ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ : ಮಳೆಯಿಂದಾಗಿ ಮೊದಲ ದಿನದಾಟ ರದ್ದು
ಬೆಂಗಳೂರು : ಸತತವಾಗಿ ಸುರಿದ ಮಳೆಯಿಂದಾಗಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯಕ್ಕೆ ಅಡಚಣೆಯಾಗಿದ್ದು, ಇದರಿಂದಾಗಿ ಟಾಸ್ ಕಾಣದೇ ಮೊದಲ ದಿನದ ಪಂದ್ಯ ರದ್ದುಗೊಂಡಿದೆ. ಇಂದು ಬೆಳಗ್ಗೆಯಿಂದಲೇ ಉದ್ಯಾನನಗರಿಯಲ್ಲಿ ಮಳೆ ಸುರಿಯುತ್ತಿದ್ದು, ಇದರಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆರೆದಿದ್ದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಮೋಡಕವಿದ ವಾತಾವಾರಣ ಹಾಗೂ ತುಂತುರು ಮಳೆ ಮುಂದುವರಿದ ಹಿನ್ನೆಲೆಯಲ್ಲಿ ದಿನದಾಟ ರದ್ದುಗೊಳಿಸಲು ಅಂಪೈರ್‌ಗಳು ನಿರ್ಧರಿಸಿದ್ದಾರೆ. ಇದರಿಂದಾಗಿ ಟಾಸ್ ಕೂಡ ಕಾಣದೇ ಮೊದಲ ದಿನದಾಟ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
Copy and paste this URL into your WordPress site to embed
Copy and paste this code into your site to embed