ಕೋಲ್ಕತ್ತಾ: ಮತ್ತು ಬರಿಸುವ ಪಾನೀಯ ನೀಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಇಂಡಿಯನ್ ಇನ್ಸ್ಟಿಟ್ಯೂಷನ್ ಆಫ್ ಮ್ಯಾನೇಜ್‌ಮೆಂಟ್ ಕಾಲೇಜಿನ ಹುಡುಗರ ಹಾಸ್ಟೆಲ್‌ನಲ್ಲಿ ನಡೆದಿದೆ. ಹರಿದೇವ್‌ಪುರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ದಾಖಲಿಸಿದ ಎಫ್‌ಐಆರ್ ಆಧಾರದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.
ತನ್ನನ್ನು ಕೌನ್ಸೆಲಿಂಗ್ ಸೆಷನ್‌ಗಾಗಿ ಹಾಸ್ಟೆಲ್‌ಗೆ ಕರೆಸಲಾಗಿತ್ತು. ನಂತರ ಹಾಸ್ಟೆಲ್‌ನಲ್ಲಿ ಡ್ರಗ್ಸ್ ಬೆರೆಸಿದ ಪಾನೀಯ ಸೇವಿಸಿದ ನಂತರ ಪ್ರಜ್ಞಾಹೀನಳಾದೆ. ಪ್ರಜ್ಞೆ ಮರಳಿದ ನಂತರ ತನ್ನ ಮೇಲೆ ಅತ್ಯಾಚಾರ ನಡೆದಿದೆ ಎಂದು ಅರಿವಾಗಿದೆ.
ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಆರೋಪಿ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದಾರೆ. ಐಐಎಂ-ಕೋಲ್ಕತ್ತಾದ ಬಾಲಕರ ಹಾಸ್ಟೆಲ್ ಒಳಗೆ ಶುಕ್ರವಾರ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

