ರಾಜಭವನ ಬಿಜೆಪಿ ಕಚೇರಿಯಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ : ಆರ್‌.ಅಶೋಕ

ಬೆಂಗಳೂರು : ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ಆರ್‌.ಅಶೋಕ ಟೀಕಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ? ರಾಜಭವನ ಎಂದರೆ ಸಂವಿಧಾನದತ್ತ ಅಧಿಕಾರ. … Continue reading ರಾಜಭವನ ಬಿಜೆಪಿ ಕಚೇರಿಯಾದರೆ ವಿಧಾನಸೌಧವನ್ನು ಕಾಂಗ್ರೆಸ್‌ ಕಚೇರಿ ಎನ್ನಬೇಕಾಗುತ್ತದೆ : ಆರ್‌.ಅಶೋಕ