ಚಿಕ್ಕಬಳ್ಳಾಪುರ : ಜುಲೈ2 ರಂದು ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಹಲವು ಮಹತ್ವದ ನಿರ್ಣಯ ಘೋಷಣೆಯಾಗಲಿದೆ.
ಜುಲೈ 2 ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಸಿಎಂ , ಡಿಸಿಎಂ, ಸಚಿವರು, ಶಾಸಕರು ಹಾಜರಿರಲಿದ್ದಾರೆ. ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.
‘ಪಡಿತರ ಚೀಟಿ’ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ‘ಆಹಾರದ ಕಿಟ್’
ಪಡಿತರ ಚೀಟಿದಾರರಿಗೆ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ. ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದರೆ ಸದ್ಯದಲ್ಲೇ ಜಾರಿಗೆ ತರುವ ಸಾಧ್ಯತೆಯಿದೆ. ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ಆಹಾರದ ಕಿಟ್ ನಲ್ಲಿ ಸಕ್ಕರೆ, ಉಪ್ಪು, ತೊಗರಿಬೇಳೆ, ಕಾಫಿಪುಡಿ, ಟೀ ಪುಡಿ, ಅಡುಗೆ ಎಣ್ಣೆ, ಗೋಧಿ ಇರಲಿದೆ . ಪ್ರಸ್ತಾವನೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದರೆ ಮಾತ್ರ ವಿತರಣೆ ಮಾಡುವ ಸಾಧ್ಯತೆಯಿದೆ ಎನ್ನಲಾಗಿದೆ.
- ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
- ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್ಗೆ ಏರುವ ಸಾಧ್ಯತೆ
- ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
- ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
- ಆಟಿಕೆ ಕಾರು ಬಳಸಿ ದೆಹಲಿಯಲ್ಲಿ ಸ್ಫೋಟಕ್ಕೆ ಸಂಚು ಮಾಡಿದ್ದ ನಾಲ್ವರು ಶಂಕಿತ ಉಗ್ರರ ಬಂಧನ

