳ ವೀಸಾ ರಸ್ಸುಗೊಳಿಸುವುದು ಒಂದಾಗಿದೆ.
ಪಹಲ್ಗಾಮ್‌ನಲ್ಲಿ ನಡೆದ ಹಿಂದೂಗಳ ನರಮೇಧ ಕೃತ್ಯಕ್ಕೆ ಭಾರತ ಪ್ರತೀಕಾರದ ಪಣ ತೊಟ್ಟಿದೆ. ಉಗ್ರರು ಊಹೆಯೂ ಮಾಡದಂತಹ ಶಿಕ್ಷೆ ಅನುಭವಿಸ್ತಾರೆ ಅಂತ ಪ್ರಧಾನಿ ಮೋದಿ ಕಟು ಎಚ್ಚರಿಕೆ ನೀಡಿದ್ದಾರೆ.

