Indian Air Force : ರಾತ್ರೋರಾತ್ರಿ ಪುಣೆಯ ಕಮಾಂಡ್ ಆಸ್ಪತ್ರೆಯಿಂದ ದೆಹಲಿಯ ಸೇನಾ ಆಸ್ಪತ್ರೆಗೆ 1 ಲಿವರ್, 2 ಕಿಡ್ನಿಗಳನ್ನು ರವಾನಿಸಿ ರೋಗಿಗಳ ಜೀವ ಉಳಿಸಲು ನೆರವಾಗಿದೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಐಎಎಫ್, ಕಾರ್ಯಾಚರಣೆಯ ವಿವರಗಳನ್ನು, ಛಾಯಾಚಿತ್ರಗಳು ಮತ್ತು ಏರ್‌ಲಿಫ್ಟ್‌ನ ವೀಡಿಯೊವನ್ನು ಹಂಚಿಕೊಂಡಿದೆ.
ರಾತ್ರಿಯ ಕ್ಷಿಪ್ರ ಕಾರ್ಯಾಚರಣೆಯಲ್ಲಿ, ಭಾರತೀಯ ವಾಯುಪಡೆಯು ಪುಣೆಯ ಕಮಾಂಡ್ ಆಸ್ಪತ್ರೆಯಿಂದ ದೆಹಲಿಯ ಸೇನಾ ಆಸ್ಪತ್ರೆಗೆ ಒಂದು ಯಕೃತ್ತು ಮತ್ತು ಎರಡು ಮೂತ್ರಪಿಂಡಗಳನ್ನು ವಿಮಾನದ ಮೂಲಕ ಸಾಗಿಸಿತು. ಯೋಧರೊಬ್ಬರ ಅವಲಂಬಿತ ವ್ಯಕ್ತಿಯ ಮೆದುಳು ನಿಷ್ಕ್ರಿಯಗೊಂಡಿತ್ತು. ಅವರು ದಾನ ಮಾಡಿದ ಅಂಗಗಳು ಬಹು ಇತರ ವ್ಯಕ್ತಿಗಳಿಗೆ ಹೊಸ ಜೀವನವನ್ನು ನೀಡಿವೆ.
ಎಎಫ್‌ಎಂಎಸ್ ಮತ್ತು ಐಎಎಫ್ ಜಂಟಿಯಾಗಿ ನಿರ್ವಹಿಸಿವೆ ಎಂದು ಭಾರತೀಯ ವಾಯುಪಡೆ ಎಕ್ಸ್ ಸಂದೇಶದಲ್ಲಿ ತಿಳಿಸಿದೆ.ಈ ತಿಂಗಳ ಆರಂಭದಲ್ಲಿ ಬೆಂಗಳೂರಿನಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ವ್ಯಕ್ತಿಯ ಅಂಗಾಂಗ ದಾನದಿಂದ ದೇಶದ ಐದು ಕಡೆಗಳಲ್ಲಿ ರೋಗಿಗಳಿಗೆ ಪುನರ್ಜನ್ಮ ದೊರೆತಿತ್ತು. ಅದರಲ್ಲಿ ಒಂದು ಕಿಡ್ನಿ ಮತ್ತು ಕಣ್ಣುಗಳನ್ನು ಭಾರತೀಯ ವಾಯುಪಡೆಯ ವಿಮಾನ ದೆಹಲಿಗೆ ಒಯ್ದು ಜೀವ ಉಳಿಸಲು ನೆರವಾಗಿತ್ತು. ಇದೀಗ ಪುಣೆಯಿಂದ ದೆಹಲಿಗೆ ಕಿಡ್ನಿಗಳು ಮತ್ತು ಲಿವರ್ ಸಾಗಿಸಿ ನೆರವಾಗಿದೆ.
- ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ

