By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ । ಹೆಚ್ಡಿಕೆ.
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - Latest - 2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ । ಹೆಚ್ಡಿಕೆ.

LatestTop Storiesರಾಷ್ಟ್ರೀಯ-National

2030ರ ವೇಳೆಗೆ ಭಾರತದಲ್ಲಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ । ಹೆಚ್ಡಿಕೆ.

India aims to produce 300 million tonnes of steel annually by 2030 : HDK.

Published January 6, 2025
Share
2 Min Read
HDK
SHARE

ನವದೆಹಲಿ: 2030ರ ವೇಳೆಗೆ ಭಾರತ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿ ಮಾಡಿರುವ ಗುರಿ ಮುಟ್ಟುವ ದೃಷ್ಟಿಯಿಂದ ಮತ್ತೊಂದು ಸುತ್ತಿನ ‘ಉತ್ಪಾದನೆ ಆಧಾರಿತ ಉತ್ತೇಜನ ಸೌಲಭ್ಯ (PLI – Production linked initiative) ಯೋಜನೆಗೆ ಕೇಂದ್ರ ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಾಲನೆ ನೀಡಿದರು.

ನವದೆಹಲಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಸಚಿವರು ಈ ಸೌಲಭ್ಯಕ್ಕೆ ಉಕ್ಕು ಉತ್ಪಾದಕರು ನೋಂದಾಯಿಸಿಕೊಳ್ಳುವ ಪೋರ್ಟಲ್ ಗೆ ಚಾಲನೆ ನೀಡಿದರು. ಉಕ್ಕು ಆಮದು ಪ್ರಮಾಣಕ್ಕೆ ಅಂಕೆ ಹಾಕುವ, ದೇಶೀಯವಾಗಿ ಹೆಚ್ಚು ಪ್ರಮಾಣದಲ್ಲಿ ಉಕ್ಕು ಉತ್ಪಾದಿಸುವ ಗುರಿಯೊಂದಿಗೆ ಈ ಸೌಲಭ್ಯ ನೀಡಲಾಗುತ್ತಿದೆ ಇಂದು ಕುಮಾರಸ್ವಾಮಿ ಅವರು ಹೇಳಿದರು.

ಭಾರತೀಯ ಉಕ್ಕು ಕ್ಷೇತ್ರದಲ್ಲಿ ಇದೊಂದು ಮೈಲಿಗಲ್ಲು ಆಗಿದ್ದು, ದೇಶೀಯ ಉದ್ಯಮಕ್ಕೆ ಶಕ್ತಿ ತುಂಬುವುದೇ ಉದ್ದೇಶವಾಗಿದೆ. ಜಾಗತಿಕ ಮಟ್ಟದಲ್ಲಿ ಭಾರತದ ಉಕ್ಕು ಉದ್ಯಮ ಸ್ಥಿರವಾಗಿ ನಿಲ್ಲುವ ದಿಸೆಯಲ್ಲಿ ಈ ಸೌಲಭ್ಯ ಹೆಚ್ಚು ಪರಿಣಾಮಕಾರಿ ಎಂದು ಸಚಿವರು ಹೇಳಿದರು.

ಪಿಎಲ್ ಐ 1.1 ಪೋರ್ಟಲ್ ಈಗಿನಿಂದಲೇ ನೋಂದಾವಣೆಗೆ ತೆರೆದುಕೊಂಡಿದೆ. ಈ ತಿಂಗಳ ಕೊನೆ, ಎಂದರೆ ಜನವರಿ 31ರವರೆಗೂ ಉಕ್ಕು ಉದ್ಯಮಿಗಳು ನೋಂದಾಯಿಸಿಕೊಳ್ಳಲು ಅವಕಾಶವಿದೆ ಎಂದು ಸಚಿವರು ಮಾಹಿತಿ ನೀಡಿದರು.

ಉಕ್ಕು ಉದ್ಯಾನದಲ್ಲಿ ಈ ಸೌಲಭ್ಯ ಪರಿವರ್ತನಾತ್ಮಕ ಹೆಜ್ಜೆ ಎಂದು ಬಣ್ಣಿಸಿದ ಸಚಿವರು; ಉಕ್ಕು ಭಾರತದ ಪ್ರಗತಿಯ ಬೆನ್ನೆಲುಬಾಗಿದ್ದು, ಅದನ್ನು ಬಲಪಡಿಸುವ ಹಾಗೂ ಭವಿಷ್ಯದಲ್ಲಿ ಸುಸ್ಥಿರ ಅಭಿವೃದ್ಧಿಗೆ ಖಾತರಿ ನೀಡುವ ಬದ್ಧತೆಯನ್ನು ಹೊಂದಿದೆ ಎಂದು ಹೇಳಿದರು.

PLI ಯೋಜನೆಯ ಮೊದಲ ಹಂತದಲ್ಲಿ ಮಹತ್ವದ ಯಶಸ್ಸು ಸಾಧಿಸಿದೆ. ₹27,106 ಕೋಟಿ ಹೂಡಿಕೆಯ ಜತೆಗೆ 14,760 ನೇರ ಉದ್ಯೋಗ ಅವಕಾಶ ಹಾಗೂ 7.90 ದಶಲಕ್ಷ ಟನ್‌ಗಳಷ್ಟು ಹೆಚ್ಚುವರಿ ವಿಶೇಷ ಉಕ್ಕಿನ ಉತ್ಪಾದನಾ ಸಾಮರ್ಥ್ಯವನ್ನು ತೋರಿಸಿದೆ. ಕಳೆದ 2024ರ ಅಕ್ಟೋಬರ್ ಹೊತ್ತಿಗೆ ₹17,581 ಕೋಟಿಗಳಷ್ಟು ಹೂಡಿಕೆ ಆಗಿದೆ. ಪರಿಣಾಮವಾಗಿ 8,660 ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ಸಚಿವ ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು.

