ರಾಜ್ಯ ಸರ್ಕಾರಿ ನೌಕರರ ವೈದ್ಯಕೀಯ ಭತ್ಯೆ ಮಾಸಿಕ 200 ರೂ.ನಿಂದ 500 ರೂ.ಗೆ ಹೆಚ್ಚಳ

ಬೆಂಗಳೂರು : ಗ್ರೂಪ್‌ ಸಿ ಮತ್ತು ಗ್ರೂಪ್‌ ಡಿ ವೃಂದದ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಆಗಸ್ಟ್‌ 1, 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ. 5-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆಎಎಸ್‌‍ಎಸ್‌‍) ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿದೆ. 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ … Continue reading ರಾಜ್ಯ ಸರ್ಕಾರಿ ನೌಕರರ ವೈದ್ಯಕೀಯ ಭತ್ಯೆ ಮಾಸಿಕ 200 ರೂ.ನಿಂದ 500 ರೂ.ಗೆ ಹೆಚ್ಚಳ