ವಿಜಯಪುರ: ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ (Maharashtra) ಭಾರೀ ಮಳೆಯಾಗುತ್ತಿದೆ. ಅದರಂತೆ ಕೃಷ್ಣಾನದಿ ಉಗಮಸ್ಥಾನ ಮಹಾಬಲೇಶ್ವರದಲ್ಲೂ ಭಾರೀ ಮಳೆಯಾಗಿದ್ದು, ಆಲಮಟ್ಟಿ ಜಲಾಶಯಕ್ಕೆ (Almatti Dam) ಒಳಹರಿವು ಹೆಚ್ಚಾಗಿದೆ.
ಜೂ.8 ರಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಕ್ರವಾರದಿಂದ ಒಳಹರಿವು ಆರಂಭವಾಗಿದೆ. ಸದ್ಯ ಆಲಮಟ್ಟಿ ಜಲಾಶಯದಲ್ಲಿ 2,578 ಕ್ಯೂಸೇಕ್ ಒಳಹರಿವು ದಾಖಲಾಗಿದೆ. ಇದರಿಂದ ಕೃಷ್ಣಾ ನದಿ (Krishna River) ಪಾತ್ರದ ಜನರಲ್ಲಿ ಸಂತಸ ಮನೆ ಮಾಡಿದೆ. ಕಳೆದ ವರ್ಷ ಜೂನ್ ಕಳೆದರೂ ಒಳಹರಿವು ಇರಲಿಲ್ಲ. ಈ ವರ್ಷ ಜೂನ್ ಮೊದಲ ವಾರದಲ್ಲೇ ಒಳಹರಿವು ಆರಂಭವಾದ ಕಾರಣ ಕೃಷ್ಣಾ ನದಿ ಪಾತ್ರದ ಜನರಲ್ಲಿ ಸಂತಸ ಮೂಡಿದೆ. ಇದನ್ನೂ ಓದಿ: ಜರ್ಮನಿಯಲ್ಲಿ ತಲೆಮರೆಸಿಕೊಳ್ಳಲು ಸಹಾಯ ಮಾಡಿದ ಪ್ರಜ್ವಲ್ ಗರ್ಲ್‍ಫ್ರೆಂಡ್- ಪ್ರೇಯಸಿಗೆ SIT ನೋಟಿಸ್
ವಿಜಯಪುರ ಜಿಲ್ಲೆಯ ಹಲವೆಡೆ ಶುಕ್ರವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಇದರಿಂದ ಹಲವೆಡೆ ಮನೆಗಳಿಗೆ ನೀರು ನುಗ್ಗಿದೆ. ಸಿಂದಗಿ ತಾಲೂಕಿನ ಗೋಲಗೇರಿ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿದೆ. 15ಕ್ಕೂ ಅಧಿಕ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮಳೆಯ ಆರ್ಭಟಕ್ಕೆ ಜನರು ಕಂಗಾಲಾಗಿದ್ದಾರೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಡುವಂತಾಗಿದೆ. ನಿನ್ನೆ ತಡರಾತ್ರಿ 1 ಗಂಟೆಗಳ ಕಾಲ ಸತತವಾಗಿ ಸುರಿದ ಮಳೆಯಿಂದ ಈ ಆವಾಂತರ ಸೃಷ್ಟಿಯಾಗಿದೆ. ಇದನ್ನೂ ಓದಿ: ಕೆನಡಾದ ಬಿಲಿಯನೇರ್: ಫ್ರಾಂಕ್ ಸ್ಟ್ರೋನಾಚ್ ವಿರುದ್ಧ ರೇಪ್, ಲೈಂಗಿಕ ದೌರ್ಜನ್ಯದ ಆರೋಪ
ಕರಾವಳಿಯಲ್ಲಿ ಮುಂದಿನ 15 ದಿನ ಮಳೆ:
ಇನ್ನೂ ರಾಜ್ಯದಲ್ಲಿ ದಾವಣಗೆರೆ, ಬೆಳಗಾವಿ, ಚಿತ್ರದುರ್ಗ, ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಅರ್ಭಟ ಮುಂದುವರಿದಿದೆ. ಉಡುಪಿ , ಉತ್ತರಕನ್ನಡ ಜಿಲ್ಲೆಗಳಿಗೆ ಭಾರೀ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. 30-40 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಮುಂದಿನ 15 ದಿನ ಕರಾವಳಿ ಭಾಗದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ದೇವನಹಳ್ಳಿ ಏರ್ಪೋಟ್ ನಲ್ಲಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ- 06 ಕೋಟಿ 29 ಲಕ್ಷ ಮೌಲ್ಯದ ಚಿನ್ನ ವಶ

