ಬೆಳಗಾವಿ : ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರಿನ ಪೈಪ್ ಲೈನ್ ಕಾಮಗಾರಿಯನ್ನು ಮತ್ತೇ ನಡೆಸಲಿದೆ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡುಗ್ನಟ್ಟಿ ಹೇಳಿದರು.
ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರಿನ ಪೈಪ್ ಲೈನ್ ಕಾಮಗಾರಿಯನ್ನು ಮತ್ತೇ ಆರಂಭಿಸಿರುವುದನ್ನು ವಿರೋಧಿಸಿ ಶುಕ್ರವಾರ ಕರವೇ ನಾರಾಯಣಗೌಡ ಬಣ ಬೆಳಗಾವಿ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಿ ಬೃಹತ್ ಹೋರಾಟ ನಡೆಸಲಿದೆ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ಹೇಳಿದರು.
ಗುರುವಾರ ಬೆಳಗಾವಿಯಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಟಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸರಕಾರದ ಗಮನಕ್ಕೆ ತಂದು ಬೆಳಗಾವಿ ಜನರ ವಿರೋಧ ಇದೆ. ಹಿಡಕಲ್ ಜಲಾಶಯದಿಂದ ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ನೀರು ಕೊಂಡೊಯ್ಯುವ ಕಾಮಗಾರಿಗೆ ವಿರೋಧ ಇದೆ. ಈ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಲಾಗುವುದು ಎಂದರು.
ವರದಿ : ದಯಾನಂದ. ಎಂ.