ನಿಜಕ್ಕೂ ಪಿ ಎಲ್ ಐ 1.0 ಯಶಸ್ಸು ಸ್ಪೂರ್ತಿದಾಯಕವಾಗಿದೆ ಮತ್ತು ಜಾಗತಿಕ ಮಟ್ಟದಲ್ಲಿ ಭಾರತದ ಉಕ್ಕು ಉದ್ಯಮವನ್ನು ಮುನ್ನಡೆಸುವ ನಮ್ಮ ಸಂಕಲ್ಪಕ್ಕೆ ದೊಡ್ಡ ಶಕ್ತಿ ತುಂಬಿದೆ ಎಂದು ಅವರು ಹೇಳಿದರು.

ಜಗತ್ತಿನ ಎರಡನೇ ಅತಿದೊಡ್ಡ ಉಕ್ಕು ಉತ್ಪಾದಕ ಮತ್ತು ಗ್ರಾಹಕ ದೇಶವಾಗಿರುವ ಭಾರತವು 2022ರಿಂದ ದೇಶೀಯ ಉಕ್ಕಿನ ಬಳಕೆಯಲ್ಲಿ 12% ಕ್ಕಿಂತ ಹೆಚ್ಚು ವಾರ್ಷಿಕ ಬೆಳವಣಿಗೆಯನ್ನು ಕಂಡಿದೆ, ಇದು ಬಲವಾದ ಆರ್ಥಿಕ ಮೂಲಭೂತ ಮತ್ತು ಮೂಲಸೌಕರ್ಯ ಮೇಲಿನ ಹೂಡಿಕೆಗಳಿಂದ ಸಾಧ್ಯವಾಗಿದೆ. 2030ರ ವೇಳೆಗೆ ವಾರ್ಷಿಕವಾಗಿ ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆಯನ್ನು ಸಾಧಿಸುವ ಗುರಿ ಭಾರತದ್ದಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಗುರಿಯನ್ನು ನಾವು ಯಶಸ್ವಿಯಾಗಿ ಮುಟ್ಟುತ್ತೇವೆ. ಮೋದಿಯವರ ದೂರದೃಷ್ಟಿಯ ನಾಯಕತ್ವದಲ್ಲಿ ಭಾರತವು ಜಾಗತಿಕ ಉಕ್ಕಿನ ಬೆಳವಣಿಗೆಯ ಕೇಂದ್ರಬಿಂದುವಾಗಿ ಹೊರಹೊಮ್ಮುತ್ತಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಉಕ್ಕು ಸಚಿವಾಲಯದ ಕಾರ್ಯದರ್ಶಿ ಸಂದೀಪ್ ಪಾಂಡ್ರಿಕ್, ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್, ಭಾರತೀಯ ಖನಿಜ ಅಭಿವೃದ್ಧಿ ನಿಗಮದ ಅಧ್ಯಕ್ಷ ಅಮಿತವ್ ಮುಖರ್ಜಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

You Might Also Like

ಪ್ರಜ್ವಲ್‌ ಕಳಂಕ ತೊಳೆದುಕೊಳ್ಳುವವರೆಗೂ ಹೆಚ್‌ಡಿಡಿ ಕುಟುಂಬದವರು ರಾಜೀನಾಮೆ ಕೊಡಲಿ: ಪ್ರಿಯಾಂಕ್‌ ಖರ್ಗೆ

ರಾಷ್ಟ್ರ ರಾಜಧಾನಿಯಲ್ಲಿ “ಕೈ” ಗೆ ಮತ್ತೊಂದು ಶಾಕ್: ಮತ್ತಿಬ್ಬರು ಇಂದು ರಾಜೀನಾಮೆ

ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ವೈದ್ಯರ ಬಂಧನ

ಸಿ.ಟಿ.ರವಿ ಅವಾಚ್ಯ ಪದ ಬಳಸಿದ್ದು ಸತ್ಯ : ಸಿಎಂ ಸಿದ್ದರಾಮಯ್ಯ

ಮುಲಾಜಿಲ್ಲದೇ ರಾಜೀವ್ ಗೌಡನನ್ನ ಬಂಧಿಸುತ್ತೇವೆ : ಗೃಹ ಸಚಿವ ಪರಮೇಶ್ವರ್

TAGGED:hd kumaraswamySteel Production
Share This Article
Facebook Copy Link Print
Previous Article Belagavi ಏಜೆಂಟರಿಂದ ಕಾರ್ಮಿಕ ಇಲಾಖೆಯ ಆರೋಗ್ಯ ತಪಾಸಣೆ ಬಗ್ಗೆ ಅಪಪ್ರಚಾರ, ಕಣ್ಮುಚ್ಚಿ ಕುಳಿತ ಇಲಾಖೆ
Next Article CN Manjunath ಜನರ ಜೊತೆ ಮೆಟ್ರೋದಲ್ಲಿ ಪ್ರಯಾಣಿಸಿದ ಸಂಸದ ಡಾ.ಮಂಜುನಾಥ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up